ಬೆಂಗಳೂರು:ಮುಂದಿನ ಆರು ತಿಂಗಳ ಒಳಗಾಗಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂಬ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಈ ವಾರದ ಅತ್ಯುತ್ತಮ ಜೋಕ್ ವ್ಯಂಗ್ಯವಾಡಿದ್ಧಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ಮಾಜಿ ಸಿಎಂ ಎಚ್​ಡಿಕೆ ಅವರು, ಈಗಾಗಲೇ ಜನರ ಮನಸ್ಸಿನಿಂದ ಗೇಟ್‌ಪಾಸ್ ಆಗಿರುವ ತಮ್ಮ ಪಕ್ಷದ ಭವಿಷ್ಯದ ಬಗ್ಗೆ ಚಿಂತಿಸಲಿ ಎಂದಿದ್ದಾರೆ.
6 ತಿಂಗಳಲ್ಲಿ ಸರ್ಕಾರ ಬೀಳುತ್ತೆ ಎಂಬ ಎಚ್​ಡಿಕೆ ಹೇಳಿಕೆ ಈ ವಾರದ ಅತ್ಯುತ್ತಮ ಜೋಕ್. H.D‌.ಕುಮಾರಸ್ವಾಮಿಯವರು ನಮ್ಮ ಸರ್ಕಾರದ ಭವಿಷ್ಯದ ಬಗ್ಗೆ ಚಿಂತಿಸುವುದು ಬಿಟ್ಟು, ಈಗಾಗಲೇ ಜನರ ಮನಸ್ಸಿನಿಂದ ಗೇಟ್‌ಪಾಸ್ ಆಗಿರುವ ತಮ್ಮ ಪಕ್ಷದ ಭವಿಷ್ಯದ ಬಗ್ಗೆ ಚಿಂತಿಸಲಿ. ಅಧಿಕಾರವಿಲ್ಲದೆ ಅತೃಪ್ತ ಆತ್ಮವಾಗಿರೋ ಎಚ್​.ಡಿ.ಕುಮಾರಸ್ವಾಮಿ ಹತಾಶೆಯಿಂದ ಸರ್ಕಾರ ಬೀಳಿಸುವ ಕನಸು ಕಾಣುತ್ತಿದ್ದಾರೆ.
3ಸ್ಥಾಪಿತ ಸರ್ಕಾರವನ್ನು ಕೆಡವುವ ಕೆಟ್ಟ ಚಾಳಿ ಆರಂಭಿಸಿದ್ದೇ BJP.ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತೆ BJP ಜೊತೆ ಮೈತ್ರಿ ಮಾಡಿಕೊಂಡ ತಕ್ಷಣವೆ HDKಗೂ ಆ ಚಾಳಿ ಅಂಟಿಕೊಂಡಂತಿದೆ.ಹೀಗಾಗಿ ಸರ್ಕಾರ ಬೀಳಿಸುವ ಮಾತನಾಡುತ್ತಿದ್ದಾರೆ. ಆದರೆ ಅದು ಸಾಧ್ಯವಾಗದ ಮಾತು‌.ಇದು ಕೊನೆಗೆ, ಸಿಗದ ದ್ರಾಕ್ಷಿ ಹುಳಿ ಎಂಬ ನರಿಯ ಕಥೆಯಂತಾಗುತ್ತದೆ.
ಇದನ್ನೂ ಓದಿ:ಗಣೇಶನ ಮೆರವಣಿಗೆ ವೇಳೆ ವಿದ್ಯುತ್​ ಅವಘಡ; ಇಬ್ಬರು ಮೃತ್ಯು
ನಮ್ಮ ಸರ್ಕಾರಕ್ಕೆ ರಾಜ್ಯದ ಜನ ನಾವು ನಿರೀಕ್ಷೆ ಮಾಡದಷ್ಟು ಸಂಪೂರ್ಣ ಜನಾದೇಶ ನೀಡಿದ್ದಾರೆ‌. ನಾವು ಪೂರ್ಣಾವಧಿ ಆಡಳಿತ ನಡೆಸುವುದು ನಿಶ್ಚಿತ. ನಾವು ಜೆಡಿಎಸ್​ನವರಂತೆ ಪರಾವಲಂಬಿ ಜೀವಿಗಳಲ್ಲ. ಇನ್ನೊಬ್ಬರ ಆಸರೆಯಲ್ಲಿ ಸರ್ಕಾರ ರಚಿಸಿಲ್ಲ. ಸ್ವಂತ ಬಲದಿಂದ ಈ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೀಗಾಗಿ ಸರ್ಕಾರ ಬೀಳಲಿದೆ ಎಂಬ ಕನಸು ತಿರುಕನ ಕ‌ನಸಷ್ಟೇ ಎಂದು ಟೀಕಿಸಿದ್ದಾರೆ.
ದೇಶದಲ್ಲಿ ಸ್ಥಾಪಿತ ಸರ್ಕಾರವನ್ನು ಕೆಡವುವ ಕೆಟ್ಟ ಚಾಳಿ ಆರಂಭಿಸಿದ್ದೇ ಬಿಜೆಪಿಯವರು. ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ತಕ್ಷಣವೆ ಕುಮಾರಸ್ವಾಮಿಯವರಿಗೂ ಆ ಚಾಳಿ ಅಂಟಿಕೊಂಡಂತಿದೆ. ಹೀಗಾಗಿ ಸರ್ಕಾರ ಬೀಳಿಸುವ ಮಾತನಾಡುತ್ತಿದ್ದಾರೆ. ಆದರೆ ಅದು ಸಾಧ್ಯವಾಗದ ಮಾತು‌. ಇದು ಕೊನೆಗೆ, ಸಿಗದ ದ್ರಾಕ್ಷಿ ಹುಳಿ ಎಂಬ ನರಿಯ ಕಥೆಯಂತಾಗುತ್ತದೆ ಎಂದು ಮಾಜಿ ಸಿಎಂ ಎಚ್​ಡಿಕೆ ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
