ಬೆಂಗಳೂರು:ರಾಜ್ಯ ವಿಧಾನಸಭಾ ಚುನಾಣೆಯಲ್ಲಿ ಕಾಂಗ್ರೆಸ್​ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್​ ಸಿದ್ಧತೆ ನಡೆಸಿದೆ. ಈ ಸಂಬಂಧ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಗ್ರಹಣಕ್ಕೂ ಮುನ್ನ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ.
ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿ ಐ.ಎಸ್.ಎನ್​.​ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರಿ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದರು. ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ 5 ಗ್ಯಾರಂಟಿಗಳನ್ನು ಜಾರಿಗೆ ಮಾಡಲು ಮುಂದಾಗಿದ್ದು, ಅದಕ್ಕೂ ಮುನ್ನ ಈಗ ಅಧಿಕಾರಿಗಳ ಜತೆ ನಿಯೋಜಿತ ಸಿಎಂ ಚರ್ಚಿಸಿದ್ದಾರೆ.
ಇದನ್ನೂ ಓದಿ:ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಹುಲ್​, ಪ್ರಿಯಾಂಕಾ ಗಾಂಧಿ; ಡಿಕೆಶಿ ಸ್ವಾಗತ…
ಮೊದಲನೇ ಗ್ಯಾರಂಟಿಯಾಗಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತರುತ್ತೇವೆ ಎಂದು ಕಾಂಗ್ರೆಸ್​ ಹೇಳಿದೆ. ಈ ಮೂಲಕ ಪ್ರತಿ ತಿಂಗಳು ಮಹಿಳೆಯರಿಗೆ 2000 ರೂಪಾಯಿ ಅಕೌಂಟ್ ಸೇರಲಿದೆ ಎಂದು ಭರವಸೆ ನೀಡಿದೆ. ಎರಡನೇ ಗ್ಯಾರಂಟಿಯಾಗಿ ಮನೆ ಮನೆಗೂ 200 ಯೂನಿಟ್ ವಿದ್ಯುತ್ ಉಚಿತ ನೀಡುತ್ತಾರಂತೆ. ಮೂರನೇ ಗ್ಯಾರಂಟಿ ಏನೆಂದರೆ, ಅನ್ನ ಭಾಗ್ಯದ ಮೂಲಕ ಪ್ರತಿ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದೆ. ನಾಲ್ಕನೇ ಗ್ಯಾರಂಟಿ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3000 ರೂ. ನೀಡಲಾಗುವುದು. ಡಿಪ್ಲೊಮಾ ಪದವೀಧರರಿಗೆ ಒಂದೂವರೆ ಸಾವಿರ ರೂಪಾಯಿ ನೀಡುತ್ತಾರಂತೆ. ಐದನೇ ಗ್ಯಾರಂಟಿಯಾಗಿ ಎಲ್ಲ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣವನ್ನು ಕಾಂಗ್ರೆಸ್​ ಘೋಷಿಸಿದೆ.
ಅಂದಹಾಗೆ ಈ ಗ್ಯಾರಂಟಿಗಳನ್ನು ಈಡೆರಿಸಲು ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 62 ಸಾವಿರ ಕೋಟಿ ರೂ. ಅವಶ್ಯಕತೆ ಇದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಕಾಪಾಡಿಕೊಂಡು ಐದು ಗ್ಯಾರಂಟಿಗಳನ್ನು ಕಾಂಗ್ರೆಸ್​ ಹೇಗೆ ಜಾರಿಗೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.(ಏಜೆನ್ಸೀಸ್​)
ಕಾಂಗ್ರೆಸ್​ನ 6ನೇ ಗ್ಯಾರಂಟಿ ಘೋಷಣೆ ಮಾಡಿದ ಪ್ರಿಯಾಂಕ ಖರ್ಗೆ!

ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕಿದೆ… ನನಗೆ ಯಾವುದೇ ಅಸಮಾಧಾನ ಇಲ್ಲ: ಡಾ.ಜಿ.ಪರಮೇಶ್ವರ್

ಸಿದ್ದು, ಡಿಕೆಶಿ ಜತೆ 8 ಸಚಿವರಿಂದ ಪ್ರಮಾಣ ವಚನ: ಮೊದಲ ಸಚಿವ ಸಂಪುಟದಲ್ಲಿ 6 ಸಮುದಾಯಕ್ಕೆ ಅವಕಾಶ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve + 18 =
Remember me
