ಬೆಂಗಳೂರು:ಚಾಮರಾಜಪೇಟೆ ಕೊಲೆ ಪ್ರಕರಣದ ಬಗ್ಗೆ ಸಿ.ಟಿ.ರವಿ,ರವಿಕುಮಾರ್​,ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್​ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ ಉದ್ದೇಶವಾಗಿದ್ದು, ಇದು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ಇವರಿಂದ ಸಾಧ್ಯವಿಲ್ಲ. ಇದರಿಂದ ದೇಶ ಹಾಗೂ ರಾಜ್ಯವೂ ಅಭಿವೃದ್ಧಿಯಾಗಲ್ಲ, ಬಿಜೆಪಿಯವರು ತಮ್ಮ ಸ್ವಾರ್ಥಕ್ಕಾಗಿ, ವೋಟಿಗಾಗಿ, ಭಾಷೆ,ಧರ್ಮ,ದ್ವೇಷದ ವಿಚಾರವನ್ನು ಮುಂದೆ ತಂದು ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಹೇಳಿದರು.
ಶಿವಮೊಗ್ಗದ ಹರ್ಷ ಹತ್ಯೆ ಪ್ರಕರಣದ ತನಿಖೆಯನ್ನು ಎನ್ ಐ ಎಗೆ ವಹಿಸಲಾಗಿದೆ. ಯಾರಾದರೂ ತನಿಖೆ ನಡೆಸಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಸರ್ಕಾರ ಇದೇ ನಿಲುವನ್ನು ದಿನೇಶ್ ಮತ್ತು ಸುಭಾನ್ ಹತ್ಯೆ ವಿಚಾರದಲ್ಲಿಯೂ ಅನುಸರಿಸಲಿ ಎಂದರು.
ದಿನೇಶ್ ಕೊಲೆಗೆ ಭಜರಂಗ ದಳ, ಸುಭಾನ್ ಹತ್ಯೆಗೆ ಶ್ರೀರಾಮಸೇನೆ ಕಾರಣ. ಹರ್ಷ ಕುಟುಂಬದವರಿಗೆ 25 ಲಕ್ಷ ಪರಿಹಾರ ನೀಡಿದಂತೆ ದಿನೇಶ್ ಮತ್ತು ಸುಭಾನ್ ಕುಟುಂಬದವರಿಗೂ ಕೊಡಲಿ. ಕಾನೂನು ಎಲ್ಲರಿಗೂ ಒಂದೆ. ಇದರಲ್ಲಿ ತಾರತಮ್ಯ ಬೇಡ.ಹಿಜಾಬ್ ಗದ್ದಲದಿಂದ ಇಲ್ಲಿಯವರೆಗೆ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ.ಯಾವುದೇ ಪ್ರಕರಣದಲ್ಲಿ ನಾವು ತಪ್ಪಿತಸ್ಥರು, ಕಾನೂನಿಗೆ ವಿರುದ್ಧವಾಗಿ ವರ್ತಿಸುವವರ ಪರ ನಿಲ್ಲುವುದಿಲ್ಲ.ಯಾರೇ ತಪ್ಪು ಮಾಡಿದರೆ, ಕಾನೂನು ಉಲ್ಲಂಘಿಸಿದರೆ ಶಿಕ್ಷೆಯಾಗಲಿ ಎಂದು ಹೇಳಿದರು.
ಕಾನೂನು ಸುವ್ಯವಸ್ಥೆ ಸರಿ ಇಲ್ಲ, ದ್ವೇಷದ ವಾತಾವರಣ ಇದೆ, ಸಮಾಜದಲ್ಲಿ ಅಶಾಂತಿ ಉಂಟಾಗಿದೆ ಎಂಬ ಕಾರಣಕ್ಕೆ ಕೈಗಾರಿಕೆಗಳು ರಾಜ್ಯದಿಂದ ಹೊರಗೆ ಹೋಗುತ್ತಿವೆ.ಬಂಡವಾಳ ಬರಬೇಕಾದರೆ ರಾಜ್ಯದಲ್ಲಿ ಉತ್ತಮ ವಾತಾವರಣ ಇರಬೇಕು. ಅಂತಹ ವಾತಾವರಣವನ್ನು ಬಿಜೆಪಿಯವರು ಹಾಳು ಮಾಡುತ್ತಿದ್ದಾರೆ ಎಂದು ದೂರಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × 1 =
Remember me
