ಬೆಂಗಳೂರು:ಆರು ವರ್ಷ ಕಳೆದರೂ ವೇತನ ಹೆಚ್ಚಳ ಮಾಡದೇ ಇರುವುದಕ್ಕೆ ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ರಾಜ್ಯ ಸಾರಿಗೆ ನೌಕರರು ಮತ್ತೆ ಬೀದಿಗಿಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಜನವರಿ 24ರಂದು ನಾಲ್ಕು ನಿಗಮದ ವಿಭಾಗೀಯ ಕಚೇರಿ ಮುಂದೆ ಹಾಗೂ ಬಿಎಂಟಿಸಿ ನೌಕರರು ಫ್ರೀಡಂ ಪಾರ್ಕ್​​ನಲ್ಲಿ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.
ಸಾವಿರಾರು ನೌಕರರು ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗುತ್ತಿರುವುದರಿಂದ ಮಂಗಳವಾರ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ವೇತನ ಸೇರಿದಂತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2021ರ ಏಪ್ರಿಲ್​ನಲ್ಲಿ 15 ದಿನಗಳ ಕಾಲ ನೌಕರರು ಮುಷ್ಕರ ನಡೆಸಿದ್ದರು. ಆದರೂ ಇಲ್ಲಿಯವರೆಗೆ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸಿದೆ. ಹೀಗಾಗಿ ಮತ್ತೆ ಧರಣಿ ಸತ್ಯಾಗ್ರಹ ನಡೆಸಲು ನೌಕರರು ನಿರ್ಧರಿಸಿದ್ದಾರೆ.

ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು ಆರು ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಿಯಮಬದ್ಧವಾಗಿ 2020 ಮಾರ್ಚ್​ನಲ್ಲಿ ವೇತನ ಪರಿಷ್ಕರಣೆ ಆಗಬೇಕಿತ್ತು. ಹೀಗಾಗಿ ನಿಗಮಗಳ ನಿರ್ಧಾರಕ್ಕೆ ಕೆಎಸ್​​ಆರ್​​ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ 1.30 ಲಕ್ಷ ನೌಕರರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತಸುಬ್ಬರಾವ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ.
2016ರಲ್ಲಿ ಶೇ 12.5 ರಷ್ಟು ವೇತನ ಪರಿಷ್ಕರಣೆ ಆಗಿತ್ತು. ಆದರೆ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟ ನಡೆಸಿ ಒಂದೂವರೆ ವರ್ಷ ಕಳೆದರೂ ಸರ್ಕಾರ ಮಾತ್ರ ಬೇಡಿಕೆ ಈಡೇರಿಸಿಲ್ಲ ಎಂದು ಸಾರಿಗೆ ನೌಕರರು ಆರೋಪಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − eleven =
Remember me
