ಬೆಂಗಳೂರು:ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗಗಳನ್ನು ದಾನ ಮಾಡಿದ ಯುವಕನ ಕುಟುಂಬಸ್ಥರನ್ನು ಆರೋಗ್ಯ ಸಚಿವ ದಿಣೇಶ್​ ಗುಂಡೂರಾವ್​ ಭೇಟಿ ಮಾಡಿ ಪ್ರಶಂಶಿಸಿದ್ಧಾರೆ.
ಅಂಗಾಂಗ ದಾನ ನಿಜವಾಗಿ ಆತ್ಮ ಚೈತನ್ಯ ನೀಡುವ ಕಾರ್ಯ ಎಂದು ಸಚಿವ ದಿನೇಶ್​ ಗುಂಡೂರಾವ್​ ಯುವಕನ ಕುಟುಂಬರ್ಸತರ ಭೇಟಿ ಬಳಿಕ ಹೇಳಿದ್ದಾರೆ.
ಯುವಕ ಫರ್ಧಿನ್​ ಖಾನ್​(22) ಜೂನ್​ 4ರಂದು ಮದುವೆ ಸಮಾರಂಭವನ್ನು ಮುಗಿಸಿಕೊಂಡು ಬೆಂಗಳೂರಿನತ್ತ ವಾಪಸ್​ ಆಗುತ್ತಿದ್ದ ವೇಳೆ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಬಳಿ ಅಪರಿಚಿತ ವಾಹನ ಡಿ್ಕಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಫರ್ದಿನ್​ನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸ್ಪರ್ಶ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜೂನ್​ 7ರಂದು ಯುವಕ ಕೊನೆಯುಸಿರೆಳೆದಿದ್ದ. ಮೆದುಳು ನಿಷ್ಕ್ರಿಯಗೊಂಡಿದ್ದರೂ ದೇಹದ ಅಂಗಾಂಗಗಳು ವೆಂಟಿಲೇಟರ್​ನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ವೈದ್ಯರು ಎಂದು ವೈದ್ಯರು ಆತನ ಪೋಷಕರಿಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಕ್ಯಾಶ್​ ಮ್ಯಾನೇಜ್​ಮೆಂಟ್​ ಸರ್ವೀಸ್​ ಕಚೇರಿಗೆ ನುಗ್ಗಿ 7 ಕೋಟಿ ರೂ. ದೋಚಿದ ಖದೀಮರು!
ಮಗನ ಸಾವಿನ ದುಃಖದಲ್ಲಿಯೂ ಆತನ ಪೋಷಕರು​ ಅಂಗಾಂಗಳನ್ನು ದಾನ ಮಾಡುವ ಮೂಲಕ 6 ಜನರಿಗೆ ಮರುಜನ್ಮ ನೀಡುವ ಮೂಲಕ ಸಾರ್ಥಕತೆ ಮೆರದಿದ್ದಾರೆ. ಫರ್ದಿನ್ ಹೃದಯವನ್ನು ನಾರಾಯಣ ಹೃದಯಾಲಯದಲ್ಲಿ ದಾಖಲಾಗಿದ್ದ 57 ವರ್ಷದ ವ್ಯಕ್ತಿಗೆ ಕಸಿ ಮಾಡಲಾಗಿದ್ದು, ಪಿತ್ತಜನಕಾಂಗವನ್ನು ಯಶವಂತಪುರ ಸ್ಪರ್ಶ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 42 ವರ್ಷದ ರೋಗಿಗೆ ಕಸಿ ಮಾಡಲಾಗಿದೆ.
ಎಡ ಮೂತ್ರಪಿಂಡ ಮತ್ತು ಫ್ಯಾಂಕ್ರಿಯಾಸ್‌ನ್ನು ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗೆ ಬಹು ಅಂಗಾಂಗ ಕಸಿ ಮಾಡಲಾಗಿದೆ. ಬಲ ಮೂತ್ರಪಿಂಡವನ್ನು ಸ್ಪರ್ಶ್ ಆಸ್ಪತ್ರೆಯ ರೋಗಿಗೆ ಕಸಿ ಮಾಡಿದರೆ, ಕಣ್ಣಿನ ಕಾರ್ನಿಯಾವನ್ನು ನಾರಾಯಣ ನೇತ್ರಾಲಯಕ್ಕೆ ನೀಡಲಾಗಿದೆ.
ಮುಸ್ಲಿಂ ಸಮುದಾಯದಲ್ಲಿ ಅಂಗಾಂಗ ದಾನಕ್ಕೆ ಧಾರ್ಮಿಕ ಕಟ್ಟುಪಾಡುಗಳಿವೆ. ಆದರೆ, ಫರ್ದಿನ್​ ಕುಟುಂಬ ಧಾರ್ಮಿಕ ಕಟ್ಟುಪಾಡುಗಳನ್ನು ಮೀರಿ ದೇಹದ ಅಂಗಾಂಗಳನ್ನು ದಾನ ಮಾಡುವ ಮೂಲಕ ಆರು ಜನರ ಬದುಕಿಗೆ ಮರುಜೀವ ನೀಡಿದ್ದಾರೆ ಎಂದು ಆರೋಗ್ಯ ಸಚಿವ ದಿಣೇಶ್​ ಗುಂಡೂರಾವ್​ ಪ್ರಶಂಶಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
