ಬೆಂಗಳೂರು:ಎಲ್ಲ ಠೇವಣಿಗಳು ವಾಪಸ್, ಹೂಡಿಕೆಗೆ ನಿರ್ಬಂಧ, ಖಾತೆಗಳನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ಕಠಿಣ ನಿರ್ಧಾರ ಕೈಗೊಂಡು, ಸ್ಟೇಟ್ ಬ್ಯಾಂಕ್ ಆ್ ಇಂಡಿಯಾ ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಶಾಕ್ ನೀಡಿದೆ.
ರಾಜ್ಯ ಸರ್ಕಾರದ ಇಲಾಖೆಗಳು, ಉದ್ದಿಮೆಗಳು, ನಿಗಮ-ಮಂಡಳಿಗಳು, ಉದ್ದಿಮೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವ ವಿದ್ಯಾಲಯಗಳು, ಮತ್ತಿತರ ಸಂಸ್ಥೆಗಳಿಗೆ ಈ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.
ಎರಡೂ ಬ್ಯಾಂಕ್‌ಗಳ ಎಲ್ಲ ಶಾಖೆಗಳಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸಿ, ಎಲ್ಲ ಠೇವಣಿಗಳನ್ನು ತಕ್ಷಣದಿಂದಲೇ ಹಿಂಪಡೆಯಬೇಕು.
ಸ್ಟೇಟ್ ಬ್ಯಾಂಕ್ ಆ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗಳಲ್ಲಿ ಇನ್ನು ಮುಂದೆ ಯಾವುದೇ ಠೇವಣಿ ಹೂಡಿಕೆ ಮಾಡಬಾರದು ಎಂದು ತಿಳಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆಯಂತೆ ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ.ಪಿ.ಸಿ.ಜಾರ್ (ಆಯವ್ಯಯ ಮತ್ತು ಸಂಪನ್ಮೂಲ) ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ.
ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳಿಗೆ ಕ್ರಮವಹಿಸಲು ತಿಳಿಸಿದ್ದಾರೆ.
ಎರಡೂ ಬ್ಯಾಂಕ್‌ಗಳ ಶಾಖೆಗಳಲ್ಲಿನ ವಾಪಸ್ ಪಡೆದ ಠೇವಣಿಗಳು, ಖಾತೆ ಮುಕ್ತಾಯಗೊಳಿಸಿದ ವಿವರಗಳ ದೃಢೀಕರಣ ಸಹಿತ ನಿಗದಿತ ಅನುಬಂಧದಲ್ಲಿ ಭರ್ತಿ ಮಾಡಿ ಸೆಪ್ಟೆಂಬರ್ 20ರೊಳಗೆ ಆರ್ಥಿಕ ಇಲಾಖೆಗೆ ಸಲ್ಲಿಸಬೇಕು ಎಂಬ ಗಡುವು ವಿಧಿಸಲಾಗಿದೆ.
ರಾಜ್ಯ ಸರ್ಕಾರವೇ ತನ್ನ ಠೇವಣಿ ಹಿಂಪಡೆದು, ವಹಿವಾಟು ಸ್ಥಗಿತಗೊಳಿಸುವುದರಿಂದ ಈ ಬ್ಯಾಂಕ್‌ಗಳ ವಿಶ್ವಾಸರ್ಹಾತೆ ಬಗ್ಗೆ ಜನಸಾಮಾನ್ಯರಲ್ಲಿ ಸಂದೇಹ ಹುಟ್ಟಿ ಹಾಕುತ್ತದೆ.ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹು ಕೋಟಿ ರೂ.ಗಳ ಹಗರಣದಲ್ಲಿ ಯೂನಿಯನ್ ಬ್ಯಾಂಕ್ ತಗುಲಿ ಹಾಕಿಕೊಂಡಿದೆ.
ಬ್ಯಾಂಕ್ ಆಡಳಿತ ಮಂಡಳಿ ದೂರಿನ ಮೇರೆಗೆ ಸಿಬಿಐ ತನಿಖೆ ಪ್ರಗತಿಯಲ್ಲಿದೆ. ಈ ಹಿಂದೆ ಅನಧಿಕೃತ ಠೇವಣಿ, ಬಡ್ಡಿ ಲಪಟಾಯಿಸುವಿಕೆ, ದುರ್ಬಳಕೆ ಪ್ರಕರಣಗಳು ವರದಿಯಾಗಿವೆ.
