ಬೆಂಗಳೂರು:ಅಬಕಾರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಬಕಾರಿ ರಕ್ಷಕರು ಈಗ ಪೇದೆಯಾಗಿದ್ದಾರೆ. ಅರ್ಥಾತ್​ ಅವರ ಪದನಾಮವನ್ನು ಮರು ನಾಮಕಾರಣ ಮಾಡಲಾಗಿದೆ. ಆತ್ಮವಿಶ್ವಾಸ ಹಾಗೂ ದಕ್ಷತೆ ಹೆಚ್ಚಿಸುವ ಸಲುವಾಗಿ ಅಬಕಾರಿ ರಕ್ಷಕರನ್ನು ಅಬಕಾರಿ ಪೇದೆ ಹಾಗೂ ಅಬಕಾರಿ ಹಿರಿಯ ರಕ್ಷಕರನ್ನು ಅಬಕಾರಿ ಮುಖ್ಯ ಪೇದೆ ಎಂದು ಮರು ನಾಮಕಾರಣ ಮಾಡಿ ಮಂಗಳವಾರ ಇಲಾಖೆ ಆದೇಶ ಹೊರಡಿಸಿದೆ.
ನೆರೆಯ ಮಹಾರಾಷ್ಟ್ರ ಹಾಗೂ ತೆಲಂಗಾಣದಲ್ಲಿ ಅಬಕಾರಿ ರಕ್ಷಕರನ್ನು ಅಬಕಾರಿ ಕಾನ್​ಸ್ಟೆಬಲ್ ಎಂದು ಕರೆಯಲಾಗುತ್ತಿದೆ. ಪೊಲೀಸ್ ಇಲಾಖೆ ಮಾದರಿಯಲ್ಲಿ ಕಾರ್ಯನಿರ್ವಹಣೆ ಸ್ವರೂಪ ಕೂಡ ಒಂದೇ ರೀತಿ ಇದೆ. ಅಲ್ಲದೆ, ಪೊಲೀಸ್ ಇಲಾಖೆಯಲ್ಲಿ ಬಳಸಲಾಗುತ್ತಿರುವ ಪದನಾಮಗಳ ಮಾದರಿಯಲ್ಲಿ ಅಬಕಾರಿ ರಕ್ಷಕರು ಹಾಗೂ ಅಬಕಾರಿ ಹಿರಿಯ ರಕ್ಷಕರ ಪದನಾಮವನ್ನು ಮರು ನಾಮಕಾರಣ ಮಾಡುವಂತೆ ರಕ್ಷಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ:ಇವರಿಬ್ಬರು ಸಿಕ್ಕಿ ಬೀಳದಿದ್ದರೆ ವರ್ಷಾಂತ್ಯದ ಮಧ್ಯರಾತ್ರಿ ಅದೇನಾಗಿರುತ್ತಿತ್ತೋ!?
ಅಬಕಾರಿ ರಕ್ಷಕರ ಪದನಾಮ ಬದಲಿಸಲು ಸಿಬ್ಬಂದಿ ಈ ಹಿಂದಿನ ಸರ್ಕಾರಗಳಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿರಲಿಲ್ಲ. ನಾನು ಸರ್ಕಾರಿ ಅಧಿಕಾರಿಯಾಗಿ ಕೆಲಸ ಮಾಡಿದ್ದರಿಂದ ಸಿಬ್ಬಂದಿಯ ಕಷ್ಟಗಳು ಚೆನ್ನಾಗಿ ಗೊತ್ತಿದೆ. ಹಾಗಾಗಿ, ಸಿಬ್ಬಂದಿ ಸಲ್ಲಿಸಿದ ಮನವಿಯನ್ನು ಪುರಸ್ಕರಿಸಿ ಪದನಾಮವನ್ನು ಮರುನಾಮಕಾರಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಿಬ್ಬಂದಿಯ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಸಚಿವ ಎಚ್.ನಾಗೇಶ್ ತಿಳಿಸಿದ್ದಾರೆ.
ರೈತರು ಪ್ರತಿಭಟಿಸುತ್ತಿರುವ ಸ್ಥಳದಲ್ಲೇ ‘ಹಾಟ್​ ಸ್ಪಾಟ್​’!
ಮೋದಿ ಉದ್ಘಾಟಿಸಿದ ಈ ಸುರಂಗ ಮಾರ್ಗದಲ್ಲಿ ಭಾನುವಾರ ಏನಾಯ್ತು ಗೊತ್ತಾ?!
ಚೆನ್ನಾಗ್ ಓದು ಎಂದು ಮನೇಲಿ ಹೇಳಿದ್ದಕ್ಕೆ ಏನ್​ ಮಾಡ್ದ ನೋಡಿ ಈ ಪೋರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
