ಬೆಂಗಳೂರು:ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆ ಕೊಡುತ್ತಿರುವ ಸಂಸದ ಅನಂತಕುಮಾರ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ಪ್ರಧಾನಿ ಮೋದಿಯವರು ಮುಕ್ತ ಕಂಠದಿಂದ ಹೊಗಳಿದ್ದಾರೆ. ಸಂವಿಧಾನ ಇಲ್ಲದೇ ಹೋಗಿದ್ದಾರೆ ನಾನು ಪ್ರಧಾನಮಂತ್ರಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ. ಆದರೆ ಅವರ ಪಕ್ಷದ ಸಂಸದರೊಬ್ಬರು ಪದೇ ಪದೆ ಸಂವಿಧಾನ ಬದಲಾವಣೆಯ ಮಾತುಗಳನ್ನು ಆಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ನಾನು ಕಾಂಗ್ರೆಸ್ ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಪಕ್ಷಕ್ಕೆ ಮುಜುಗರ ತರುವ ಮಾತುಗಳನ್ನು ಆಡಿದರೆ ಸರಿಪಡಿಸಬೇಕು. ಆದರೆ ಸಂಸದ ಅನಂತಕುಮಾರ್ ಅವರ ಹೇಳಿಕೆಯಿಂದ ದೂರ ಇದ್ದೀವಿ ಎಂದು ಹೇಳಿದರೆ ಸಾಲುವುದಿಲ್ಲ. ಪಕ್ಷದಿಂದ ಹೊರಹಾಕಬೇಕು ಅಥವಾ ನಿಯಂತ್ರಿಸಬೇಕು. ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದು ಹೇಳಿದರು.
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸರಿಯಾದ ಅಭ್ಯರ್ಥಿಯೇ ಇಲ್ಲ ಎಂದು ಬಿಜೆಪಿಯವರು ಹೇಳಿಕೊಳ್ಳಬಹುದು. ಆದರೆ ಚುನಾವಣೆ ನಂತರ ವಾಸ್ತವಾಂಶ ಏನೆಂಬುದು ಗೊತ್ತಾಗಲಿದೆ. ಸಚಿವ ಎಚ್.ಸಿ.ಮಹದೇವಪ್ಪ ಅವರ ಸ್ಪರ್ಧೆಯ ಮಾತುಗಳು ಕೇಳಿಬರುತ್ತಿವೆ. ನನಗೆ ಟಿಕೆಟ್ ಬೇಡ, ಮಗನಿಗೆ ನೀಡುವಂತೆ ಮಹದೇವಪ್ಪ ಅವರು ಹೇಳುತ್ತಿದ್ದಾರೆ. ಅಂತಿಮ ತೀರ್ಮಾನ ಹೈಕಮಾಂಡ ಮಾಡಲಿದೆ ಎಂದು ತಿಳಿಸಿದರು.
ತುಮಕೂರಿನಲ್ಲಿ ಮುದ್ದಹನುಮೇಗೌಡ ಅವರಿಗೆ ಟಿಕೆಟ್ ನೀಡಿರುವುದಕ್ಕೆ ವಿರೋಧ ಮಾಡುತ್ತಿರುವವರ ಮನವೊಲಿಸುವ ಕೆಲಸವನ್ನು ಆರಂಭಿಸಲಾಗಿದೆ. ಚುನಾವಣೆ ಎಂದ ಮೇಲೆ ಅಸಮಾದಾನ ಸಹಜ. ಎಲ್ಲರನ್ನು ಜತೆಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಡಾ.ಪರಮೇಶ್ವರ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − twelve =
Remember me
