ಹಾವೇರಿ:ಲಂಚ ಪಡೆಯುವಾಗ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ರೆಡ್​​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದು, ಎರಡು ಸಾವಿರ ರೂ. ಹಣವನ್ನು ಲಂಚವಾಗಿ ಪಡೆಯುವಾಗ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿರುವ ನಾಡಕಚೇರಿಯಲ್ಲಿ ಲೋಕಾ ಅಧಿಕಾರಿಗಳು ರೇಡ್​ ನಡೆಸಿದ್ದಾರೆ.
ಇದನ್ನೂ ಓದಿ:ಭದ್ರವಾಗಿದೆ ದೇಶದ ಆರ್ಥಿಕತೆ: ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್ ಶ್ಲಾಘನೆ
ಉಪ ತಹಶೀಲ್ದಾರ್ ಸೋಮಪ್ಪ ನಾಯ್ಕರ್ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿರುವ ವ್ಯಕ್ತಿ. ರೈತರಿಗೆ ದಾಖಲೆ ಪತ್ರಗಳನ್ನು ಕೊಡುವುದಕ್ಕೆ ಐದು ಸಾವಿರ ರೂ. ಡಿಮ್ಯಾಂಡ್ ಇಟ್ಟಿದ್ದಾರೆ. ಅದರ ಅನ್ವಯ ಇಂದು ಮುಂಗಡವಾಗಿ ಎರಡು ಸಾವಿರ ರೂ. ಹಣ ಪಡೆಯುವಾಗ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಹಾವೇರಿಯ ನಿವಾಸದ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.
ಪ್ರತಿಯೊಂದು ಫೈಲ್ ಮುಂದೇ ಹೋಗಬೇಕು ಎಂದರೆ ಹಣ ಕೊಡಬೇಕು ಎಂದು ಡಿಮ್ಯಾಂಡ್ ಇಡುತ್ತಿದ್ದ ಸೋಮಪ್ಪ ವಿರುದ್ಧ ಇದೀಗ ಅಧಿಕಾರಿಗಳು ಬಂಧಿಸಿದ್ದಾರೆ. ದೂರು ಬಂದ ಹಿನ್ನಲೆ ಖಚಿತ ಮಾಹಿತಿ ಮೇರೆಗೆ ಟ್ರ್ಯಾಪ್ ಮಾಡಲಾಗಿದೆ. ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.
ಈಗ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅಲ್ವಾ? ಅಯ್ಯೋ ಇದು ನನಗೆ ಗೊತ್ತೇ ಇಲ್ಲ ಎಂದ ಸ್ಟಾರ್​ ನಟ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × 3 =
Remember me
