ಬೆಂಗಳೂರು:ಮೋದಿ ಅವರು ಪುಣ್ಯ ಮಾಡಿಕೊಂಡು ಬಂದಿದ್ದಾರೆ. ನಿಯಮ, ನಿಷ್ಠೆ, ಶಿಸ್ತಿನಿಂದ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸ್ತ್ರೋಕ್ತವಾಗಿ ಶ್ರದ್ಧೆಯಿಂದ ಎಲ್ಲ ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ. ನಾನು ಕೂಡ ಇಂತಹ ವ್ರತಾಚರಣೆ ಮಾಡಿರಲಿಲ್ಲ. ಮೋದಿಗೆ ಅವರಿಗೆ ದೈವ ಶಕ್ತಿ ಇದೆ ಎಂದು ಹೇಳಿದರು.
ನರೇಂದ್ರ ಮೋದಿ ಅವರಿಂದ 11 ದಿನಗಳ ವ್ರತಾಚರಣೆ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ ದೇವೇಗೌಡರು, ಮೋದಿ ಅವರು ನಿಷ್ಠೆಯಿಂದ, ಕ್ರಮಬದ್ಧತೆಯಿಂದ ವ್ರತಾಚರಣೆ ಮಾಡುತ್ತಿದ್ದಾರೆ. ಸೀತಾಮಾತೆ ಅಪಹರಣ ಮಾಡಿದ ನಾಸಿಕ್‌ನಿಂದ ಅವರು ವ್ರತಾಚರಣೆ ಶುರು ಮಾಡಿದ್ದಾರೆ. ಅಲ್ಲಿ ಕರಿರಾಮ ಅಂತ ವಿಗ್ರಹ ಸ್ಥಾಪನೆ ಮಾಡಿದ್ದಾರೆ ಎಂದರು.
ನಾನು ಕೂಡ ರಾಮಮಂದಿರ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಶೇ.99 ನಾನು ಹೋಗುತ್ತೇನೆ. ನನ್ನ ಶ್ರೀಮತಿ ಜತೆ ಹೋಗುವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಜನವರಿ 22ರ ಬಳಿಕ ರಾಮಮಂದಿರಕ್ಕೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಹೇಳಿಕೆಯನ್ನು ಸ್ವಾಗತ ಮಾಡುತ್ತೇನೆ. ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಮಾಡಲು ಹೇಳಿದ್ದಾರೆ. ಇದು ಒಳ್ಳೆಯ ವಿಚಾರ. ಸ್‌ಟಾ ಹಿಂದುತ್ವವೋ, ಇನ್ನೊಂದೋ ಗೊತ್ತಿಲ್ಲ. ಸಿದ್ದರಾಮಯ್ಯ ರಾಮಮಂದಿರಕ್ಕೆ ಹೋಗುವ ಹೇಳಿಕೆ ಸ್ವಾಗತಾರ್ಹ ಎಂದು ದೇವೇಗೌಡ ತಿಳಿಸಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 4 =
Remember me
