ಹುಬ್ಬಳ್ಳಿ:ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಅನುಮತಿ ನೀಡಬಾರದೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಧಾರವಾಡ ಹೈಕೋರ್ಟ್​​ ತಿರಸ್ಕರಿಸಿದೆ ಎಂದು ಬಿಜೆಪಿ ಶಾಸಕ ಅರವಿಂದ​ ಬೆಲ್ಲದ​ ತಿಳಿಸಿದ್ದಾರೆ.
ಅಂಜುಮನ್​ ಸಂಸ್ಥೆ ಸಲ್ಲಿಸಿದ ಅರ್ಜಿ ಈ ಬಾರಿಯೂ ತಿರಸ್ಕೃತಗೊಂಡಿದ್ದು, ನ್ಯಾಯಾಲಯ ಈದ್ಗಾ ಮೈದಾನವನ್ನು ಪಾಲಿಕೆ ಆಸ್ತಿ ಎಂದು ಘೋಷಿಸಿದೆ. ಗಣೇಶೋಸತ್ಸವ ಸಂಬಂಧ ಪಾಲಿಕೆಗೆ ಸಂಪೂರ್ಣ ಅಧಿಕಾರ ನೀಡಲಾಗಿದ್ದು, ಆಯುಕ್ತರು ಈ ಕೂಡಲೇ ಅನುಮತಿ ನೀಡಬೇಕೆಂದು ಆಗ್ರಹಿಸಿದ್ದಾರೆ.
ಕಳೆದ ವರ್ಷದಂತೆ ಈ ವರ್ಷವೂ ಸಹ ಈದ್ಗಾ ಮೈದಾನದಲ್ಲಿ ಗಣೇಶೋತ್ಸವವನ್ನು ನಡೆಸಲು ಅನುಮತಿ ಕೋರಿ ಪಾಲಿಕೆ ಆವರಣದಲ್ಲಿ ಬಿಜೆಪಿ ನಾಯಕರು, ಹಿಂದೂ ಪರ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:VIDEO| ಚಾಲಕನ ನಿಯಂತ್ರಣ ತಪ್ಪಿ ಗೆದ್ದೆಗೆ ಉರುಳಿದ ಬಸ್​
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಅರವಿಂದ್​ ಬೆಲ್ಲದ್​ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಅನುಮತಿ ನೀಡಬಾರದೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಧಾರವಾಡ ಹೈಕೋರ್ಟ್​​ ತಿರಸ್ಕರಿಸಿದೆ. ನ್ಯಾಯಾಲಯ ಈದ್ಗಾ ಮೈದಾನವನ್ನು ಪಾಲಿಕೆ ಆಸ್ತಿ ಎಂದು ಘೋಷಿಸಿದೆ. ಗಣೇಶೋತ್ಸವ ಸಂಬಂಧ ಪಾಲಿಕೆಗೆ ಸಂಪೂರ್ಣ ಅಧಿಕಾರ ನೀಡಲಾಗಿದ್ದು, ಆಯುಕ್ತರು ಈ ಕೂಡಲೇ ಅನುಮತಿ ನೀಡಬೇಕೆಂದು ಶಾಸಕ ಅರವಿಂದ ಬೆಲ್ಲದ ಆಗ್ರಹಿಸಿದ್ದಾರೆ.
ಇತ್ತ ಶಾಸಕ ಅರವಿಂದ್​ ಬೆಲ್ಲದ್​ ಅರ್ಜಿ ತಿರಸ್ಕಾರ ಆಗಿರುವ ಕುರಿತು ಘೋಷಣೆ ಮಾಡುತ್ತಿದ್ದಂತೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಸದಸ್ಯರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ, ಗಣೇಶ ಮೂರ್ತಿಯನ್ನು ಹೊತ್ತು ಸಂಭ್ರಮಿಸಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + eight =
Remember me
