ಬೆಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಟ್ಟಡ ಅಥವಾ ಕೊಠಡಿಗಳ ದುರಸ್ತಿಗೆ ಅಗಾಧ ಸಂಪನ್ಮೂಲ ಅಗತ್ಯವಿದ್ದು, ದಾನಿಗಳಿಂದ ಸಂಪನ್ಮೂಲ ಕ್ರೋಡೀಕರಣಕ್ಕಾಗಿ ಕರೆದ ಸಭೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ದಾನಿಗಳಿಗಾಗಿ ಪ್ರತ್ಯೇಕ ಆಪ್ ಅಭಿವೃದ್ಧಿಪಡಿಸುತ್ತಿದ್ದು, ಏ.3ಕ್ಕೆ ಅನಾವರಣಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್​ಕುಮಾರ್ ತಿಳಿಸಿದರು.
ವಿಧಾನಪರಿಷತ್​ನಲ್ಲಿ ಪ್ರತಿಕ್ರಿಯಿಸಿ, ನೆರೆ ಹಾವಳಿಗೆ 6,196 ಶಾಲೆಗಳ 13,260 ಕೊಠಡಿಗಳು ಹಾನಿಗೀಡಾಗಿವೆ. ಈ ಪೈಕಿ ಅಲ್ಪ ದುರಸ್ತಿಗೆ 200 ಕೋಟಿ ರೂ. ಬಿಡುಗಡೆ ಮಾಡಿದ್ದು, 713 ಕೋಟಿ ರೂ. ಪ್ರಾಥಮಿಕ ಹಾಗೂ 69 ಕೋಟಿ ರೂ. ಪ್ರೌಢಶಾಲೆ ಕಟ್ಟಡಗಳ ಮರು ನಿರ್ವಣಕ್ಕೆ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು 43,282 ಪ್ರಾಥಮಿಕ ಹಾಗೂ 4,724 ಪ್ರೌಢಶಾಲಾ ಕಟ್ಟಡಗಳಿವೆ. ಈ ಪೈಕಿ ದುರ್ಬಲ ಕಟ್ಟಡಗಳ ಮರುನಿರ್ವಣ ಪ್ರಯತ್ನವಾಗಿ ದಾನಿಗಳ ನೆರವು ಕೇಳಿದ್ದು, ಹಲವರು ಪೂರ್ತಿ ಶಾಲೆ ಕಟ್ಟಡ ನಿರ್ವಣಕ್ಕೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಉದ್ಯಮಿಗಳು, ಸಂಸ್ಥೆಗಳು ಹಾಗೂ ವ್ಯಕ್ತಿಗಳು ನೆರವು ನೀಡಲು ಮುಂದೆ ಬಂದಿರುವ ಕಾರಣಕ್ಕೆ ಪ್ರತ್ಯೇಕ ಆಪ್ ಅಭಿವೃದ್ಧಿ ಮೂಲಕ ಅನುಷ್ಠಾನಕ್ಕೆ ತರಲಾಗುವುದು ಎಂದು ವಿವರಿಸಿದರು.
ಇಷ್ಟರಲ್ಲೇ ಸಭೆ: ಮಹಾಂತೇಶ ಕವಟಗಿಮಠ ಪ್ರಶ್ನೆಗೆ ಉತ್ತರಿಸಿ, ನಗರ-ಪಟ್ಟಣ ಸ್ಥಳೀಯ ಸಂಸ್ಥೆಗಳು ನಿರ್ವಹಿಸುತ್ತಿರುವ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಶಿಕ್ಷಕರ ಕೊರತೆ ಹಾಗೂ ಕೊಠಡಿಗಳ ಸಮಸ್ಯೆ ಬಗ್ಗೆ ರ್ಚಚಿಸಲು ಇಷ್ಟರಲ್ಲೇ ಮುಖ್ಯಾಧಿಕಾರಿಗಳು ಹಾಗೂ ಶಿಕ್ಷಣಾಧಿಕಾರಿಗಳ ಸಭೆ ಕರೆಯುವೆ ಎಂದು ಸಚಿವರು ತಿಳಿಸಿದರು. ಬೈಲಹೊಂಗಲ ಹಾಗೂ ನಿಪ್ಪಾಣಿ ಪುರಸಭೆಗಳ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಶಿಥಿಲ ಕಟ್ಟಡಗಳನ್ನು ಪರಿಶೀಲಿಸಿ ಸೂಕ್ತ ಕ್ರಮವಹಿಸುವ ಭರವಸೆ ನೀಡಿದರು.
ಗ್ರಾಮಗಳಲ್ಲಿ ಕರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಕಾರ್ಯಪಡೆ ರಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
