ಬೆಂಗಳೂರು:ಹಠಾತ್ ಹೃದಯಾಘಾತ ತಡೆಯುವ ನಿಟ್ಟಿನಲ್ಲಿ ಪುನೀತ್ ರಾಜಕುಮಾರ್ ಹೆಸರಲ್ಲಿ ಹೊಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೃದಯಘಾತಕ್ಕೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಯೋಜನೆಗೆ ಮುಂದಾಗಿದೆ. ಬಜೆಟ್​ನಲ್ಲಿ ಘೋಷಣೆ ಮಾಡಿದಂತೆ ಅಪ್ಪು ಯೋಜನೆ ಜಾರಿಗೆ ತರುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬೆಂಗಳೂರಿನ ಗಾಂಧಿನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡುತ್ತಾ, ಮೊದಲ ಹಂತದಲ್ಲಿ ಜಯದೇವ ಆಸ್ಪತ್ರೆಯನ್ನು ಈ ಯೋಜನೆಗೆ ಹಬ್ ಮಾಡಲಾಗಿದೆ. ಕೇವಲ ಆಸ್ಪತ್ರೆ ಮಾತ್ರವಲ್ಲ ಸಾರ್ವಜನಿಕ ಸ್ಥಳಗಳಲ್ಲಿಯೂ Automated External Defibrillators (AED )ಅಳವಡಿಕೆ ಮಾಡಲಾಗುತ್ತದೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್, ವಿಮಾನ ನಿಲ್ದಾಣ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ AED ಅಳವಡಿಕೆ ಮಾಡುತ್ತೇವೆ ಎಂದರು.
ಇದನ್ನೂ ಓದಿ:ಮಲಗಿದ್ದಲ್ಲೇ ಪ್ರಾಣ ಬಿಟ್ಟಿದ್ದ ಇಬ್ಬರು ಮಹಿಳೆಯರು: ಕೃತ್ಯದ ಹಿಂದಿತ್ತು ಪರಿಚಿತ ಪುರುಷನ ಕೈವಾಡ?
ಸಾರ್ವಜನಿಕ ಸ್ಥಳಗಳಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಂಡು ಬಂದರೆ, ಸ್ಥಳದಲ್ಲಿಯೇ ತುರ್ತು ಚಿಕಿತ್ಸೆ ನೀಡಲಾಗುತ್ತೆ. ಗೋಲ್ಡನ್ ಟೈಮ್ ನಲ್ಲಿ ಟ್ರೀಟ್ ಮೆಂಟ್ ಬಳಿಕ ಆಸ್ಪತ್ರೆಗೆ ಶೀಫ್ಟ್ ಮಾಡಬಹುದು. ರೋಗಿಯನ್ನು ಉಳಿಸಲು ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ.
ಹೃದಯಾಘಾತದ ಸಮಯದಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆಯಲ್ಲಿಯೇ ಸಾವು ಸಂಭವಿಸುತ್ತಿವೆ. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿಯೇ ಹೃದಯಾಘಾತ ತಪ್ಪಿಸಲು ಔಷಧಿಗಳನ್ನು ಪೂರೈಸಲಾಗುವುದು. ಹೃದಘಾತದ ಸೂಚನೆ ಬಂದರೆ ತಕ್ಷಣ ಸಂಬಂಧಿಸಿದ ಔಷಧಿ ನೀಡಿ, ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗೆ ಮೇಲ್ಮಟ್ಟದ ಆಸ್ಪತ್ರೆಗೆ ರವಾನಿಸಲಾಗುವುದು. ಎರಡು ವಾರಗಳಲ್ಲಿ ಈ ಬಗ್ಗೆ ಟೆಂಡರ್ ಕರೆದು ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 17 =
Remember me
