ಪೀಣ್ಯದಾಸರಹಳ್ಳಿ:ರಾಜ್ಯದಲ್ಲಿ ನೆಲ, ಜಲ, ಭಾಷೆ ಉಳಿವಿಗಾಗಿ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕು. ನಾಡಿನ ಸಮಗ್ರ ಅಭಿವೃದ್ಧಿ, ರಕ್ಷಣೆಗಾಗಿ ಜೆಡಿಎಸ್ ಬೆಂಬಲಿಸಿ ಎಂದು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆರ್. ಮಂಜುನಾಥ್ ಮನವಿ ಮಾಡಿದ್ದಾರೆ.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಜಗೋಪಾಲನಗರ ವಾರ್ಡ್​ನಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಸೇರ್ಪಡೆ ಹಾಗೂ ಮನೆ ಮನೆ ಭೇಟಿ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಂಗ್ರೆಸ್ ಹಾಗೂ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ನೆಲ, ಜಲ, ಭಾಷೆಗೆ ಕಂಟಕ ಎದುರಾಗಲಿದೆ. ಹೀಗಾಗಿ ರಾಷ್ಟ್ರೀಯ ಪಕ್ಷಗಳನ್ನು ತೊಲಗಿಸಿ, ಜೆಡಿಎಸ್ ಬೆಂಬಲಿಸಿ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಘೋಷಿಸಿರುವ ಪಂಚರತ್ನ ಯೋಜನೆಗಳನ್ನು ಜಾರಿಗೆ ತಂದು ಜನಸ್ನೇಹಿ ಆಡಳಿತ ನೀಡುತ್ತೇವೆ ಎಂದರು.
ಇದನ್ನೂ ಓದಿ:ಸಪ್ತಗಿರಿಗೌಡಗೆ ತಾರಾ ಸಾಥ್! ಗಾಂಧಿನಗರ ಕ್ಷೇತ್ರದ ವಿವಿಧೆಡೆ ಭರ್ಜರಿ ಮತಯಾಚನೆ
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮೊದಲಿನಿಂದಲೂ ಕೋಮುವಾದ ಸೃಷ್ಟಿಸಿ, ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತ ಬಂದಿವೆ. ಕುಮಾರಣ್ಣ ಮಾಡಿರುವ ಸಾಧನೆಗಳನ್ನು ಇಟ್ಟುಕೊಂಡು ಜನರ ಬಳಿ ಹೋಗಿ ಮತ ಕೇಳುತ್ತಾರೆ. ಈ ಬಾರಿ ನನ್ನನ್ನು ಗೆಲ್ಲಿಸಿದ ಬಳಿಕ ಕ್ಷೇತ್ರದ ಸಮಗ್ರ ಚಿತ್ರಣವನ್ನೇ ಬದಲಾಯಿಸುತ್ತೇನೆ ಎಂದು ಭರವಸೆ ನೀಡಿದರು. ಜೆಡಿಎಸ್ ಮುಖಂಡ ಜಯರಾಮ ನರಸಿಂಹ, ಸುರೇಶ್, ರುದ್ರೇಗೌಡ, ಬಿ.ಎನ್.ಜಗದೀಶ್, ಕಾರ್ಯಕರ್ತರು ಉಪಸ್ಥಿತರಿದ್ದರು.
ಜೆಡಿಎಸ್​ ಸರ್ಕಾರ ಬಂದರೆ ಮಂಜುನಾಥ್​ ಮಂತ್ರಿ

ದಾಸರಹಳ್ಳಿಯಲ್ಲಿ ಮಂಜುನಾಥ್ ಅಭಿವೃದ್ಧಿ ಪರ್ವ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:fourteen − 10 =
Remember me
