ಬೆಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರ್ಕಾರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ವಿ.ಸುನೀಲ್ ಕುಮಾರ್ ಟೀಕಿಸಿದರು.
ಪಕ್ಷದ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿ ಒಂದು ವರ್ಷ ಮುಗಿಯುತ್ತಿದೆ. ಗೊತ್ತುಗುರಿ ಇಲ್ಲದ ಆಡಳಿತವನ್ನು ರಾಜ್ಯದ ಜನರು ಕಳೆದ ಒಂದು ವರ್ಷದಲ್ಲಿ ನೋಡಿದ್ದಾರೆ ಎಂದು ವಿಶ್ಲೇಷಿಸಿದರು.
ಈ ಒಂದು ವರ್ಷದ ಅವಧಿಯಲ್ಲಿ ಯಾವ ಯೋಜನೆಗೆ ಅನುದಾನ ಕೊಟ್ಟಿದ್ದಾರೆ ಎಂಬ ಮಾಹಿತಿಯನ್ನು ಸರ್ಕಾರ ಬಿಡುಗಡೆ ಮಾಡಬೇಕು. ಸ್ಥಳೀಯ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಯಾವ ಯೋಜನೆಗಳಿಗೆ, ಎಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ಕೊಟ್ಟಿದ್ದಾರೆ ಎಂದು ಸರ್ಕಾರ ಬಹಿರಂಗಪಡಿಸಿದರೆ ಸಾಕು ಎಂದು ಸವಾಲೆಸೆದರು.
ಇಂಥ ಅಭಿವೃದ್ಧಿಶೂನ್ಯ ಆಡಳಿತ, ಸರ್ಕಾರವನ್ನು ಕರ್ನಾಟಕದ ಜನತೆ ಯಾವತ್ತೂ ನೋಡಿರಲಿಲ್ಲ. ವಿಧಾನಸಭಾ ಕ್ಷೇತ್ರಗಳು, ಇಲಾಖೆಗಳಿಗೆ ಒಂದು ರೂಪಾಯಿ ಅನುದಾನವನ್ನೂ ಕೊಡದೆ ಒಂದು ವರ್ಷ ಕಾಲವನ್ನು ಈ ಸರ್ಕಾರ ಕಳೆದಿದೆ. ನಾವೆಲ್ಲ ಶಾಸಕರು ಒಂದು ವರ್ಷದಿಂದ ಒಂದು ಗುದ್ದಲಿ ಪೂಜೆ ಮಾಡಲಾಗಿಲ್ಲ. ಒಂದು ಅನುದಾನ ಬಂದಿದೆ ಎಂದು ಜನರ ಹತ್ತಿರ ಹೋಗಲೂ ಆಗಿಲ್ಲ ಎಂದು ವ್ಯಂಗ್ಯವಾಡಿದರು.
ಜನರು ಕೂಡ ಈ ಸರ್ಕಾರದಿಂದ ಅನುದಾನ ಬರುವುದಿಲ್ಲ ಎಂಬಷ್ಟರ ಮಟ್ಟಿಗೆ ಪಶ್ಚಾತ್ತಾಪ ಪಡುತ್ತಿದ್ದಾರೆ. ಸಚಿವರ ಮೇಲೆ ಹಿಡಿತವಿಲ್ಲ. ಯೋಜನೆ ರೂಪಿಸುವುದರಲ್ಲಿ ಮುಖ್ಯಮಂತ್ರಿ ಅಸಮರ್ಥವಾಗಿದ್ದಾರೆ. ಸರಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ ಅನ್ನುವಷ್ಟರ ಮಟ್ಟಿಗೆ ಅಸಮರ್ಥ ಆಡಳಿತವನ್ನು ಕರ್ನಾಟಕದಲ್ಲಿ ನೋಡುತ್ತಿದ್ದೇವೆ ಎಂದು ವಿ. ಸುನೀಲ್ ಕುಮಾರ್ ಹೇಳಿದರು.
ಕಾನೂನು, ಸುವ್ಯವಸ್ಥೆ ನಿಭಾಯಿಸುವುದರಲ್ಲಿ ಗೃಹ ಸಚಿವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಬರ ಪರಿಹಾರದಲ್ಲಿ ಕಂದಾಯ ಸಚಿವರು ಎಷ್ಟು ದೊಡ್ಡ ಪ್ರಮಾಣದಲ್ಲಿ ವೈಫಲ್ಯ ಕಂಡಿದ್ದಾರೆಂದರೆ ಮಂತ್ರಿಮಂಡಲದ ಒಬ್ಬ ಸದಸ್ಯ ಬರ ಪರಿಹಾರದ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ ಎಂದು ಆಕ್ಷೇಪಿಸಿದರು.
