ಬೆಂಗಳೂರು:ನರೇಂದ್ರ ಮೋದಿ ಅವರು ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತುಹೋಯ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಅನಧಿಕೃತ ಫ್ಲೆಕ್ಸ್‌ ಬ್ಯಾನರ್‌ ಹಾಕಿದ್ದಕ್ಕೆ ಸಚಿವ ಮುನಿಯಪ್ಪ ಬೆಂಬಲಿಗನಿಗೆ 50 ಸಾವಿರ ರೂ. ದಂಡ ಹಾಕಿದ ಬಿಬಿಎಂಪಿ!
ಅವರು ಭಾನುವಾರ ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಪುಟ್ಟಣ್ಣ ಜಯಗಳಿಸಿರುವ ಹಿನ್ನೆಲೆಯಲ್ಲಿ ಕಂಗೇರಿಯ ಸೂಲಿಕೇರಿ ಮೈದಾನದಲ್ಲಿ ಆಯೋಜಿಸಿರುವ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ತುಂಬಾ ಆಶ್ಚರ್ಯ ಆಗಿದೆ:ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿರುವುದು, ಮೋದಿಯವರನ್ನು ವಿಪರೀತ ಹೊಗಳುತ್ತಿರುವುದು ನನಗೆ ತುಂಬಾ ಆಶ್ಚರ್ಯ ಆಗಿದೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಬಯಸುತ್ತೇನೆ. ಬಿಜೆಪಿಗೆ ಯಾವತ್ತೂ ವಿರುದ್ಧವಾಗಿರುತ್ತೇವೆ ಎಂದಿದ್ದರು. ಈಗ ತಮ್ಮಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇವೇಗೌಡರ ಧ್ವಂಧ್ವ ನೀತಿ:ದೇವೇಗೌಡರು ನರೇಂದ್ರ ಮೋದಿಯವರನ್ನು ಈಗ ಹೊಗಳಿದ್ದೆ ಹೊಗಳಿದ್ದು. ನನಗೂ ಅವರಿಗೂ ಅವಿನಾಭಾವ ಸಂಬಂಧ ಇದೆ ಅಂತಲೂ ಎನ್ನುತ್ತಾರೆ. ಗೌಡರು ಹೀಗೇಕಾದರು ಎಂದು ಆಶ್ಚರ್ಯವಾಗಿದೆ. ಇದೇ ದೇವೇಗೌಡರು ನರೇಂದ್ರ ಮೋದಿಯವರು ಪುನಃ ಪ್ರಧಾನಿಯಾದರೆ ನಾನು ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಈಗ ಹೊಗಳುತ್ತಾರೆ. ಹೀಗೆ ಧ್ವಂಧ್ವ ನೀತಿ ಅನುಸರಿಸುತ್ತಿದ್ದಾರೆ. ಈ ದೇಶದ ಪ್ರಧಾನ ಮಂತ್ರಿಯಾಗಿದ್ದವರು ಈ ರೀತಿ ಹೇಳುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ ಎಂದರು.
ಇಂದು ನಾಡಿನ ಜನತೆ ನಿಮ್ಮ ಹಾಗೆ ಪ್ರಜ್ಞಾವಂತರಾಗಿದ್ದಾರೆ. ಇವರ ಹೇಳಿಕೆಗಳನ್ನು ಪರಿಶೀಲಿಸಿ ತುಲನೆ ಮಾಡುವಷ್ಟು ತಿಳಿವಳಿಕೆ ನಾಡಿನ ಜನರಿಗೆ ಬಂದಿದೆ. ರಾಜಕೀಯವಾಗಿ ದೇವೇಗೌಡರು ತಮ್ಮ ಕುಟುಂಬದ ಉಳಿವಿಗಾಗಿ ಯಾವುದೇ ನಿರ್ಧಾರಕ್ಕೆ ಬಂದರೂ ಜನರು ಕಣ್ಣುಮುಚ್ಚಿಕೊಂಡು ಅವರನ್ನು ಬೆಂಬಲಿಸಬೇಕು ಎನ್ನುವ ಸಂದರ್ಭ ಈಗ ಇಲ್ಲ ಎಂದರು ಎಂದು ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಕುಮಾರಸ್ವಾಮಿ ಹೇಳಿದ್ದರು. ಈಗ ಜನರೇ ತೀರ್ಮಾನಿಸಬೇಕು. ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ.ಸುರೇಶ್ ಅವರನ್ನು ಕಣಕ್ಕೆ 4 ಬಾರಿ ಇಳಿಸಲಾಗಿದೆ. ಈ ಕ್ಷೇತ್ರದಲ್ಲಿ ಅವರು ಖಂಡಿತ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ. ಬಿಜೆಪಿಯವರು ನರೇಂದ್ರ ಮೋದಿಯವರ ಹೆಸರಿನಲ್ಲಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆಯೇ ಹೊರತು ಬಿಜೆಪಿಯವರಿಗೆ ಜನರ ಬಳಿ ಹೋಗಲು ಕಾರಣಗಳೇ ಇಲ್ಲ ಎಂದರು.

