ಬೆಂಗಳೂರು:ಸಮುದಾಯದ ಕಟ್ಟಕಡೆಯ ವ್ಯಕ್ತಿ ಜೀವನಮಟ್ಟ ಸುಧಾರಿಸಿ ಅಭಿವೃದ್ಧಿ ಹೊಂದಿದ ಭಾರತ ಕಟ್ಟುವುದು ಪ್ರಧಾನಿ ನರೇಂದ್ರ ಮೋದಿ ಸಂಕಲ್ಪವಾಗಿದೆ ಎಂದು ಕೇಂದ್ರ ಕಲ್ಲಿದ್ದಲು, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಶಿವಾಜಿನಗರ ವಿಧಾನಸಭೆ ಕ್ಷೇತ್ರದ ವಸಂತನಗರ ವಾರ್ಡ್‌ನಲ್ಲಿ ಭಾನುವಾರ ಏರ್ಪಡಿಸಿದ್ದ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಯ ಡಿಜಿಟಲ್ ವಾಹನ ವೀಕ್ಷಿಸಿದರು. ನಂತರ ನೆರೆದ ಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಿದರು.
ಯೋಜನೆಗಳ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು. ಅಭಿವೃದ್ಧಿಯ ಲ ಸಮಾನವಾಗಿ ಹಂಚಿಕೆಯಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಇಚ್ಛೆಯಾಗಿದ್ದು, ಕಳೆದ ಒಂಭತ್ತು ಸಾಧನೆಗಳು ಎಲ್ಲವನ್ನೂ ಸಾರುತ್ತವೆ ಎಂದರು.
ಜನಪರ ಯೋಜನೆ, ಕಾರ್ಯಕ್ರಮಗಳು ಜನರಿಗೆ ತಲುಪಿರುವುದನ್ನು ಖಚಿತಪಡಿಸಿಕೊಳ್ಳುವುದು ಹಾಗೂ ವಂಚಿತರಿಗೆ ತಲುಪಿಸುವುದು ಯಾತ್ರೆಯ ಉದ್ದೇಶವಾಗಿದೆ ಎಂದು ಹೇಳಿದರು.
ನೈಸರ್ಗಿಕ, ಮಾನವ ಸಂಪನ್ಮೂಲಗಳ ದೃಷ್ಟಿಯಿಂದ ಭಾರತ ಸಂಪದ್ಭರಿತ. ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದು, ಬ್ರಿಟಿಷರು ಬರೆದ ಇತಿಹಾಸದ ದೃಷ್ಟಿಕೋನದಿಂದ ನೋಡುವುದು ಸರಿಯಲ್ಲ ಎಂದರು.
ಸಂಪದ್ಭರಿತ ಭಾರತವನ್ನು ಈಗಲೂ ಅಭಿವೃದ್ಧಿ ಹೊಂದುತ್ತಿರುವ ದೇಶವೆಂದು ಪರಿಗಣಿಸುತ್ತಿದ್ದು, ಮೋದಿಯವರ ನೇತೃತ್ವದಲ್ಲಿ ಅಭಿವೃದ್ಧಿಯತ್ತ ದೃಢ ಹೆಜ್ಜೆಯಿರಿಸಲಾಗಿದೆ.
ಕಳೆದ ಒಂದು ದಶಕದ ಅವಧಿಯಲ್ಲಿ ಆಂತರಿಕ ಬಾಹ್ಯ ಭದ್ರತೆ, ಆರ್ಥಿಕ ಸದೃಢತೆ ಸಾಧಿಸಿ ವಿಶ್ವಕ್ಕೆ ಮಾದರಿ ರಾಷ್ಟ್ರವಾಗಿ ರೂಪುಗೊಂಡು ಹೊಸ ಛಾಪು ಮೂಡಿಸಿದೆ.
ಮುಂದಿನ ಮೂರು ವರ್ಷಗಳಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿಯಾಗಿ ಭಾರತ ಹೊಮ್ಮಬೇಕು, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸಬೇಕು ಎನ್ನುವುದು ಮೋದಿಯವರ ಸಂಕಲ್ಪವಾಗಿದೆ ಎಂದರು.
