ಕಲಬುರಗಿ:ಕಾಂಗ್ರೆಸ್ ಆಡಳಿತದಲ್ಲಿ ಕಲಬುರಗಿ ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಇತ್ತು. ಜಿಲ್ಲಾ ಉಸ್ತುವಾರಿಯಾಗಿ ಬಂದಿದ್ದಾಗ ನಲ್ಲಿಗಳಲ್ಲಿ ಯುಜಿಡಿ ನೀರು ಬರುತ್ತಿತ್ತು. ಟ್ರೀಟ್​ಮೆಂಟ್​ ಇಲ್ಲದೆ ಭೀಮಾ ನದಿ ನೀರು ಬರುತ್ತಿತ್ತು. ಕಾಂಗ್ರೆಸ್ ಅವರು ಶುದ್ಧ ಕುಡಿಯುವ ನೀರು ಕೊಡಲೂ ಲಾಯಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಅವರು ಇಂದು ಕಲಬುರಗಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದು ಪಾಟೀಲ್ ಪರವಾಗಿ ಮಳೆಯ ನಡುವೆಯೂ ಬಿರುಸಿನ ಪ್ರಚಾರ ನಡೆಸಿ ಮತಯಾಚನೆ ಮಾಡಿ ಮಾತನಾಡಿದರು.
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೊಡ್ಡ ಪ್ರಮಾಣದ ಅನುದಾನ ಬಂದು ಇಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನ ಮಾಡಲಾಗಿದೆ. ಕಲಬುರಗಿ ಉತ್ತರ ಕ್ಷೇತ್ರದ ಶಾಸಕರು ಈ ಕ್ಷೇತ್ರದ ಅಭಿವೃದ್ಧಿ ಮಾಡಲಿಲ್ಲ. ಜಾತಿ ಮತ ಪಂಥ ಎಲ್ಲ ಬೇಧವನ್ನು ಮರೆತು ಕಲಬುರಗಿ ಉತ್ತರದ ಸಮಗ್ರ ಅಭಿವೃದ್ಧಿಗೆ ಬಿಜೆಪಿಯನ್ನು ಬೆಂಬಲಿಸಬೇಕು. ಉತ್ತರದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ನಮ್ಮ ಚಂದು ಪಾಟೀಲ್ ಶಾಸಕರಲ್ಲದೆಯೂ ಈ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಪಡೆದುಕೊಳ್ಳಲು ನನ್ನ ಬಳಿ ಬರುತ್ತಿದ್ದ. ಅವನಿಗೆ ಹಠ, ಛಲ ಇದೆ. ಯಾವ ನಾಯಕನಿಗೆ ಹಠ-ಛಲ ಇರುತ್ತದೋ ಅವರು ಮಾತ್ರ ಅಭಿವೃದ್ಧಿ ಮಾಡಲು ಸಾಧ್ಯ. ಚಂದು ಪಾಟೀಲ್​ಗೆ ಇರುವ ಛಲ-ಹಠ ಬೇರೆ ಯಾವ ಅಭ್ಯರ್ಥಿಗಳಿಗೂ ಇಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ:ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!
