ಬೆಂಗಳೂರು:ನಾಡುಕಂಡ ಧೀಮಂತ ಆಡಳಿತಗಾರ, ಬಡವರು ಹಾಗೂ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದ ಅಪರೂಪದ ಜನನಾಯಕ, ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 105ನೇ ಜನ್ಮದಿನದ ಸಂಭ್ರಮ ಇಂದು. ಈ ದಿನವೇ ಸಿಎಂ ಯಡಿಯೂರಪ್ಪ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.
ಎರಡು ವರ್ಷಗಳಿಂದ ಪ್ರತಿಷ್ಠಿತ ‘ದೇವರಾಜ ಅರಸು ಪ್ರಶಸ್ತಿ’ ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ರಾಜ್ಯದ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಅರಸು ಅವರಿಗೆ ಅಗೌರವ ತೋರಿದ ಮುಖ್ಯಮಂತ್ರಿ ಯಡಿಯೂರಪ್ಪಗೆ ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ? ಎಂದು ಟ್ವಿಟರ್​ ಮೂಲಕ ಪ್ರಶ್ನಿಸಿದ್ದಾರೆ.
ಇದನ್ನೂ ಓದಿರಿಕರಡಿ ಕಣ್ಣೀರಿಗೆ ಕರಗಿದ ರೈತರು!
ಇಷ್ಟಕ್ಕೆ ಸುಮ್ಮನಾಗದ ಸಿದ್ದರಾಮಯ್ಯ, ಡಿ.ದೇವರಾಜ ಅರಸು ಮೇಲೆ ನಿಮಗೆ ಒಂದಿಷ್ಟಾದರೂ ಗೌರವ ಇದ್ದರೆ ಮೊದಲು ಅವರು ಜಾರಿಗೆ ತಂದಿದ್ದ ಉಳುವವನನ್ನೇ ಭೂ ಒಡೆಯನನ್ನಾಗಿ ಮಾಡುವ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ‌ಮಾಡಿ ಉಳ್ಳವನಿಗೆ ಭೂಮಿ ನೀಡಲು ಹೊರಟಿರುವ ನಿಮ್ಮ ತೀರ್ಮಾನವನ್ನು ಹಿಂದಕ್ಕೆ ಪಡೆಯಿರಿ ಎಂದು ಆಗ್ರಹಿಸಿದ್ದಾರೆ.
ಎರಡು ವರ್ಷಗಳಿಂದ ಪ್ರತಿಷ್ಠಿತ'ದೇವರಾಜ ಅರಸು ಪ್ರಶಸ್ತಿ' ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ@BJP4Karnatakaಸರ್ಕಾರದ ನಡೆ ಖಂಡನೀಯ.
ಅರಸು ಅವರಿಗೆ ಅಗೌರವ ತೋರಿದ@CMofKarnatakaಅವರಿಗೆ ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ?1/2#DevarajUrs
— Siddaramaiah (@siddaramaiah)August 20, 2020

ಆರೋಪಿ ನವೀನ್​ನನ್ನು ಗಲಭೆಕೋರರಿಂದ ಬಚಾವ್​ ಮಾಡಿದ್ದೇ ಅಖಂಡ ಶ್ರೀನಿವಾಸ ಮೂರ್ತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − sixteen =
Remember me
