ಬೆಂಗಳೂರು:ಬಿಜೆಪಿ ಮತ್ತು ಜೆಡಿಎಸ್​ ಕುರಿತು ಸರಣಿ ಟ್ವೀಟ್​ ಮಾಡುವ ಮುಖೇನ ವ್ಯಂಗ್ಯವಾಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್​​, ಬಿಜೆಪಿಯ ಬಿ ಟೀಂ ಜೆಡಿಎಸ್​​ ಎಂದು ನಾವು ಅನೇಕ ಬಾರಿ ಹೇಳಿದ್ದೆವು ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:ಸರ್ಕಾರ ಕೃಷಿ ಕೂಲಿಕಾರರ ಸಮಸ್ಯೆಗೆ ಸ್ಪಂದಿಸಲಿ; ಯು.ಬಸವರಾಜ್ ಒತ್ತಾಯ
ಈ ಕುರಿತು ಟ್ವೀಟ್​​ ಮಾಡಿರುವ ಸಚಿವ ದಿನೇಶ್​ ಗುಂಡೂರಾವ್​​, “ಈಗ ಎಚ್​.ಡಿ. ಕುಮಾರಸ್ವಾಮಿ ಅವರು ನಮ್ಮ‌ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. ಜೆಡಿಎಸ್​​ ಪಕ್ಷಕ್ಕೆ ಯಾವುದೇ ತತ್ವ ಸಿದ್ದಾಂತಗಳಿಲ್ಲ.‌ ಕೋಮುವಾದಿ ಪಕ್ಷ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜನತಾದಳಗೆ ಯಾವ ಸಿದ್ದಾಂತವಿದೆ? ಅದೊಂದು ಅವಕಾಶವಾದಿ ಪಕ್ಷ.‌ ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ” ಎಂದು ಟ್ವೀಟ್​​ ಮಾಡಿದ್ದಾರೆ.
2JDS ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ.
2006 ರಲ್ಲಿ BJP ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ HDK ಎಳ್ಳು‌ ನೀರು ಬಿಟ್ಟಿದ್ದರು.
ಆಗಲೇ JDSನ ಅವನತಿ ಶುರುವಾಗಿದ್ದು.
2004ರಲ್ಲಿ 59 ಸ್ಥಾನ ಗೆದ್ದಿದ್ದ JDS ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯಾತೀತ ಸಿದ್ದಾಂತವೇ ಕಾರಣ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao)July 16, 2023

“ಜೆಡಿಎಸ್​​ ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006 ರಲ್ಲಿ ಬಿಜೆಪಿ ಜತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ ಎಚ್​​ಡಿಕೆ ಎಳ್ಳು‌ ನೀರು ಬಿಟ್ಟಿದ್ದರು. ಆಗಲೇ ಜೆಡಿಎಸ್​​ನ ಅವನತಿ ಶುರುವಾಗಿದ್ದು. 2004 ರಲ್ಲಿ 59 ಸ್ಥಾನ ಗೆದ್ದಿದ್ದ ಜನತಾದಳ ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯಾತೀತ ಸಿದ್ದಾಂತವೇ ಕಾರಣ” ಎಂದು ಟ್ವೀಟ್​​ನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ:ಭಾರತದ ಪಬ್‍ಜಿ ಆಟಗಾರನೊಂದಿಗೆ ಮದುವೆಯಾದ ಪಾಕ್‍ ಮಹಿಳೆಗೆ ಸಾಮಾಜಿಕ ಬಹಿಷ್ಕಾರ!
“ಬಿಜೆಪಿಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ ಕುಮಾರಸ್ವಾಮಿ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ ಎಚ್​​ಡಿಕೆ ಅವರ ಸುಳ್ಳು ಜಾತ್ಯಾತೀತತೆಯ ನಕಲಿ‌ ಶ್ಯಾಮನ ಅವತಾರ ಕೊನೆಯಾಗಲಿ‌” ಎಂದು ಟ್ವೀಟ್​​ ಮುಖೇನ ವ್ಯಂಗ್ಯವಾಡಿದ್ದಾರೆ.
3BJPಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ HDK, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ.
ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು.
ಈ ಮೂಲಕವಾದರೂ HDKಯವರ ಸುಳ್ಳು ಜಾತ್ಯಾತೀತತೆಯ ನಕಲಿ‌ ಶ್ಯಾಮನ ಅವತಾರ ಕೊನೆಯಾಗಲಿ‌.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao)July 16, 2023

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three + one =
Remember me