ನಾವು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡಿದ್ದೇವೆ:ಮೇ 10ರಂದು ಸಮಯ ಕಳೆದುಕೊಂಡರೆ ಐದು ವರ್ಷ ಮತ್ತೆ ಪಶ್ಚಾತ್ತಾಪ ಪಡಬೇಕಾಗುತ್ತದೆ. ನೀವು ಚಂದು ಪಾಟೀಲರನ್ನು ವಿಧಾನಸಭೆಗೆ ಕಳುಹಿಸಿ, ಈ ಕ್ಷೇತ್ರಕ್ಕೆ ಬೇಕಾಗುವ ಎಲ್ಲ ಅನುದಾನ ನಾವು ನೀಡುತ್ತೇವೆ. ಈ ವರ್ಷ ನಾವು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಐದು ಸಾವಿರ ಕೋಟಿ ರೂ. ಕೊಟ್ಟಿದ್ದೇವೆ. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡದೇ ನಿರಂತರ ನಿರ್ಲಕ್ಷ್ಯ, ಮೋಸ, ಭ್ರಷ್ಟಾಚಾರ ಮಾಡುತ್ತ ಬಂದಿದೆ. ನಮ್ಮ ಶಾಸಕರು ಅನುದಾನ ತಂದು ಇಡೀ ಕಲ್ಯಾಣ ಕರ್ನಾಟಕದ ಚಿತ್ರಣ ಬದಲಿಸಿದ್ದಾರೆ. ಕಾಂಗ್ರೆಸ್​ನವರ ಥರ ಭ್ರಷ್ಟಾಚಾರ ಮಾಡಿಲ್ಲ. ಚಂದು ಪಾಟೀಲ್ ಜನಪರ ಕೆಲಸ ಮಾಡಿ ಧೈರ್ಯವಾಗಿ ನಿಮ್ಮ ಮುಂದೆ ನಿಂತಿದ್ದಾನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ:‘ಈ ಸಲ ಯಾರಿಗೆ ಮತ ಹಾಕಲಿ?’ ಎಂದು ಕೇಳಿದರೆ ಇದು ಏನನ್ನುತ್ತೆ?: ಕೃತಕ ಬುದ್ಧಿಮತ್ತೆಯ ಬುದ್ಧಿಮಾತು!
ಕಲಬುರಗಿ ನಗರಕ್ಕೆ ಭವ್ಯ ಭವಿಷ್ಯವಿದೆ. ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತದೆ. ನಮ್ಮ ಪ್ರಧಾನಿಯವರು ಈ ಪ್ರದೇಶದ ಅಭಿವೃದ್ಧಿಗೆ ‌ಮೆಗಾ ಟೆಕ್ಸ್​ಟೈಲ್​ ಪಾರ್ಕ್ ಮಂಜೂರಾತಿ ಮಾಡಿದ್ದಾರೆ. 50 ಸಾವಿರ ಕೋಟಿ ರೂ. ಬಂಡವಾಳ ಹರಿದು ಬರಲಿದೆ. ಇದರಿಂದ ಒಂದು ಲಕ್ಷ ಯುವಕ-ಯುವತಿಯರಿಗೆ ಉದ್ಯೋಗ ದೊರೆಯಲಿದೆ. ಅದರಲ್ಲಿ ಉತ್ತರದ ಯುವಕ-ಯುವತಿಯರಿಗೆ ಸಿಂಹಪಾಲು ಇರುತ್ತದೆ. ಕಾಂಗ್ರೆಸ್​ನವರು ಪ್ರತಿದಿನ ಒಂದೊಂದು ಗ್ಯಾರಂಟಿ ಕೊಡುವುದಾಗಿ ಹೇಳುತ್ತಿದ್ದಾರೆ. ನಾವು ಹೇಳಿದ್ದನ್ನು ಕಾಪಿ ಮಾಡಿ ಮಹಿಳೆಯರಿಗೆ ಉಚಿತ ಬಸ್ ಸೇವೆ ಒದಗಿಸುವುದಾಗಿ ಹೇಳಿದ್ದಾರೆ‌. ನಾವು ಈಗಾಗಲೇ ಬಜೆಟ್​ನಲ್ಲಿ ಘೋಷಣೆ ಮಾಡಿದ್ದೇವೆ. ಚುನಾವಣೆ ಮುಗಿದ ಮೇಲೆ ಜಾರಿಗೆ ತರುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ:ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
