ಬೆಂಗಳೂರು:ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿ ನೋಟಿಸ್ ಜಾರಿ ಮಾಡಲು ಮಹಿಳಾ ಆಯೋಗ ನಿರ್ಧರಿಸಿದೆ.
ತುಮಕೂರು ಜಿಲ್ಲೆ ತುರವೇಕೆರೆಯಲ್ಲಿ ಚುನಾವಣಾ ಪ್ರಚಾರ ಭಾಷಣದ ವೇಳೆ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಕುಮಾರಸ್ವಾಮಿ ಮಹಿಳೆಯರ ಬಗ್ಗೆ ಆಡಿದ ಮಾತುಗಳು ಈಗ ತೀವ್ರ ವಿವಾದ ಸೃಷ್ಟಿಸಿವೆ.
ಈ ಬಗ್ಗೆ ರಾಜ್ಯಾದ್ಯಂತ ಹೋರಾಟ ಮಾಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಈ ಮಧ್ಯೆ ಮಹಿಳಾ ಆಯೋಗ ಕುಮಾರಸ್ವಾಮಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು ನೋಟಿಸ್ ಜಾರಿ ಮಾಡಲು ನಿರ್ಧಾರ ಮಾಡಿದೆ.
‘ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಹಿಳೆಯರ ಘನತೆಗೆ ಧಕ್ಕೆ ತರುವ ಮಾತುಗಳನ್ನು ಆಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಹೇಳಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು ನೋಟಿಸ್ ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
