ಬೆಂಗಳೂರು:ಇತ್ತೀಚೆಗಷ್ಟೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಏಕದಿನ ವಿಶ್ವಕಪ್​ ಪಂದ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖದ್ದಾಗಿ ಸ್ಟೇಡಿಯಂಗೆ ತೆರಳಿ ವೀಕ್ಷಿಸಿದರು. ಸದ್ಯ ಈ ಒಂದು ವಿಚಾರ ಇದೀಗ ವಿಪಕ್ಷಗಳಲ್ಲಿ ತೀವ್ರ ಚರ್ಚೆಯಾಗುತ್ತಿದ್ದು, ಜೆಡಿಎಸ್​ ನಾಯಕ ಎಚ್.​​ಡಿ. ಕುಮಾರಸ್ವಾಮಿ ಸಿಎಂ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ಭಾರತೀಯ ಸೈನಿಕನ ನಿಗೂಢ ಸಾವು; ಇದು ದೇಶದ ಅಗ್ನಿವೀರರ ಪೈಕಿ ಮೊದಲ ಮರಣ!
ಸಿಎಂ ಸಿದ್ದರಾಮಯ್ಯ ಅವರು ವಿದ್ಯುತ್ ಕ್ಷಾಮ ಮತ್ತು ಬರದಲ್ಲಿ ಜನರು ಬೆಯುತ್ತಿದ್ದರೆ ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್​ ಗುಂಡೂರಾವ್​ ಎಚ್​ಡಿಕೆ ವಿರುದ್ಧ ಟ್ವೀಟ್​ ಮುಖೇನ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ರಾಜಕೀಯ ಪ್ರಚಾರಕ್ಕೆ ಸೇನೆ ದುರ್ಬಳಕೆ; ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
“ಬೆಂಗಳೂರಲ್ಲಿ ನಡೆದ ವಿಶ್ವಕಪ್‌ನ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಮ್ಯಾಚ್ ವೀಕ್ಷಿಸಿದ ಮುಖ್ಯಮಂತ್ರಿಗಳನ್ನು ಕುಮಾರಸ್ವಾಮಿ ಟೀಕಿಸಿದ್ದಾರೆ. ಮ್ಯಾಚ್ ನೋಡಲು ಹೋದ ಸಿದ್ದರಾಮಯ್ಯರನ್ನು ಪಾಕಿಸ್ತಾನಕ್ಕೆ ಸಪೋರ್ಟ್ ಮಾಡಲು ಹೋಗಿದ್ದಾರೆ ಎಂದಿದ್ದಾರೆ. ಇದೆಂಥಾ ಸಂಕುಚಿತ ಮನಸ್ಥಿತಿ, ಕ್ರಿಕೆಟ್ ವೀಕ್ಷಣೆಯಲ್ಲೂ ರಾಜಕೀಯ ಮಾಡುವ ಅಗತ್ಯವಿತ್ತೆ? ಏನಾಗಿದೆ ಎಚ್​ಡಿಕೆಯವರಿಗೆ?” ಎಂದು ಪ್ರಶ್ನಿಸಿದ್ದಾರೆ.
2ವಿಶ್ವಕಪ್‌ನಂತಹ ಪ್ರಮುಖ ಟೂರ್ನಿಯೊಂದರ ಪಂದ್ಯ ಬೆಂಗಳೂರಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ನಡೆದ Aus v/s Pak ಪಂದ್ಯವನ್ನು ಸಾವಿರಾರು ಜನ ಟಿಕೆಟ್ ಖರೀದಿಸಿ ವೀಕ್ಷಿಸಿದ್ದಾರೆ.
ಹಾಗಾದರೆ HDKಯವರ ಪ್ರಕಾರ ಅವರೆಲ್ಲರೂ ಪಾಕಿಸ್ತಾನಕ್ಕೆ ಸಪೋರ್ಟ್ ಮಾಡಲು ಹೋಗಿದ್ದರೆ?
BJP ಸಖ್ಯ ಬೆಳೆಸಿದ ಕೂಡಲೇ HDKಯವರ ಮನಸ್ಸು ಇಷ್ಟು ಕಲುಷಿತವಾಯಿತೆ.?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao)October 22, 2023

“ವಿಶ್ವಕಪ್‌ನಂತಹ ಪ್ರಮುಖ ಟೂರ್ನಿಯೊಂದರ ಪಂದ್ಯ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ನಡೆದ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ಪಂದ್ಯವನ್ನು ಸಾವಿರಾರು ಜನ ಟಿಕೆಟ್ ಖರೀದಿಸಿ ವೀಕ್ಷಿಸಿದ್ದಾರೆ. ಹಾಗಾದರೆ ಎಚ್​.ಡಿ. ಕುಮಾರಸ್ವಾಮಿ ಅವರ ಪ್ರಕಾರ ಅವರೆಲ್ಲರೂ ಪಾಕಿಸ್ತಾನಕ್ಕೆ ಸಪೋರ್ಟ್ ಮಾಡಲು ಹೋಗಿದ್ದರೆ? ಬಿಜೆಪಿ ಸಖ್ಯ ಬೆಳೆಸಿದ ಕೂಡಲೇ ಎಚ್​ಡಿಕೆಯವರ ಮನಸ್ಸು ಇಷ್ಟು ಕಲುಷಿತವಾಯಿತೆ?” ಎಂದು ಟ್ವೀಟ್​ ಮಾಡಿ ತಿರುಗೇಟು ನೀಡಿದ್ದಾರೆ.
ಹೇಳಿದ್ದೇ ಹೇಳುವ ಕಿಸುಬಾಯಿ ದಾಸನಿಗೆ ಗೊತ್ತಿರುವುದು ಎರಡೇ…..: ಎಚ್​ಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
