ಧಾರವಾಡ:ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ ಧಾರವಾಡ ಜಿಲ್ಲೆಗೂ ಅನ್​ಲಾಕ್​-2ರ ವಿನಾಯಿತಿ ಅನ್ನು ನೀಡಿದೆ. ಈ ಮೂಲಕ ಪೇಡಾ ನಗರಿಯ ಜನತೆಗೆ ಕೊನೆಗೂ ನ್ಯಾಯ ಲಭಿಸಿದೆ.
ಎರಡನೇ ಅನ್​ಲಾಕ್​ ಸಂಬಂಧ ನಿನ್ನೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು. ಇದಾದ ಬಳಿಕ ಅನ್​ಲಾಕ್​-2 ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಯಿತು. ಆದರೆ, ಈ ವಿನಾಯಿತಿಯಿಂದ ಧಾರವಾಡವನ್ನು ಕೈಬಿಡಲಾಗಿತ್ತು.
ಪಾಸಿಟಿವಿಟಿ ದರ ಶೇ. 5ಕ್ಕಿಂತ ಕಡಿಮೆ ಇದ್ದರೂ ಜಿಲ್ಲೆಗೆ ವಿನಾಯಿತಿ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಇದನ್ನು ಜಿಲ್ಲಾಡಳಿತ ಸರ್ಕಾರದ ಗಮನಕ್ಕೆ ತಂದಿತ್ತು. ನಂತರ ಜಿಲ್ಲಾ ಉಸ್ತುವಾರಿ ಸಚಿವರೇ ಖುದ್ದು ಸಿಎಂಗೆ ಮನವರಿಕೆ ಮಾಡಿಕೊಟ್ಟರು. ಇದಾದ ಬಳಿಕ ಸರ್ಕಾರ ಪರಿಷ್ಕೃತ ಆದೇಶ ಬಿಡುಗಡೆ ಮಾಡಿದೆ.
ಹೀಗಾಗಿ ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳ ಸಾಲಿಗೆ ಧಾರವಾಡವೂ ಸೇರಿಕೊಂಡಿದೆ. ಈ ಜಿಲ್ಲೆಗಳಲ್ಲಿ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.
ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.• ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.• ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.• ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.• ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.• ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.• ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.• ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.
ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿನ ನಿರ್ಬಂಧ ಮತ್ತಷ್ಟು ಸಡಿಲಿಕೆ: ಬಸ್​ ಸಂಚಾರಕ್ಕೆ ಅವಕಾಶ

ಸಹನೆ ಕಳೆದುಕೊಂಡು ಸಾವಿನ ಕದ ತಟ್ಟಿದ ಗೃಹಿಣಿ: ಸಾಯುವ ಮುನ್ನ ಬಿಚ್ಚಿಟ್ಟ ನೋವಿನ ಸಂಗತಿ ಇದು

ಡ್ಯೂಟಿಗೆ ಹಾಜರಾಗಲು ಸರ್ಕಾರಿ ನೌಕರರಿಗೆ ಬುಲಾವ್​; ಗರ್ಭಿಣಿಯರಿಗೆ, ಅಂಗವಿಕಲರಿಗೆ ಮಾತ್ರ ವಿನಾಯಿತಿ

Sign in to your account
Please enter an answer in digits:9 − five =
Remember me
