ತುಮಕೂರು:ಊಟ-ತಿಂಡಿಯ ಕುರಿತಂತೆ ಹೋಟೆಲ್ ಬಿಲ್ ಪಾಸ್ ಮಾಡಲಿಕ್ಕೂ ಲಂಚ ತಿನ್ನಲು ಮುಂದಾದ ಶಿಕ್ಷಣ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ (ಡಿಐಇಟಿ) ಪ್ರಾಂಶುಪಾಲ ರಾಮಕೃಷ್ಣಯ್ಯ ಆರೋಪಿ.
ತುಮಕೂರು ಲೋಕಾಯುಕ್ತ ಡಿವೈಎಸ್​​ಪಿ ರವೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮಧುಗಿರಿ ಶೈಕ್ಷಣಿಕ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ (ಡಿಐಇಟಿ) ಪ್ರಾಂಶುಪಾಲ ರಾಮಕೃಷ್ಣಯ್ಯ ಅವರನ್ನು ಲಂಚ ಪಡೆಯುವಾಗಲೇ ಬಲೆಗೆ ಕೆಡವಿಕೊಂಡಿದ್ದಾರೆ.
ಊಟ-ತಿಂಡಿಯ ಬಾಬ್ತು ಹೋಟೆಲ್ ಬಿಲ್ ಪಾಸ್ ಮಾಡಲು ರಾಮಕೃಷ್ಣಯ್ಯ 17 ಸಾವಿರ ರೂ. ಲಂಚ ಕೇಳುತ್ತಿದ್ದಾರೆ ಎಂಬುದಾಗಿ ಹನುಮಂತರಾಜು ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ರಾಮಕೃಷ್ಣಯ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಕೊನೆಗೂ 36 ವರ್ಷಗಳ ನರಕಯಾತನೆಯಿಂದ ಬಿಡುಗಡೆ; ಮಗಳನ್ನು ಕತ್ತಲೆ ಕೋಣೆಯಲ್ಲಿ ಬಂಧಿಸಿಟ್ಟಿದ್ದ ತಂದೆ!
ಇಲ್ಲಿ ಮದ್ಯಪಾನ ಮಾಡಿ ಸಿಕ್ಕಿಬಿದ್ದರೂ ವಿಐಪಿ ಆತಿಥ್ಯ!; ಅದಕ್ಕೆಂದೇ ವಿಶೇಷ ಸೆಲ್..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