ಮೂರ್ಖರು ಯಾರೂ ಇಲ್ಲ:ನರೇಂದ್ರ ಮೋದಿಯವರ ಹೆಸರಿನ ಮೇಲೆ ಗೆಲ್ಲುತ್ತೇವೆ ಎಂದು ಬಿಜೆಪಿ ಭಾವಿಸಿದೆ. ನರೇಂದ್ರ ಮೋದಿಯವರು ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಾದಯಾತ್ರೆ ಮಾಡಿದ್ದರೂ ನಮಗೆ 136 ಸ್ಥಾನಗಳು ದೊರೆತವು. ಮೋದಿಯವರು ಪ್ರಚಾರ ಮಾಡಿದ್ದ ಯಾವ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲೇ ಇಲ್ಲ. ಹೀಗಾಗಿ ನರೇಂದ್ರ ಮೋದಿಯವರ ಹೆಸರಿನ ಮೇಲೆಯೇ ಗೆಲ್ಲುತ್ತೇವೆ ಎನ್ನುವ ಇವರಷ್ಟು ಮೂರ್ಖರು ಯಾರೂ ಇಲ್ಲ ಎಂದು ಲೇವಡಿ ಮಾಡಿದರು.
ಗೇಯುವ ಎತ್ತಿಗೆ ಹುಲ್ಲು ಹಾಕಬೇಕು:ಕೊಟ್ಟ ಮಾತಿನಂತೆ ನಡೆದುಕೊಳ್ಳವವರು, ಕೆಲಸ ಮಾಡಿರುವವರಿಗೆ ತಾನೇ ಕೂಲಿ ಕೊಡುವುದು. ಗೇಯುವ ಎತ್ತಿಗೆ ಹುಲ್ಲು ಹಾಕಬೇಕು. ಕಳ್ಳ ಎತ್ತಿಗೆ ಹುಲ್ಲು ಹಾಕಬಾರದು ಎಂದರು. ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ಅವರು 28 ಕ್ಕೆ 28 ಗೆಲ್ಲುತ್ತೇವೆ ಎಂದುಕೊಂಡಿದ್ದಾರೆ. 2023- 24 ರಲ್ಲಿ ಕರ್ನಾಟಕದಿಂದ 4.30 ಲಕ್ಷ ಕೋಟಿ ರೂಪಾಯಿ ಈ ವರ್ಷ ತೆರಿಗೆ ಸಂಗ್ರಹಿಸಿ ನೀಡಲಾಗಿದೆ. ಆದರೆ ನಮಗೆ 50, 257 ಕೋಟಿ ರೂ ಮಾತ್ರ ವಾಪಾಸ್ ಬಂದಿದೆ. ಇದು ಅತ್ಯಂತ ಅನ್ಯಾಯ. ಹೀಗಾದರೆ ಕರ್ನಾಟಕದ ಅಭಿವೃದ್ಧಿ ಹೇಗಾಗಬೇಕು. ತೆರಿಗೆ ಹಂಚಿಕೆಯಲ್ಲಿ ನಮಗೆ ನ್ಯಾಯ ನೀಡಬೇಕು ಎಂದು ಇಡಿ ರಾಜ್ಯದ ಜನರೇ ಪ್ರಶ್ನಿಸುತ್ತಿದ್ದಾರೆ ಎಂದರು.
ರಾಜಕೀಯ ಅಖಾಡಕ್ಕೆ ಯೂಸುಫ್‌ ಪಠಾಣ್: ಟಿಎಂಸಿ ಅಭ್ಯರ್ಥಿಯಾಗಿ ಈ ಕ್ಷೇತ್ರದಿಂದ ಕಣಕ್ಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + fourteen =
Remember me