ರೈತರಿಗೆ ಈಗ ಹೊಸ ಸಾಲ ಸಿಗುತ್ತಿಲ್ಲ. ರೈತರ ಸಾಲದ ಬಡ್ಡಿ ಮನ್ನಾ ಮಾಡಿದ್ದಾಗಿ ಘೋಷಣೆ ಮಾಡಿ, 496 ಕೋಟಿ ಅನುದಾನವನ್ನು ಬಿಡುಗಡೆ ಮಾಡದ ಕಾರಣ ಪಿಎಲ್ಡಿ ಬ್ಯಾಂಕ್, ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳಲ್ಲಿ ರೈತರಿಗೆ ಮರುಸಾಲ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಕೃಷಿ- ಸಹಕಾರಿ ಸಚಿವರು ಇವತ್ತು ಅಸಮರ್ಥವಾಗಿರುವುದೇ ಕಾರಣ ಎಂದು ವಿಶ್ಲೇಷಿಸಿದರು.
ಈ ಸರಕಾರ ಬಂದ ಬಳಿಕ ಒಬ್ಬನೇ ಒಬ್ಬ ರೈತನಿಗೆ ಹೊಸ ಪಂಪ್‌ಸೆಟ್‌ಗಳ ಸಂಪರ್ಕ ಸಿಗಲಿಲ್ಲ. ರೈತರು ಹಣ ಕಟ್ಟಿದರೂ ಹೊಸ ಸಂಪರ್ಕ ಸಿಕ್ಕಿಲ್ಲ 24 ಗಂಟೆ ವಿದ್ಯುತ್ ನಿರಂತರ ಬಿಡಿ; ಗ್ರಾಮೀಣ ಪ್ರದೇಶದಲ್ಲಿ 10- 12 ಗಂಟೆ ವಿದ್ಯುತ್ ಕೊಡಲಾಗದ ಅಸಮರ್ಥ ಇಂಧನ ಸಚಿವರು ನಮ್ಮ ನಡುವೆ ಇದ್ದಾರೆ ಎಂದು ಕಾಲೆಳೆದರು.
ಶಿಕ್ಷಣದ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದನ್ನು ಗಮನಿಸಿದರೆ ಶಿಕ್ಷಣ ಇಲಾಖೆ ಕಾರ್ಯಶೈಲಿ ಗೊತ್ತಾಗುತ್ತದೆ. ಅಂಗನವಾಡಿಯವರಿಗೆ ಗೌರವಧನ ಹೆಚ್ಚಿಸಿಲ್ಲ, ಅಂಗನವಾಡಿಗಳ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಾಸವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಅಸಮರ್ಥರಾಗಿದ್ದಾರೆ ಎಂದು ದೂರಿದರು.
ಆಡಳಿತವನ್ನು ಕೆಲವು ಕುಟುಂಬದ ಸದಸ್ಯರು, ಇವೆಂಟ್ ಮ್ಯಾನೇಜ್ಮೆಂಟಿನ ಸದಸ್ಯರು ಸರಕಾರ ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಈ ಸರಕಾರ ನಡೆಯುತ್ತಿದೆ ಎಂದು ವಿ. ಸುನಿಲ್ ಕುಮಾರ್ ಆರೋಪಿಸಿದರು.
ವಿಧಾನಸೌಧದ ಆಡಳಿತ ಯಾರದೋ ಮನೆಯ ಕಿಚನ್‌ನಲ್ಲಿ ನಡೆಯುವಂತೆ ಭಾಸವಾಗುತ್ತಿದೆ. ಒಂದು ವರ್ಷದ ಈ ಸರ್ಕಾರದ ಅವ್ಯವಸ್ಥೆ ದಿನದಿಂದ ದಿನಕ್ಕೆ ಬಯಲಾಗುತ್ತಿದೆ. ಈ ಅಸಮರ್ಥ ಸರ್ಕಾರದ ವಿರುದ್ಧ ಬಿಜೆಪಿ ಜನಾಂದೋಲನ ನಡೆಸಲಿದೆ ಎಂದು ಪ್ರಕಟಿಸಿದರು.
ಪಕ್ಷದ ರಾಜ್ಯ ಮುಖ್ಯ ವಕ್ತಾರ ಅಶ್ವಥನಾರಾಯಣ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ವಕ್ತಾರರಾದ ಡಾ. ನರೇಂದ್ರ ರಂಗಪ್ಪ, ಪ್ರಕಾಶ್ ಶೇಷರಾಘವಾಚಾರ್, ಮೋಹನ್ ವಿಶ್ವ, ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − fourteen =
Remember me
