ದೇವದುರ್ಗ(ರಾಯಚೂರು):ಮರ್ಯಾದೆ ಪುರುಷ ಶ್ರೀರಾಮನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅನ್ಯಕೋಮಿನ ಯುವಕನೊಬ್ಬ ಶ್ರೀರಾಮ ಹಾಗೂ ಹಿಂದೂ ಕಾರ್ಯಕರ್ತರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದು, ವಾಟ್ಸ್ಆ್ಯಪ್ ಸ್ಟೇಟಸ್​ನಲ್ಲಿ ಹಾಕಿಕೊಂಡಿದ್ದಾನೆ. ಇದು ಹಿಂದು ಧರ್ಮಕ್ಕೆ ಮಾಡಿದ ಅಪಮಾನ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಪಟ್ಟಣದ ಪೊಲೀಸ್ ಠಾಣೆ ಮುಂದೆ ಹಿಂದುಪರ ಸಂಘಟನೆಯ ಮುಖಂಡರು ಬುಧವಾರ ತಡರಾತ್ರಿ ಪ್ರತಿಭಟನೆ ನಡೆಸಿದ್ದರು.
ಇದನ್ನೂ ಓದಿರಿಡಿಜೆ ಹಳ್ಳಿ ಗಲಭೆ ಆರೋಪಿ, ಎಸ್​ಡಿಪಿಐ ಕಾರ್ಯಕರ್ತ ಖಾಲಿದ್​ ಅರೆಸ್ಟ್
ತಡರಾತ್ರಿ ಠಾಣೆಯ ಮುಂದೆ ಸುಮಾರು ಐವತ್ತಕ್ಕೂ ಹೆಚ್ಚು ಮುಖಂಡರು ಜಮಾಯಿಸಿದ್ದರಿಂದ ಬಿಗುವಿನ ವಾತಾವರಣ ಉಂಟಾಗಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನ ಅರಿತರಾಯಚೂರು ಎಸ್ಪಿ ಪ್ರಕಾಶ್ ನಿಕಮ್ ಹಾಗೂ ಅಡಿಷನಲ್ ಎಸ್ಪಿ ಶ್ರೀ ಹರಿಬಾಬು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.
ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಎಸ್.ಎಸ್. ಹುಲ್ಲೂರ್, ಹಿಂದು ಕಾರ್ಯಕರ್ತರ ಜೊತೆ ಚರ್ಚಿಸಿದರು. ಆರೋಪಿ ಜಹೀರ್​ನನ್ನು ಬಂಧಿಸಿದ್ದು, ಮುಂದಿನ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು. ಇದರಿಂದ ವಾತಾವರಣ ತಿಳಿಯಾಯಿತು.
ಆರೋಪಿ ಜಹೀರ್​, ಈ ಹಿಂದೆ ಸಾಕಷ್ಟು ಕೃತ್ಯಗಳಲ್ಲಿ ಭಾಗಿಯಾಗಿದ್ದ. ಕಳ್ಳತನ ಮಾಡುವ ಜೊತೆಗೆ ಹುಡುಗಿಯರನ್ನ ಚುಡಾಯಿಸುತ್ತಿದ್ದ. ಈತನ ವಿರುದ್ಧ ಈಗಾಗಲೇ ಎರಡ್ಮೂರು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.
https://www.facebook.com/DighvijayNews/videos/652054025430535/
‘ಜಮೀರ್​ ಅಹ್ಮದ್​ ಬೆಂಗಳೂರು ಗಲಭೆಯ ಡೈರೆಕ್ಟರ್​, ಪ್ರೊಡ್ಯೂಸರ್​…’

ಆರೋಪಿ ನವೀನ್​ನನ್ನು ಗಲಭೆಕೋರರಿಂದ ಬಚಾವ್​ ಮಾಡಿದ್ದೇ ಅಖಂಡ ಶ್ರೀನಿವಾಸ ಮೂರ್ತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − four =
Remember me
