ಶಿವಮೊಗ್ಗ:ಹುಬ್ಬಳ್ಳಿ-ಧಾರವಾಡ ಬೈಪಾಸ್​ನಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಿವಮೊಗ್ಗದ ವೇದಾ ಮಂಜುನಾಥ (48) ಚಿಕಿತ್ಸೆ ಫಲಿಸದೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟರು.
ವೇದಾ ಕುಟುಂಬಸ್ಥರು ಮೂತ್ರಪಿಂಡ ಹಾಗೂ ಯಕೃತ್​ಗಳನ್ನು ದಾನ ಮಾಡಿ ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ. ಧಾರವಾಡದ ಇಟ್ಟಿಗಟ್ಟಿ ಬಳಿ ಟೆಂಪೋ ಟ್ರಾವೆಲರ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ 11 ಜನ ಮೃತಪಟ್ಟಿದ್ದರು.
ಅಪಘಾತದಲ್ಲಿ ಗಾಯಗೊಂಡಿದ್ದ ವೇದಾ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೇದಾ ಶಿವಮೊಗ್ಗದ ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ ಅವರ ಸಹೋದರ ಎಚ್.ಎಂ.ಮಲ್ಲಪ್ಪ ಸೊಸೆಯಾಗಿದ್ದು ಪತಿ ಮಂಜುನಾಥ್ ಶಿವಮೊಗ್ಗದಲ್ಲಿ ಅಡಕೆ ಮಂಡಿ ವರ್ತಕರಾಗಿದ್ದಾರೆ.
ಅಲ್ಲಿ ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯವಲ್ಲ: ವಿವಾದಕ್ಕೆ ಎಡೆಮಾಡಿಕೊಟ್ಟ ಬಾಂಬೆ ಹೈಕೋರ್ಟ್​ ತೀರ್ಪು!

ಸಲಿಂಗ ವಿವಾಹವಾದ ಒಂದೇ ವರ್ಷದಲ್ಲಿ ಯುವತಿಯ ದುರಂತ ಸಾವು: ಇಬ್ಬರ ನಡುವೆ ನಡೆದಿದ್ದಾದರೂ ಏನು?

VIDEO| ಶ್ರುತಿ ಹಾಸನ್​ ಜತೆ ಲಿಪ್‌ಲಾಕ್ ದೃಶ್ಯದಲ್ಲಿ ಗಾಯಕ ಸಂಜಿತ್ ಹೆಗ್ಡೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + seven =
Remember me
