ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಭದ್ರತಾ ಕಾರ್ಯನಿರ್ವಹಿಸುತ್ತಿದ್ದ ಕಾನ್​ಸ್ಟೆಬಲ್​ಗೆ ಕರೊನಾ ಸೋಂಕು ತಗುಲಿದೆ. ದೇವರಜೀವನಹಳ್ಳಿಯ ಎಸ್.ಕೆ. ಗಾರ್ಡನ್ ವಾರ್ಡ್​ನಲ್ಲಿ ನೆಲೆಸಿದ್ದರು. ರೋಗಿ ಸಂಖ್ಯೆ 1,395 ಎಂದು ಗುರುತಿಸಿ ನಿರ್ದಿಷ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಇದನ್ನೂ ಓದಿ:ವೈದ್ಯೆ, ವ್ಯಾಪಾರಿ, ಗರ್ಭಿಣಿಗೆ ಕರೊನಾ | 21 ಸೋಂಕಿತರು ಸೇರ್ಪಡೆ
ಇವರ ಟ್ರಾವೆಲ್ ಹಿಸ್ಟರಿ ಪತ್ತೆ ಹಚ್ಚಲಾಗು ತ್ತಿದ್ದು, ಸೋಂಕು ಹೇಗೆ ತಗುಲಿದೆ ಎಂಬುದು ಗೊತ್ತಾಗಿಲ್ಲ. ಪೇದೆ ಜತೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದ್ದವರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಲಾರಿಗೆ ಸಿಲುಕಿ ಟೋಲ್ ನೌಕರ ಸಾವು
ಮೂಲತಃ ಉತ್ತರ ಕರ್ನಾಟಕ ಭಾಗದವ ರಾದ ಕಾನ್​ಸ್ಟೆಬಲ್, ವಾರದ ಹಿಂದೆ ತಮ್ಮ ಊರಿಗೆ ಹೋಗಿ ಬಂದಿದ್ದರು. 2 ದಿನದ ಹಿಂದೆ ಜ್ವರ ಕಾಣಿಸಿಕೊಂಡಿದೆ. ಶಂಕೆ ಮೇರೆಗೆ ಕರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಭಾನುವಾರ (ಮೇ 31) ವರದಿ ಬಂದಿದ್ದು, ಸೋಂಕು ದೃಢಪಟ್ಟಿದೆ. ಕಾನ್​ಸ್ಟೆಬಲ್ ನೆಲೆಸಿದ್ದ ಮನೆ ಯನ್ನು ಸೋಂಕು ನಿವಾರಣ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದೆ.
11 ತಿಂಗಳ ಮಗು ಬಕೆಟ್​ಗೆ ಬಿದ್ದು ಸಾವು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 4 =
Remember me
