ಬೆಂಗಳೂರು:ಸಿಎಂ ಸಿದ್ದರಾಮಯ್ಯ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್​ ಏಕವಚನದಲ್ಲಿ ಮಾತನಾಡಿದ ವಿಚಾರಕ್ಕೆ ಇದೀಗ ಕಾಂಗ್ರೆಸ್​ ನಾಯಕರು ತೀವ್ರ ಆಕ್ರೋಶ ಹೊರಹಾಕಿದ್ದು, ವಯಸ್ಸಿನಲ್ಲಿ ಹಾಗೂ ಅನುಭವದಲ್ಲಿ ಸಿಎಂ ಅವರ ಮುಂದೆ ಅನಂತ್ ಕುಮಾರ್ ಹೆಗಡೆ ಹುಲ್ಲು ಕಡ್ಡಿಗೂ ಸಮಾನರಲ್ಲ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಮಂತ್ರಾಕ್ಷತೆ ಬದಲು ಬಡವರಿಗೆ ಅನ್ನ ಕೊಡಲಿ: ಶಿವರಾಜ್ ತಂಗಡಗಿ
“ಸಿದ್ದರಾಮಯ್ಯ ಅವರನ್ನು ಸಂಸದ ಅನಂತ್ ಕುಮಾರ್ ಹೆಗಡೆ ‘ಮಗನೇ’ ಎಂದು ಸಾರ್ವಜನಿಕವಾಗಿ ಹೀಗೆಳೆದಿದ್ದಾರೆ. ‘ಕುಲವಂ ನಾಲಗೆ ನುಡಿಯಿತು’ ಎಂಬಂತೆ ಉ.ಕನ್ನಡ ಸಂಸದರ ಸಂಸ್ಕಾರ ಅವರ ಮಾತುಗಳಲ್ಲೇ ತಿಳಿಯುತ್ತದೆ. ವಯಸ್ಸಿನಲ್ಲಿ ಹಾಗೂ ಅನುಭವದಲ್ಲಿ ಸಿದ್ದರಾಮಯ್ಯರ ಮುಂದೆ ಅನಂತ್ ಕುಮಾರ್ ಹೆಗಡೆ ಹುಲ್ಲು ಕಡ್ಡಿಗೂ ಸಮಾನರಲ್ಲ. ಶೋಷಿತ ಸಮುದಾಯದ ದ್ವನಿಯಾಗಿರುವ ಸಿದ್ದರಾಮಯ್ಯರನ್ನು ಮತಾಂಧತೆಯ ವಿಷ ತುಂಬಿಕೊಂಡಿರುವ ಹೆಗಡೆ ಏಕವಚನದಲ್ಲಿ ‘ಮಗನೇ’ ಎಂದಿರುವುದು ಅವರ ಕೊಳಕು ಮನಸ್ಥಿತಿಯ ಅನಾವರಣಗೊಳಿಸಿದೆ” ಎಂದರು.
3ಅನಂತ್ ಕುಮಾರ್ ಹೆಗಡೆಯವರೇ, ಸಾರ್ವಜನಿಕವಾಗಿ ಹೇಗೆ ಮಾತಾಡಬೇಕು ಹಾಗೂ ಹೇಗೆ ವರ್ತಿಸಬೇಕು ಎಂಬ ಕನಿಷ್ಟ ಜ್ಞಾನವನ್ನು ದಯವಿಟ್ಟು ಬೆಳೆಸಿಕೊಳ್ಳಿ.
ನಿಮ್ಮಂತೆ ಹಿಂದುತ್ವದ ಅಮಲು ತುಂಬಿಕೊಂಡಿರುವ ಕೆಲವರಿಗೆ ಮಾತ್ರ ನಿಮ್ಮ ಅಸಹ್ಯದ ಮಾತುಗಳು ರುಚಿಸಬಹುದೇನೋ.?
ಆದರೆ ಪ್ರಜ್ಞಾವಂತ ಹಿಂದೂಗಳು ಯಾವತ್ತಿಗೂ ನಿಮ್ಮ ಮಾತು ಒಪ್ಪಲಾರರು.
ಬಸವಣ್ಣ,…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao)January 13, 2024

“ಸಿದ್ದರಾಮಯ್ಯರಿಗೆ ‘ಮಗನೇ’ ಎಂದು ಸಂಬೋಧಿಸಿರುವ ಅನಂತ್ ಕುಮಾರ್ ಹೆಗಡೆ ಹಿಂದೂ ಸಮಾಜದ ಕಳಂಕವಿದ್ದಂತೆ. ವಯಸ್ಸಿನಲ್ಲಿ ಹಿರಿಯರಾದವರಿಗೆ ಮರ್ಯಾದೆ ಕೊಡುವುದು ನಮ್ಮ ಹಿಂದೂ ಧರ್ಮ ಕಲಿಸಿರುವ ಸಂಸ್ಕಾರ. ಅನಂತ್ ಕುಮಾರ್ ಯಾವ ಧರ್ಮದಿಂದ ಈ ರೀತಿ ಕೊಳಕು ಭಾಷೆ ಮಾತನಾಡುವ ಸಂಸ್ಕಾರ ಕಲಿತಿದ್ದಾರೆ? ಬಾಯಿ ಬಿಟ್ಟರೆ ಹೊಡಿ, ಬಡಿ, ಕೊಚ್ಚು, ಕೊಲ್ಲು, ದ್ವೇಷ, ಸೇಡು ಎನ್ನುವ ಹೆಗಡೆಯಂತಹವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳುವಿದ್ದಂತೆ” ಎಂದಿದ್ದಾರೆ ಸಚಿವರು.
ಟೆನ್ನಿಸ್​ ಬಾಲ್​ ಕ್ರಿಕೆಟ್​ ಲೀಗ್​: ಎಂಟು ತಂಡಕ್ಕೆ ಈ ಸ್ಟಾರ್​ ನಟರೇ ಓನರ್ಸ್​​! ಇಲ್ಲಿದೆ ನೋಡಿ ಪಟ್ಟಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + twelve =
Remember me