2013-18ರ ‌ಅವಧಿಯ ಕಾಂಗ್ರೆಸ್ ಸರ್ಕಾರ ದೌರ್ಭಾಗ್ಯದ ಸರ್ಕಾರ. ರಾಜ್ಯದ ಜನತೆಗೆ ದೌರ್ಭಾಗ್ಯಗಳನ್ನಷ್ಟೇ ನೀಡಿದರು. ಯಾವ ಭಾಗ್ಯಗಳೂ ಜನರನ್ನು ಮುಟ್ಟಲಿಲ್ಲ. ಬರೀ ಏಜೆಂಟರಿಗೆ ಮಾತ್ರ ಭಾಗ್ಯ ಸಿಕ್ಕಿತ್ತು. ಯಡಿಯೂರಪ್ಪ ಸಿಎಂ ಆಗಿದ್ದಾಗ ಪ್ರತಿವ್ಯಕ್ತಿಗೆ 10 ಕೆಜಿಯಂತೆ ಒಂದು ಕುಟುಂಬಕ್ಕೆ 30 ಕೆಜಿ ಅಕ್ಕಿ ಕೊಡುತ್ತಿದ್ದೆವು. 2 ವರ್ಷ ಗರೀಬ್ ಕಲ್ಯಾಣ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿಯವರು 10 ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿದ್ದರು. ಕಾಂಗ್ರೆಸ್ ಸರ್ಕಾರದಲ್ಲಿ ಮೋದಿಯವರ ಅಕ್ಕಿಗೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಪಡೆದರು. ಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿದ್ದಾರೆ. ಜನರು ಅವರ ಗ್ಯಾರಂಟಿಯನ್ನೂ ನಂಬುತ್ತಿಲ್ಲ. ಮೇ 10ರ ವರೆಗೆ ಮಾತ್ರ ಗ್ಯಾರಂಟಿ. ಆ ಮೇಲೆ ಬರೀ ಗಳಗಂಟಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ:ಮದುವೆ ಆಮಂತ್ರಣ ಪತ್ರಿಕೆ ನೀಡಲು ಹೋಗಿದ್ದ ಸಹೋದರಿಯರಿಬ್ಬರ ಸಾವು!
ಈ ಕ್ಷೇತ್ರದಲ್ಲಿ ಬದಲಾವಣೆ ಅವಶ್ಯಕತೆ ಇದೆ. ಉತ್ತರ ಕರ್ನಾಟಕದಲ್ಲಿ ಕ್ರಾಂತಿಯಾಗುತ್ತದೆ. ಇಲ್ಲಿ ಕಮಲ ಅರಳಲಿದೆ. ಇದರಿಂದ ಚಂದು ಪಾಟೀಲ್ ವಿಧಾನಸಭೆಯ ಪ್ರವೇಶ ಮಾಡುತ್ತಾರೆ. ನಾನು ಉತ್ತರ ಕ್ಷೇತ್ರ ಗೆಲ್ಲಿಸಿಕೊಂಡು ಬರುತ್ತೇನೆ ಅಂತ ನಮ್ಮ ನಾಯಕರಿಗೆ ಆಶ್ವಾಸನೆ ಕೊಟ್ಟಿದ್ದೇನೆ. ನೀವು ದಣಿವರಿಯದೆ ಇವರನ್ನು ಗೆಲ್ಲಿಸಿಕೊಂಡು ಬಂದು ವಿಜಯೋತ್ಸವ ಮಾಡಬೇಕು. ಕಾಂಗ್ರೆಸ್ ನಿಂದ ಕಲಬುರಗಿ ಉತ್ತರದಲ್ಲಿ ಕಾರ್ಮೋಡ ಕವಿದಿದೆ. ಇಲ್ಲಿ ಚಂದ್ರನ ದರ್ಶನ ಆಗಬೇಕು. ಇಲ್ಲಿ ಬಿಜೆಪಿ ಅರಳಿದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಆಗ ತಾಯಿ ಭುವನೇಶ್ವರಿಯ ಸೇವೆ ಮಾಡುತ್ತ ಬಸವಣ್ಣನ ಆಶಯದಂತೆ ಸರ್ಕಾರ ನಡೆಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 − 7 =
Remember me
