ಬೆಂಗಳೂರುತಾಂತ್ರಿಕ ಶಿಕ್ಷಣ ಇಲಾಖೆಯು ಈ ವರ್ಷದಿಂದ ಡಿಪ್ಲೊಮೊದಲ್ಲಿ ಮುಂದುವರಿದ ತಂತ್ರಜ್ಞಾನ ಆಧಾರಿತ 8 ಹೊಸ ಕೋರ್ಸ್‌ಗಳನ್ನು ಆರಂಭಿಸುತ್ತಿದೆ.
ಈ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರು ಡಿಪ್ಲೊಮೊ ಸಿಇಟಿಯಲ್ಲಿ ಈ ಕೋರ್ಸ್‌ಗಳನ್ನು ಸೇರ್ಪಡೆ ಮಾಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪತ್ರ ಬರದು ನಿರ್ದೇಶನ ನೀಡಿದ್ದಾರೆ.
2021-22ನೇ ಸಾಲಿನಿಂದ ಪ್ರಾರಂಭವಾದ ಹೊಸ ಡಿಪ್ಲೊಮೊ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆದು 3 ವರ್ಷಗಳ ಡಿಪ್ಲೊಮೊ ಪೂರ್ಣಗೊಳಿಸಿದ ಅಭ್ಯರ್ಥಿಗಳು 2024-25ನೇ ಸಾಲಿನಿಂದ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷ/3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಬಹುದು. ಈ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸ ಡಿಪ್ಲೊಮೊ ಕೋರ್ಸ್‌ಗಳನ್ನು ಆರಂಭಿಸಲಾಗುತ್ತಿದೆ ಎಂದು ತಾಂತ್ರಿಕ ಶಿಕ್ಷಣ ನಿರ್ದೇಶಕರು ತಿಳಿಸಿದ್ದಾರೆ.
ಯಾವೆಲ್ಲ ಕೋರ್ಸ್‌ಗಳು:
ಸೈಬರ್ ಫಿಜಿಕಲ್ ಸಿಸ್ಟಂ ಆೃಂಡ್ ಸೆಕ್ಯುರಿಟಿುಡ್ ಪ್ರೊಸೆಸಿಂಗ್ ಆೃಂಡ್ ಪ್ರೆಸೆರ್ವೇಷನ್ಆಟೋಮಷಿನ್ ರಾೃಂಡ್ ರೊಬೊಟಿಕ್ಸ್ಗೇಮಿಂಗ್ ಆೃಂಡ್ ಅನಿಮೇಷನ್ಕ್ಲೌಂಡ್ ಕಂಪ್ಯೂಟಿಂಗ್ ಆೃಂಡ್ ಬಿಗ್ ಡೇಟಾಟ್ರಾವೆಲ್ ಆೃಂಡ್ ಟೂರಿಸಂಆಲ್ಟರ್ನೇಟ್ ಎನರ್ಜಿ ಟೆಕ್ನಾಲಜಿಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಆೃಂಡ್ ಎಲೆಕ್ಟ್ರಿಕಲ್ ವೆಹಿಕಲ್ ಟೆಕ್ನಾಲಜಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + ten =
Remember me