ಹಣಕಾಸಿನ ವಹಿವಾಟು ವ್ಯತ್ಯಾಸವು ಸಾರ್ವಜನಿಕ ವಲಯದ ಬ್ಯಾಂಕಿಂಗ್ ವ್ಯವಸ್ಥೆಗೆ ದೊಡ್ಡ ಹೊಡೆತ ನೀಡಲಿದೆ ಎಂದು ಆರ್ಥಿಕ ವಲಯ ವಿಶ್ಲೇಷಿಸಿದೆ. ರಾಜ್ಯ ಸರ್ಕಾರದ ಕಠೋರ ನಿಲುವು ವ್ಯತಿರಿಕ್ತ ಪರಿಣಾಮಬೀರಲಿದೆ ಎಂಬ ಕಳವಳ ವ್ಯಕ್ತಪಡಿಸಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್, ರಾಜಾಜಿನಗರ ಶಾಖೆಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು 25 ಕೋಟಿ ರೂ. ಠೇವಣಿಯನ್ನು ಚೆಕ್ ಮೂಲಕ ಹೂಡಿಕೆ ಮಾಡಿತು.ಇದಕ್ಕೆ ಪ್ರತಿಯಾಗಿ ಇದೇ ಬ್ಯಾಂಕ್‌ನ ಮತ್ತೊಂದು ಶಾಖೆಯಾದ ಶಂಕ್ರೀ ಬ್ಯಾಂಕ್ ಸೇಲಂನಿಂದ 12 ಕೋಟಿ ರೂ.ಗಳ ಒಂದು ನಿಶ್ಚಿತ ಠೇವಣಿ, 13 ಕೋಟಿ ರೂ.ಗಳ ಮತ್ತೊಂದು ನಿಶ್ಚಿತ ಠೇವಣಿ ರಸೀತಿ ನೀಡಿತು.
ಅವಧಿ ಮುಕ್ತಾಯದ ಬಳಿಕ 13 ಕೋಟಿ ರೂ. ನಗದೀಕರಣವಾಯಿತು. ಎರಡನೇ ಠೇವಣಿ ಮರು ಪಾವತಿಯಾಗಲಿಲ್ಲ, ಪತ್ರ ವ್ಯವಹಾರ, ಸಭೆ ನಡೆಸಿದರೂ ಬ್ಯಾಂಕ್ ಅಧಿಕಾರಿಗಳು ಸ್ಪಂದಿಸಲಿಲ್ಲ. ಅಂತಿಮವಾಗಿ ವಂಚನೆ ಪ್ರಕರಣ ದಾಖಲಾಗಿ, 10 ವರ್ಷಗಳಿಂದಲೂ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.
ಎಸ್‌ಬಿಐ ಅವೆನ್ಯೂ ರಸ್ತೆ ಶಾಖೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ 2013ರಲ್ಲಿ 10 ಕೋಟಿ ರೂ. ನಿಶ್ಚಿತ ಠೇವಣಿಯಿರಿಸಿತ್ತು. ಅವಧಿ ಮುಕ್ತಾಯಕ್ಕೆ ಮುನ್ನವೇ ನಕಲಿ ದಾಖಲೆಗಳ ಮೂಲಕ ಖಾಸಗಿ ಕಂಪನಿಯೊಂದರ ಸಾಲಕ್ಕೆ ಹೊಂದಾಣಿಕೆ ಮಾಡಲಾಗಿದೆ.
ಈ ಕುರಿತು ಬ್ಯಾಂಕ್ ಅಧಿಕಾರಿಗಳ ಜತೆಗೆ ಪತ್ರ ವ್ಯವಹಾರ, ಸಭೆಗಳಾದರೂ ಪ್ರಯೋಜನವಾಗದೆ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ವಿಚಾರಣೆಯಲ್ಲಿದೆ.
ಮಹಾಲೆಕ್ಕ ಪರಿಶೋಧಕರ ವರದಿಯಲ್ಲಿ ತೀವ್ರವಾದ ಆಕ್ಷೇಪಣೆಗಳು, ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯಲ್ಲಿ ಅನೇಕ ಬಾರಿ ಚರ್ಚೆಯಾಗಿದೆ. ಠೇವಣಿ ವಾಪಸ್, ಹೂಡಿಕೆ ನಿರ್ಬಂಧ ಮತ್ತು ಖಾತೆಗಳ ಮುಕ್ತಾಯ ಕುರಿತು ಸಮಿತಿಯ ಸಭಾ ನಡವಳಿಗಳಲ್ಲಿ ದಾಖಲಾಗಿವೆ. ಈ ಕಾರಣಕ್ಕೆ ರಾಜ್ಯ ಸರ್ಕಾರ ಇಂತಹ ನಿರ್ಧಾರ ಕೈಗೊಂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 16 =
Remember me
