ಬೆಂಗಳೂರು:ಜೆಡಿಎಸ್‍ಗೆ ಅಧಿಕಾರ ತಪ್ಪಿಸಲು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಹಾಗೂ ಬಿಜೆಪಿ ವತಿಯಿಂದ ರಾಮನಗರದಲ್ಲಿ ಪ್ರತಿಭಟನೆ ಮಾಡಿದಕ್ಕೆ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕೇಸ್ ದಾಖಲಿಸುವ ಬಗ್ಗೆ ಡಿಜಿಪಿ ಕಚೇರಿಯಲ್ಲಿ ರಾತ್ರಿ 11 ಗಂಟೆವರೆಗೂ ಚರ್ಚೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಇದನ್ನೂ ಓದಿ:ವಾಲ್ಮೀಕಿ ನಿಗಮ ಹಗರಣ: ಸರ್ಕಾರದಿಂದಲೇ ಚಂದ್ರಶೇಖರ್ ಜೀವ ಹರಣ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು, ಎಚ್.ಡಿ. ದೇವೆಗೌಡರ ಕುಟುಂಬದಲ್ಲಿ ಎಲ್ಲರನ್ನು ಮುಗಿಸಿದ್ದಿವಿ.‌ ನಿಖಿಲ್ ಒಬ್ಬ ಉಳಿದಿದ್ದಾನೆ. ಅವನನ್ನೂ ಎ1 ಆರೋಪಿ ಮಾಡುಲು ಹೊರಟ್ಟಿದಿರಾ? ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಸಚಿವರು ಹೇಳಿದ್ರು ಅಂತ ಡಿಜಿಪಿ ಏನು ಮಾಡಲು ಹೊರಟಿದ್ದೀರಿ? ನಮ್ಮ ರಾಜ್ಯದ ಡಿಜಿಪಿ ಒಬ್ಬ ಕಾನ್ಸ್ ಟೇಬಲ್ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು. ಒಂದೂವರೆ ವರ್ಷದಿಂದ ಮಾಡಿರುವ ಕೆಲಸ ಬಿಡಿ. ಇನ್ನು ಮುಂದಾದರೂ ಜನರ ಪರವಾಗಿ ಕೆಲಸ ಮಾಡಿ. ಹಿಂದುಳಿದ ವರ್ಗಗಳು ಮೆಚ್ಚುವ ಕೆಲಸ ಮಾಡಿ. ನಿಮ್ಮ ಆರ್ಥಿಕ ಸಲಹೆಗಾರರು ಏನು ಹೇಳಿದ್ದಾರೆ. ಅಭಿವೃದ್ಧಿಗೆ ಹಣವಿಲ್ಲ ಅಂತ ಹೇಳಿದ್ದಾರೆ. ನಾನು ಆರ್ಥಿಕ ಸಲಹೆಗಾರನಾಗಿದ್ದಕ್ಕೆ ಕ್ಷೇತ್ರದ ಅಭಿವೃದ್ಧಿಗೆ ಹಣ ತಂದಿದ್ದೀನಿ ಎಂದಿದ್ದಾರೆ. ಇನ್ನುಳಿದ ಶಾಸಕರು ಏನು ಮಾಡಬೇಕು. ಇದು ನಾವು ಹೇಳಿಲ್ಲ, ನಿಮ್ಮ ಆರ್ಥಿಕ ಸಲಹೆಗಾರರೇ ಹೇಳಿದ್ದಾರೆ ಎಂದು ಅವರು ಟೀಕಿಸಿದರು.
ಈಗ ಒಂದು ಇಲಾಖೆ ಮಾತ್ರ ಕಾಣಿಸ್ತಾ ಇದೆ.‌ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದಕ್ಕೆ ಹೊರಗೆ ಬಂದಿದೆ. ಸಿಎಜಿ ವರದಿ ಇಟ್ಟುಕೊಂಡು ಏನು ಮಾಡೋಕೆ ಆಗುತ್ತದೆ. ಈ ರೀತಿಯ ಪ್ರಕರಣದಲ್ಲಿ ಡಿಜಿಪಿಯವರು ಆ ಕಚೇರಿಯನ್ನು ಪೇದೆ ಕಚೇರಿ ಮಾಡಿದ್ದಾರೆ. ಡಿಜಿಪಿ ಕೆಲಸ ಮಾಡ್ತಾ ಇದ್ದೀರಾ ಅಥವಾ ಪೇದೆ ಕೆಲಸ ಮಾಡ್ತಾ ಇದ್ದೀರಾ ಎಂದು ಡಿಜಿಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಟಿ.ಎ.ಶರವಣ, ಶಾಸಕ ಶರನುಗೌಡ ಕಂದಕೂರ, ಪಕ್ಷದ ಹಿರಿಯ ಮುಖಂಡರಾದ ಪ್ರಕಾಶ್, ರವೀಶ್ ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
‘ಸತ್ತವರ ಹೆಸರಿನಲ್ಲಿ ಮುಡಾ ಜಮೀನು ಡಿ ನೋಟಿಫಿಕೇಷನ್’: ಸಿಎಂ ಕುಟುಂಬದ ವಿರುದ್ಧ ದಾಖಲೆ ಸಮೇತ ಆರೋಪ ಮಾಡಿದ ಎಚ್​ಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
