ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಅನ್ನಭಾಗ್ಯ ಯೋಜನೆ ಅನುಷ್ಠಾನದ ಕುರಿತಾಗಿ ಬಿಜೆಪಿ ನಾಯಕರ ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಸರಣಿ ಟ್ವೀಟ್​ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್​ ಮಾಡಿರುವ ದಿನೇಶ್​ ರಾಜ್ಯಕ್ಕೆ ಅಕ್ಕಿ‌ ಮಾರಾಟ ಸ್ಥಗಿತ ಮಾಡಿರುವುದು ಆ ಬೆದರಿಕೆಯ ಭಾಗವೇ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಮಧ್ಯಪ್ರದೇಶ; 400 ಕಾರುಗಳ ಬೆಂಗಾವಲಿನೊಂದಿಗೆ ಕಾಂಗ್ರೆಸ್​ ಸೇರ್ಪಡೆಯಾದ ಸಿಂಧಿಯಾ ಆಪ್ತ
ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆ ಕಡಿತ ಎಮದು ಜೆ.ಪಿ. ನಡ್ಡಾ ಚುನಾವಣಾ ಪೂರ್ವದಲ್ಲಿ ರಾಜ್ಯದ ಜನರಿಗೆ ಬೆದರಿಕೆ ಹಾಕಿದ್ದರು. ಅದರೂ ರಾಜ್ಯದ ಜನ ನಡ್ಡಾ ಬೆದರಿಕೆಗೆ ಜಗ್ಗದೆ BJP ಸೋಲಿಸಿದ್ದರು. ಕೇಂದ್ರ ಈಗ ರಾಜ್ಯಕ್ಕೆ ಅಕ್ಕಿ‌ ಮಾರಾಟ ಸ್ಥಗಿತ ಮಾಡಿರುವುದು ಆ ಬೆದರಿಕೆಯ ಭಾಗವೇ ಅಥವಾ ರಾಜ್ಯದ ಜನರ ಮೇಲೆ ಸೋಲಿನ ಪ್ರತಿಕಾರವೇ ಎಂದು ಕಿಡಿಕಾರಿದ್ಧಾರೆ. ‘
ಡಬಲ್ ಇಂಜಿನ್ ಸರ್ಕಾರವಿದ್ದಾಗಲೇ ಕೇಂದ್ರ ರಾಜ್ಯಕ್ಕೆ ಅನ್ಯಾಯ ಎಸಗಿದೆ. ಆಗ ನೆರೆ ಪರಿಹಾರಕ್ಕೂ ಸತಾಯಿಸಿದೆ, ಬರ ಪರಿಹಾರಕ್ಕೂ ಸತಾಯಿಸಿದೆ. GSTಯಲ್ಲಿ ಮೋಸ ಮಾಡಿದರು, ಬಾಕಿ ಕೊಡಲಿಲ್ಲ, ಪರಿಹಾರವನ್ನೂ ಕೊಡಲಿಲ್ಲ. ಈಗ ಡಬಲ್ ಇಂಜಿನ್ ಸರ್ಕಾರವಿಲ್ಲ. ಹೀಗಿರುವಾಗ ಕೇಂದ್ರಕ್ಕೆ ಹಸಿದ ಹೊಟ್ಟೆ‌ ತೋರಿಸಿದರೆ ಮಸೆದ ಕತ್ತಿ ತೋರಿಸದಿರುತ್ತದೆಯೇ ಎಂದು ಸಚಿವ ದಿನೇಶ್​ ಗುಂಡೂರಾವ್​ ಪ್ರಶ್ನಿಸಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:seven − three =
Remember me
