ಬೆಂಗಳೂರು:ಪೊಲೀಸ್ ಠಾಣೆಗಳಿಗೆ ಭೇಟಿ ಕೊಟ್ಟು ಸಿಬ್ಬಂದಿ ಮತ್ತು ಜನರ ಸಮಸ್ಯೆಗಳನ್ನು ಆಲಿಸುವಂತೆ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅವರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಸೂಚಿಸಿದ್ದಾರೆ.
ಪ್ರತಿ ಡಿಸಿಪಿ/ಎಸ್​ಪಿ ಅವರು ವಿವಿಐಪಿ ಭದ್ರತೆ ಹೊರತು ಪಡಿಸಿ ಉಳಿದ ದಿನಗಳಲ್ಲಿ ಅಂದರೆ ತಿಂಗಳಲ್ಲಿ ಒಮ್ಮೆಯಾದರೂ ತಮ್ಮ ವ್ಯಾಪ್ತಿಯ ಠಾಣೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಬೇಕು. ಅಲ್ಲಿನ ಕಾರ್ಯವೈಖರಿ, ಠಾಣೆಗೆ ಭೇಟಿ ನೀಡುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಒದಗಿಸಬೇಕು.
ಇದನ್ನೂ ಓದಿ:ಆಸ್ಪತ್ರೆಯೊಳಗೇ ನಾಗರಹಾವಿನ ಮರಿಗಳು ಪತ್ತೆ; ಸರ್ಜಿಕಲ್ ವಾರ್ಡ್ ಬಂದ್, ರೋಗಿಗಳ ಸ್ಥಳಾಂತರ!
ಅಲ್ಲದೆ, ಠಾಣಾಧಿಕಾರಿ, ಪಿಎಸ್‌ಐ, ಎಎಸ್‌ಐ, ಹೆಡ್‌ ಕಾನ್‌ಸ್ಟೆಬಲ್, ಕಾನ್‌ಸ್ಟೆಬಲ್‌ಗಳ ಕಷ್ಟ-ಸುಖಗಳು ಮತ್ತು ಸಲಹೆ-ಸೂಚನೆಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಡಿಜಿ-ಐಜಿಪಿ ಡಾ. ಅಲೋಕ್‌ ಮೋಹನ್ ಕಟ್ಟಾಜ್ಞೆ ಮಾಡಿದ್ದಾರೆ.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ಇದಲ್ಲದೆ, ವಾರದಲ್ಲಿ ಒಮ್ಮೆಯಾದರೂ ಡಿಸಿಪಿ/ಎಸ್​ಪಿಗಳು ರಾತ್ರಿ ಪಾಳಿ ಕರ್ತವ್ಯ ಮಾಡಬೇಕು. ಕರ್ತವ್ಯನಿರತ ಸಿಬ್ಬಂದಿ ಸರಿಯಾಗಿ ಬೀಟ್ ಮಾಡುತ್ತಿದ್ದಾರಾ, ಇ-ಬೀಟ್ ಮತ್ತು ಆ್ಯಪ್ ವ್ಯವಸ್ಥೆ, ದಾಖಲಾತಿಗಳನ್ನು ಪಾಲಿಸುತ್ತಿದ್ದಾರಾ ಎಂಬುದನ್ನು ಪರಿಶೀಲನೆ ನಡೆಸಬೇಕು. ಇಲ್ಲವಾದರೆ, ಅಂಥವರಿಗೆ ಸರಿಯಾದ ಮಾರ್ಗದರ್ಶನ ಕೊಟ್ಟು ಕರ್ತವ್ಯ ನಿರ್ವಹಿಸುವಂತೆ ಮಾಡಬೇಕು. ಯಾವುದೇ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ಕೊಡುತ್ತೇನೆ ಎಂದು ಡಿಜಿ-ಐಜಿಪಿ ಡಾ.ಅಲೋಕ್ ಮೋಹನ್ ಎಚ್ಚರಿಕೆ ಕೊಟ್ಟಿದ್ದಾರೆ.
30 ದಿನ ರಜೆ ಕೊಡಿ, ಇಲ್ಲಂದ್ರೆ ಒತ್ತಡದಲ್ಲಿ ಏನಾದ್ರೂ ಆದ್ರೆ ನೀವೇ ಜವಾಬ್ದಾರಿ: ಎಸ್​ಪಿಗೆ ಡಿವೈಎಸ್​ಪಿ ಪತ್ರ

ಆಸ್ಪತ್ರೆಯಲ್ಲಿದ್ದ ಸಂಬಂಧಿಯನ್ನು ನೋಡಲು ಬಂದವರೇ ಇನ್ನಿಲ್ಲ!; ತಾಯಿ ಸಾವು, ಮಗ-ಮೊಮ್ಮಗಳಿಗೆ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 2 =
Remember me