ಮೋದಿ ನೇತೃತ್ವದ ಆಡಳಿತಕ್ಕೆ ಮುನ್ನ ಜಾಗತಿಕವಾಗಿ ಭಾರತದ ಚಿತ್ರಣವೇ ಬೇರೆಯಾಗಿತ್ತು. ಆರ್ಥಿಕ ದುರ್ಬಲ, ಭಯೋತ್ಪಾದಕರ ದಾಳಿಗಳು ನಿರಂತರವಾಗಿದ್ದವು. ಈಗ ಪರಿಸ್ಥಿತಿ ಬದಲಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆದವರು, ಸಾಧನೆ ತಿಳಿದವರು ಮೋದಿ ಗ್ಯಾರಂಟಿ ಸರ್ಕಾರವೆಂದು ನಾಮಕರಣ ಮಾಡಿದ್ದಾರೆ. ಡಿಜಿಟಲ್ ವಾಹನಕ್ಕೂ ಹಾಗೆಯೇ ಕರೆಯುತ್ತಿದ್ದಾರೆ ಎಂದು ಪ್ರಲ್ಹಾದ ಜೋಶಿ ಹೇಳಿದರು.
ನಾವು ಮಾತನಾಡುವುದಲ್ಲ, ಮೋದಿ ನೇತೃತ್ವದ ಸರ್ಕಾರದ ಯೋಜನೆ-ಸಾಧನೆಗಳು ಜನರಿಂದ ಹಾಗೆ ಹೇಳಿಸುತ್ತಿವೆ. ದೇಶದ 140 ಕೋಟಿ ಜನಸಂಖ್ಯೆ ಹಿತವನ್ನು ಮೋದಿ ಸರ್ಕಾರ ಬಯಸಿದೆ ಎಂದರು.
ಹಿಂದೆ ಯುಪಿಎ ಅವಧಿಯಲ್ಲಿ ಹಣದ ಕೊರತೆ ಕುರಿತು ಸ್ವತಃ ಸಚಿವರೊಬ್ಬರು ನನ್ನಲ್ಲಿ ಮಾಹಿತಿ ಹಂಚಿಕೊಂಡು, ಆರ್ಥಿಕ ದುಃಸ್ಥಿತಿ ಬಗ್ಗೆ ತಿಳಿಸಿದ್ದು ನೆನಪಾಗುತ್ತದೆ.
ಇವತ್ತು ಪ್ರತಿ ಸಚಿವ ಸಂಪುಟ ಸಭೆಯಲ್ಲಿ ಮೋದಿಯವರು ವಿವಿಧ ಯೋಜನೆಗಳು, ಮಂಜೂರಾದ ಮೊತ್ತ, ಯೋಜನೆಯ ಸ್ಥಿತಿಗತಿ, ಖರ್ಚಾದ ಮೊತ್ತದ ಮಾಹಿತಿ ಪಡೆಯುವರು. ಹಣ ಬೇಕಿದ್ದರೆ ಕೇಳಿ ಎನ್ನುತ್ತಾರೆ ಎಂದು ಪ್ರಲ್ಹಾದ ಜೋಶಿ ತಿಳಿಸಿದರು.
ಸಂಸದ ಪಿ.ಸಿ.ಮೋಹನ್ ಮಾತನಾಡಿ ಹಿಂದೆ ಸಾಮಾನ್ಯರು, ಬೀದಿಬದಿ ವ್ಯಾಪಾರಿಗಳು ಬ್ಯಾಂಕ್‌ನಲ್ಲಿ ಸಾಲ ಪಡೆಯುವುದಿರಲಿ, ಖಾತೆ ತೆರೆಯುವುದು ಕಷ್ಟವಾಗಿತ್ತು. ಈಗ ಬ್ಯಾಂಕ್‌ನವರು ಸಾಲ ತೆಗೆದುಕೊಳ್ಳಬೇಕೆಂದು ಬೀದಿ ಬದಿ ವ್ಯಾಪಾರಿಗಳ ಬಳಿ ಬರುತ್ತಿದ್ದಾರೆ ಎಂದರು.
ಬೆಂಗಳೂರು ಕೇಂದ್ರ ಘಟಕದ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಸಂಪತ್ ಕುಮಾರ್, ಎಂ.ಗೋಪಿ, ಗುಣಶೇಖರ್, ಬಾಲಾಜಿ ಮಣಿ ಇನ್ನಿತರರು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
