ಬೆಂಗಳೂರುರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಪ್ರತಿ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಅಭಿವೃದ್ಧಿ ಗುರಿ ಹೊಂದಲಾಗಿದೆ. ಮೊದಲ ಹಂತದಲ್ಲಿ 500 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಆಗಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಲಾಗಿದೆ. ಈ ಸಂಬಂಧ ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮೇಲುಸ್ತುವಾರಿ ಸಮಿತಿ ರಚನೆ ಮಾಡಲಾಗಿದೆ.
ಎನ್‌ಜಿಒ ಸಹಯೋಗ ಹಾಗೂ ಖಾಸಗಿ ಸಂಸ್ಥೆಗಳ ಸಿಎಸ್‌ಆರ್ ಅನುದಾನದಲ್ಲಿ ಶಾಲೆಗಳ ಅವಶ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಅಭಿವೃದ್ಧಿಗೊಳಿಸಲಾಗುತ್ತಿದೆ. ಇದರ ಉಸ್ತುವಾರಿಗಾಗಿ ಸಮಿತಿ ರಚಿಸಲಾಗಿದೆ.
ಸಮಿತಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕಂದಾಯ ಇಲಾಖೆ ಸೇರಿ ವಿವಿಧ 8 ಇಲಾಖೆ ಸಚಿವರು ಹಾಗೂ ಇಲಾಖೆ ಕಾರ್ಯದರ್ಶಿಗಳು ಸೇರಿ 18 ಮಂದಿಯ ಸಮಿತಿಯ ಸದಸ್ಯರಾಗಿದ್ದಾರೆ. ಇದರ ಜತೆಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯು ಅಧ್ಯಕ್ಷರಾಗಿದ್ದು, 8 ವಿವಿಧ ಇಲಾಖೆಯ ಅಧಿಕಾರಿಗಳನ್ನಯ ಒಳಗೊಂಡ ಕಾರ್ಯಕಾರಿ ಸಮಿತಿ ರಚಿಸಲಾಗಿದೆ. ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ನೀತಿ-ನಿಯಮಗಳ ರಚನೆ, ಪರಿಷ್ಕರಣೆ, ಮಾರ್ಗಸೂಚಿ ರಚಿಸುವುದು ಸಮಿತಿಗಳ ಕಾರ್ಯವಾಗಿದೆ.
ಸಮಿತಿಗಳ ಕಾರ್ಯವೇನು?
ಮೊದಲು ಶಾಲೆಗಳನ್ನು ಗುರುತಿಸಬೇಕು. ಆ ನಂತರ ಶಾಲೆಗಳ ನವೀಕರಣ ಕಾರ್ಯದಲ್ಲಿ ತೊಡಗಬೇಕು. ನೂತನ ಕೊಠಡಿಗಳ ನಿರ್ಮಾಣ, ದುರಸ್ತಿ, ಪ್ರಯೋಗಾಲಯ, ಶೌಚಾಲಯ, ಕಾಂಪೌಂಡ್ ನಿರ್ಮಾಣ, ಶಾಲೆಯಲ್ಲಿನ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ಸಮಗ್ರವಾಗಿ ಉನ್ನತೀಕರಿಸಲು ಸಮಗ್ರ ಶಾಲಾ ಕಟ್ಟಡಕ್ಕೆ ಸಂಯೋಜಿಸಲು ಆದ್ಯತೆ ನೀಡುವುದು.ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಗ್ರಂಥಾಲಯ, ಎನ್‌ಎಸ್‌ಕ್ಯೂಎ್ ಲ್ಯಾಬ್, ಟಿಂಕರಿಂಗ್ ಲ್ಯಾಬ್, ಐಸಿಟಿ ಲ್ಯಾಬ್, ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಕಲಿಕಾ ಕೇಂದ್ರಗಳ ಸ್ಥಾಪನೆ. ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಮುನ್ನ ಪ್ರಸ್ತುತ ಇರುವ ಶಾಲೆಗಳ ಸ್ಥಿತಿ-ಗತಿಗಳನ್ನು ಮೌಲ್ಯಮಾಪನ ಮಾಡಲಿದೆ.
ಡಿಎಸ್‌ಇಆರ್‌ಟಿ, ಆರ್‌ಐಇ, ಜಿಲ್ಲಾ ತರಬೇತಿ ಸಂಸ್ಥೆ ಮತ್ತು ಸಿಟಿಇಗಳ ಜತೆಗೆ ವಿಷಯ ತಜ್ಞರು ಸಂಸ್ಥೆಗಳ ಸಹಕಾರದೊಂದಿಗೆ ಪರಿಣಾಮಕಾರಿ ತರಬೇತಿಗಳನ್ನು ಆಯೋಜಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
2017-18ನೇ ಸಾಲಿನಲ್ಲಿ ಕೆಪಿಎಸ್ ೋಷಣೆ207-18ನೇ ಸಾಲಿನ ಬಜೆಟ್‌ನಲ್ಲಿ ಮೊದಲ ಬಾರಿಗೆ ಕೆಪಿಎಸ್ ಆರಂಭಿಸುವುದಾಗಿ ೋಷಣೆ ಮಾಡಲಾಗಿತ್ತು. ಮೊದಲು 175 ನಂತರದ ವರ್ಷದಲ್ಲಿ 110 ಸೇರಿ ಪ್ರಸ್ತುತ 285 ಕೆಪಿಎಸ್ ಶಾಲೆಗಳು ಕಾರ್ಯಘನಿರ್ವಹಿಸುತ್ತಿವೆ. ಪೂರ್ವ ಪ್ರಾಥಮಿಕ ತರಗತಿಗಳಿಂದ ಪಿಯು ವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಬೋಧನೆ ಮಾಡಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + nine =
Remember me
