ಬೆಂಗಳೂರು:ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಜತೆಗೆ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ನೂತನ ಡಿಜಿ ಐಜಿಪಿಯಾಗಿ ಅಧಿಕಾರ ವಹಿಸಿಕೊಂಡ ಪ್ರವೀಣ್ ಸೂದ್ ಹೇಳಿದ್ದಾರೆ.
ಆರೂವರೆ ಕೋಟಿ ಜನರ ಸೇವೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಜವಾಬ್ದಾರಿಯುತ ಹುದ್ದೆಯನ್ನು ನೀಲಮಣಿ ಎನ್, ರಾಜು ಅವರು ಹಸ್ತಾಂತರಿಸಿದ್ದಾರೆ.
ನಾವೆಲ್ಲರೂ ಸೇರಿ ಜನಸಾಮಾನ್ಯರಿಗೆ ಪೊಲೀಸರು ಕೈಗೆಟುಕುವಂತೆ ಮಾಡಬೇಕಿದೆ. ರಾಜ್ಯದಲ್ಲಿ ಸಮಸ್ಯೆಗಳು ದೊಡ್ಡದಾಗಿವೆ, ಎಲ್ಲರ ಸಹಕಾರ ಕೋರುತ್ತೇನೆ ಎಂದರು.
ಪ್ರವೀಣ್ ಸೂದ್ ಅವರಿಗೆ ಅಭಿನಂದನೆ ಸಲ್ಲಿಸಿದ ನೀಲಮಣಿ ಎನ್, ರಾಜು, ಪ್ರವೀಣ್ ಸೂದ್ ಅವರಿಗೆ ಅನುಭವ ಇದೆ, ಮಾನವ ಸಂಪನ್ಮೂಲ ಬಳಸಿಕೊಳ್ಳುವ ಕಲೆ ಗೊತ್ತಿದೆ ಎಂದು ಅಭಿಪ್ರಾಯಪಟ್ಟರು.
ನನ್ನ ಸೇವಾವಧಿಯಲ್ಲಿ ಎಲ್ಲರೂ ಸಂಪೂರ್ಣ ಸಹಕಾರ ನೀಡಿದ್ದಾರೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಿರುವುದು ತೃಪ್ತಿ ತಂದಿದೆ. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಮುಖ್ಯಸ್ಥರಾಗಬೇಕೆಂಬ ಅಭಿಲಾಷೆ ಇರುತ್ತದೆ ಎಂದು ಅಭಿಪ್ರಾಯ ಪಟ್ಟರು.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
