ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿರುವ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಘಾತಕ್ಕೊಳಗಾಗಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಜೆಡಿಎಸ್​ ಕಾರ್ಯಕರ್ತರಿಗೊಂದು ಪತ್ರ ಬರೆದು ಮನವಿ ಮಾಡಿದ್ದಾರೆ.
ಮೇ 18ರಂದು ದೇವೇಗೌಡರು 92ನೇ ವಸಂತಕ್ಕೆ ಕಾಲಿಡಲಿದ್ದು, ಈ ನಿಟ್ಟಿನಲ್ಲಿ ತಾವು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಆರ್​ಸಿಬಿ ವಿರುದ್ಧ ನಾನು ಆಡಿದ್ದರೆ ಇಷ್ಟೊತ್ತಿಗೆ….; ಲಖನೌ ವಿರುದ್ಧದ ಪಂದ್ಯದ ಬಳಿಕ​ ಶಾಕಿಂಗ್​ ಹೇಳಿಕೆ ಕೊಟ್ಟ ರಿಷಭ್​
ಅಭಿಮಾನಿಗಳು ಹಾಗೂ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರಲ್ಲಿ ನನ್ನ ವಿನಂತಿ. ಇದೇ ತಿಂಗಳ 18 ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ.
ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + three =
Remember me
