ಬೆಂಗಳೂರು:ರಸ್ತೆ ಗುಂಡಿಗಳನ್ನು ಮುಚ್ಚದಿರುವುದು ಹಾಗೂ ರಸ್ತೆ ಕಾಮಗಾರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿಯು ರಸ್ತೆ ಗುಂಡಿಗಳ ಸುತ್ತ ರಂಗೋಲಿ ಬಿಡಿಸುವ ಮೂಲಕ ಶನಿವಾರದಂದು ವಿನೂತನ ಪ್ರತಿಭಟನೆ ನಡೆಸಿತು.
ಮಾಧ್ಯಮಗಳೊಂದಿಗೆ ಮಾತನಾಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು, “ಬೆಂಗಳೂರಿನ ರಸ್ತೆಗಳ ಅಭಿವೃದ್ಧಿಗೆ 20,000 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈಗ ಬಿಬಿಎಂಪಿ ಚುನಾವಣೆ ಸಮೀಪದಲ್ಲಿ ಇರುವಾಗ, ಮತ್ತೆ 6,500 ಕೋಟಿ ರೂ. ಖರ್ಚು ಮಾಡಲು ಸರ್ಕಾರ ನಿರ್ಧರಿಸಿದೆ. ಆದರೆ ಗುಣಮಟ್ಟದ ತೇಪೆ ಹಾಕಿ ಗುಂಡಿಗಳನ್ನು ತುಂಬಿಸುವ ಬದಲು ತಮ್ಮ ಜೇಬನ್ನು ತುಂಬಿಸಿಕೊಳ್ಳುತ್ತಿದ್ದಾರೆ. ಗುಂಡಿಗಳಿಗೆ ಸಂಬಂಧಿಸಿ ತಪ್ಪು ಮಾಹಿತಿ ನೀಡಿ ಹೈಕೋರ್ಟ್‌ನಿಂದ ಬಿಬಿಎಂಪಿಯು ಛೀಮಾರಿ ಹಾಕಿಸಿಕೊಂಡಿದೆ. ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಸುಳ್ಳು ಹೇಳುತ್ತಿರುವ ಸರ್ಕಾರಕ್ಕೆ ಕಾರಣಬೇಕೆಂದೇ ರಂಗೋಲಿ ಹಾಕಿ ಅಲಂಕಾರ ಮಾಡಲಾಗುತ್ತಿದೆ” ಎಂದು ಹೇಳಿದರು.
ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, “ಕಳೆದ ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಜನರು ರಸ್ತೆ ಗುಂಡಿಗಳಿಗೆ ಬಲಿಯಾಗಿದ್ದಾರೆ. ಲೆಕ್ಕವಿಲ್ಲದಷ್ಟು ಅಪಘಾತಗಳು ಸಂಭವಿಸಿವೆ. ಆದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗಿಲ್ಲ. ಕಳಪೆ ಕಾಮಗಾರಿಯಿಂದಾಗಿ, ದುರಸ್ತಿಪಡಿಸಲಾದ ರಸ್ತೆಗಳಲ್ಲೂ ಮತ್ತೆ ಗುಂಡಿಗಳಾಗಿವೆ. ಹಾಕಲಾಗಿದ್ದ ತೇಪೆ ಒಂದೇ ಮಳೆಗೆ ಕಿತ್ತುಹೋಗಿದೆ. ಒಂದೆಡೆ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ರಸ್ತೆ ಕಾಮಗಾರಿ ಹೆಸರಿನಲ್ಲಿ ಸಾವಿರಾರು ಕೋಟಿ ತೆರಿಗೆ ಹಣವು ಜನಪ್ರತಿನಿಧಿಗಳ ಜೇಬು ಸೇರಿದೆ. ಇವೆರಡನ್ನೂ ನೋಡಿ ಎಎಪಿಯು ಸುಮ್ಮನಿರುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.
ಕಾಟನ್‌ಪೇಟೆಯ ತವಕ್ಕಲ್‌ ಮಸ್ತಾನ್‌ ದರ್ಗಾ, ಬಸವೇಶ್ವರ ನಗರ ಪೊಲೀಸ್‌ ಸ್ಟೇಷನ್‌, ವಸಂತ ನಗರದ ಚಂದ್ರಿಕಾ ಹೋಟೆಲ್‌, ಮಲ್ಲೇಶ್ವರದ ದತ್ತಾತ್ರೇಯ ದೇವಸ್ಥಾನ ಹಾಗೂ ಬಳೇಪೇಟೆ ಸಮೀಪ ವಿವಿಧ ರಸ್ತೆಗಳಲ್ಲಿರುವ ಗುಂಡಿಗಳ ಸುತ್ತ ರಂಗೋಲಿ ಬಿಡಿಸಿದ ಎಎಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪಕ್ಷದ ಮುಖಂಡರಾದ ವಿಜಯ್ ಶಾಸ್ತ್ರಿಮಠ, ಬಿ.ಟಿ.ನಾಗಣ್ಣ, ಜಗದೀಶ್‌ ವಿ. ಸದಂ, ರಾಜಶೇಖರ್‌ ದೊಡ್ಡಣ್ಣ, ಉಷಾ ಮೋಹನ್‌, ಜಗದೀಶ್‌ ಚಂದ್ರ, ಗೋಪಿನಾಥ್, ಗುರುಮೂರ್ತಿ ಹಾಗೂ ಅನೇಕ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಮತ್ತೆ ಬಣ್ಣ ಹಚ್ಚಿದ್ರು ನಟಿ ನೀತೂ ಶೆಟ್ಟಿ; ಈಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಕುಂಜೆ..

ಸಪ್ತ ಸುರಂಗದಾಚೆ ಎಲ್ಲೋ ಅಂತರ್ಜಲವು ಕಾದಿದೆ; ಅಭಿನವ ಭಗೀರಥಗೀಗ ಪದ್ಮಗೌರವವು ಸಂದಿದೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
