ಧಾರವಾಡ:ತಂದೆಯಿಂದಲೇ ನೆಲಕ್ಕೆ ಎಸೆಯಲ್ಪಟ್ಟಿದ್ದ ಹೆಣ್ಣು ಮಗು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.
ಶ್ರೇಯಾ (1 ವರ್ಷ) ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ನಿವಾಸಿ.
ನಡೆದಿದ್ದೇನು?:ಕಳೆದ ರಾತ್ರಿ ಮಗು ಅಳುತ್ತಿತ್ತು. ಅಳುವ ಮಗುವಿಗೆ ಸಮಾಧಾನ ಪಡಿಸುವ ಬದಲಿಗೆ ಮಗುವಿನ ಕಾಲು ಹಿಡಿದು ಗೋಡೆಗೆ ಎಸೆದಿದ್ದಾನೆ.ಗೋಡೆಗೆ ರಭಸವಾಗಿ ಎಸೆದ ಪರಿಣಾಮ ಮಗುವಿನ ತಲೆಗೆ ಬಲವಾದ ಪೆಟ್ಟಾಗಿದೆ. ಕೂಡಲೇ ಮಗುವಿನ ತಾಯಿ ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.   ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಸದ್ಯ ಕುಟುಂಬಸ್ಥರಿಂದ ಗರಗ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪಾಪಿ ತಂದೆ ಶಂಬುಲಿಂಗಯ್ಯನನ್ನು ಬಂಧಿಸಿದ್ದಾರೆ.
ದರ್ಶನ್ ನಟನೆಯ ‘ಅರ್ಜುನ್’ ಚಿತ್ರದ ನಟಿಗೆ ಕೂಡಿ ಬಂತು ಕಂಕಣ ಭಾಗ್ಯ



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − thirteen =
Remember me
