ಬೆಂಗಳೂರು:‘ನಮ್ಮನ್ನು ಒಡೆದು ಆಳೋಕೆ ನೋಡಿದರು’ ಎಂದು ಈ ಹಿಂದೆ ನಡೆದಿದ್ದ ಕೆಲವು ಘಟನೆಗಳನ್ನು ಉಲ್ಲೇಖಿಸಿದ ಗೃಹಸಚಿವ ಡಾ.ಜಿ. ಪರಮೇಶ್ವರ್​ ತಮ್ಮ ಮಾತುಗಳ ಮೂಲಕ ಒಂದಷ್ಟು ಅಸಮಾಧಾನ ಹೊರ ಹಾಕಿದಂಥ ಪ್ರಸಂಗ ನಡೆದಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ನಡೆದ ಪರಿಶಿಷ್ಟ ಸಮುದಾಯಗಳ ಸಹೋದರತ್ವ ಸಮಾವೇಶ ಹಾಗೂ ದಲಿತ ಸಮುದಾಯದ ಸಚಿವರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ನಮ್ಮ ಪಕ್ಷದ ಆಂತರಿಕ ವಲಯದಲ್ಲಿ ಗೆಲುವಿನ ಪರಾಮರ್ಶೆ ಮಾಡುವಾಗ ಈ ಬಾರಿ ದಲಿತರು ನಮ್ಮ ಕೈ ಹಿಡಿದಿದ್ದಾರೆ, ಮುಸ್ಲಿಮರು ಶೇ.100 ನಮ್ಮ ಕೈ ಹಿಡಿದಿದ್ದಾರೆ ಅಂತ ಹೇಳುತ್ತಾರೆ. ನಮ್ಮ ಬಗ್ಗೆ ಈಗ ಎಲ್ಲರಿಗೆ ಗೊತ್ತಾಗಿದೆ, 51 ಮೀಸಲು ಕ್ಷೇತ್ರಗಳ ಪೈಕಿ 32ರಲ್ಲಿ ಗೆದ್ದಿದ್ದೇವೆ ಎಂದು ಪರಮೇಶ್ವರ್ ಹೇಳಿದರು.
ಇದನ್ನೂ ಓದಿ:ಮೂರನೇ ಮಗುವಾದರೆ 5 ಲಕ್ಷ ರೂ. ಕೊಡ್ತಾರಂತೆ!; ಶಿಕ್ಷಣ-ಚಿಕಿತ್ಸೆಯೂ ಉಚಿತ, ಮದ್ವೆ ಖರ್ಚಿಗೂ ಧನಸಹಾಯ: ಇಲ್ಲಿದೆ ವಿವರ..
ಕಾಂಗ್ರೆಸ್ 2018ರಲ್ಲಿ ಸೋಲು ಕಂಡಿತು. ಯಾವ ಸಮುದಾಯವನ್ನು ಕಡೆಗಣಿಸಿದರೋ ಅದರಿಂದ ಪಾಠ ಕಲಿಯಬೇಕಾಯಿತು ಎಂದ ಪರಮೇಶ್ವರ್, ದಲಿತರನ್ನು ಸಿಎಂ ಮಾಡದ್ದಕ್ಕೇ ಕಾಂಗ್ರೆಸ್ ಸೋತಿತು ಎಂದು ಪರೋಕ್ಷವಾಗಿ ಹೇಳಿದರು.
ನಮ್ಮ ನಾಯಕರು ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಜಗಜೀವನ್​ರಾಮ್ ಜಯಂತಿ‌ ಮಾಡಲು ಹೇಳಿದರು, ನನ್ನ ನೇತೃತ್ವದಲ್ಲಿ ಅಂಬೇಡ್ಕರ್ ಜಯಂತಿ ಮಾಡಲಿಕ್ಕೆ ಹೇಳಿದರು. ಅಲ್ಲೂ ನಮ್ಮನ್ನು ಒಡೆದು ಆಳೋಕೆ ನೋಡಿದರು ಎಂದ ಪರಮೇಶ್ವರ್​, ‘ಜಗಜೀವನ್​ರಾಮ್ ಎಡಗೈ, ಅಂಬೇಡ್ಕರ್ ಬಲಗೈ ಅಂತ ನಮಗೆ ಮಾಡಲು ಹೇಳುತ್ತಿದ್ದಾರೆ. ನಾವು ಮಾಡುವುದು ಬೇಡ, ಒಪ್ಪುವುದೂ ಬೇಡ ಅಂತ ಮುನಿಯಪ್ಪಗೆ ನಾನೇ ಹೇಳಿದೆ’ ಎಂದು ತಿಳಿಸಿದರು.
ಇದನ್ನೂ ಓದಿ:ಅವನನ್ನು ಸೋಲಿಸಿ ಎಂದು ದೇವೇಗೌಡ್ರು ಎದೆ ಬಡ್ಕಂಡ್ರು, ಆದ್ರೂ ನಾನು ಹೆಚ್ಚಿನ ಅಂತರದಲ್ಲಿ ಗೆದ್ದೆ: ಸಚಿವ ಕೆ.ಎನ್.ರಾಜಣ್ಣ
2013ರಲ್ಲಿ ನಾನೇ ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ನನ್ನ ನೇತೃತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂತು. ಆದರೆ ನನ್ನ ನೇತೃತ್ವದಲ್ಲಿ ಅಧಿಕಾರಕ್ಕೆ ಬಂತು ಅಂತ ಯಾರೂ ಹೇಳಲಿಲ್ಲ, ನಾನೂ ಹೇಳಿಕೊಳ್ಳಲಿಲ್ಲ ಎಂದು ಪರಮೇಶ್ವರ್ ಅಂದಿನ ಗೆಲುವಿನ ಕುರಿತು ಇಂದು ತಮ್ಮ ಮನದಾಳದ ಅನಿಸಿಕೆಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ, ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮುಂತಾದವರು ಉಪಸ್ಥಿತರಿದ್ದರು.
ಇದನ್ನು ಕುಡಿದರೆ ಹೃದಯಾಘಾತದ ಸಾಧ್ಯತೆ ತೀರಾ ಕಡಿಮೆ ಅಂತೆ!; ಏನಿದು, ಎಷ್ಟು ಕುಡಿಯಬೇಕು?

ಇನ್ನು ಹಾಡು ಕೇಳುತ್ತ ಸ್ನಾನ ಮಾಡಲ್ಲ ಎಂದು ಕ್ಷಮೆ ಕೋರಿದ ವಿದ್ಯಾರ್ಥಿನಿ!; ದಯವಿಟ್ಟು ಫೋನ್​ ಹಿಂದಿರುಗಿಸಿ ಎಂದು ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
