ಬೆಂಗಳೂರು: ಮಾ.27ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಮಧುಮೇಹದಿಂದ ಬಳಲುತ್ತಿ ರುವ ವಿದ್ಯಾರ್ಥಿಗಳು ಇನ್ಸುಲಿನ್​ನಂತಹ ವೈದ್ಯಕೀಯ ಸಲಕರಣೆ ಕೊಂಡೊಯ್ಯಲು ಅವಕಾಶ ಕಲ್ಪಿಸಲಾಗಿದೆ.
ಮಧುಮೇಹದಿಂದ ಬಳಲುವ ವಿದ್ಯಾರ್ಥಿಗಳಿಗೆ ಸಕ್ಕರೆ ಅಂಶ ನಿಯಂತ್ರಿಸುವ ಇನ್ಸುಲಿನ್ ಪಂಪ್ ಸೇರಿ ಮಾತ್ರೆಯನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗಲು ಅನುಮತಿ ನೀಡಬೇಕೆಂದು ವಿದ್ಯಾರ್ಥಿಗಳ ಪಾಲಕರು ಕೋರಿದ್ದರು. ಇನ್ಸುಲಿನ್ ಕೊಂಡೊಯ್ಯಲು ಪರೀಕ್ಷಾ ಕೇಂದ್ರಗಳ ಅಧೀಕ್ಷಕರಿಗೆ ವಿದ್ಯಾರ್ಥಿಗಳು ಮನವಿ ಮಾಡಿದರೆ, ಸಕ್ಕರೆ ಕಾಯಿಲೆ ಕುರಿತ ವೈದ್ಯರ ಸಲಹಾ ಪತ್ರವನ್ನು ಪರಿಶೀಲಿಸಿ ಅವಕಾಶ ನೀಡಲಿದ್ದಾರೆ ಎಂದು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಕ್ರಮಕ್ಕೆ ಮನವಿ: ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಆತಂಕ ಉಂಟು ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಪತ್ರ ಬರೆದಿದ್ದಾರೆ.
ಕರೊನಾ ಹೆಸರಲ್ಲಿ ಬ್ಯಾಂಕ್ ಖಾತೆಗೆ ಕನ್ನ!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
