ಮಂಗಳೂರು:ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಪ್ರಾಸಿಕ್ಯೂಶನ್, ಕೋರ್ಟ್ ಅದೆಲ್ಲಾ ಜಡ್ಜ್ ತೀರ್ಮಾನ ಮಾಡ್ತಾರೆ. ಆದ್ರೆ, ರಾಜ್ಯಪಾಲರ ನಡೆ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಾಗಿದೆ. ಯಾವ ರೀತಿ ಪಕ್ಷಪಾತ ಮಾಡಿದ್ದಾರೆಂದು ಇಲ್ಲಿ ಸ್ಪಷ್ಟವಾಗಿದೆ ಎಂದರು.
ಇದನ್ನೂ ಓದಿ:ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್​ಗೆ ಇಂದು ಭರ್ಜರಿ ಮಟನ್ ಊಟ!
“ಮುಖ್ಯಮಂತ್ರಿಗಳಿಗೆ ಕೇವಲ 12 ಗಂಟೆಯೊಳಗೆ ತರಾತುರಿಯಲ್ಲಿ ಶೋಕಾಸ್ ನೋಟಿಸ್ ನೀಡಿದ್ದಾರೆ. ಸಿಎಂ ಯಾವುದೇ ಅಧಿಕಾರ ದುರುಪಯೋಗ ಮಾಡಿಲ್ಲ, ಭ್ರಷ್ಟಾಚಾರ ನಡೆಸಿಲ್ಲ. ಬಿಜೆಪಿಯವರು ಸುಮ್ಮನೆ ಬೊಬ್ಬೆ ಹಾಕಿ ಸುಳ್ಳನ್ನು ಸತ್ಯ ಮಾಡಲು ದೇಶದಾದ್ಯಂತ ಪ್ರಯತ್ನ ಮಾಡ್ತಿದ್ದಾರೆ. ಸುಳ್ಳನ್ನು ಸತ್ಯ ಮಾಡೋದೆ ಆರ್​ಎಸ್ಎಸ್ ಟ್ರೈನಿಂಗ್ ಆಗಿದೆ. ಯಾವ ರೀತಿ ಪ್ರಚೋದನೆ ಮಾಡಬೇಕು, ಗಲಾಟೆ ಎಬ್ಬಿಸಬೇಕು, ದಂಗೆ ಮಾಡಬೇಕೆಂಬ ತರಬೇತಿ ಕೊಡ್ತಾರೆ” ಎಂದು ಕಿಡಿಕಾರಿದರು.
“ಬಿಜೆಪಿ ಸಂಘ ಪರಿವಾರದಲ್ಲಿ ಇದಕ್ಕೆಂದೆ ತರಬೇತಿ ಇರುತ್ತದೆ. ಇದರಲ್ಲಿ ನಮಗೆ ಯಾವುದೇ ಭಯಭೀತಿ ಇಲ್ಲ. ಮುಖ್ಯಮಂತ್ರಿಗಳ ನಡೆ ಬಹಳ ಸ್ಪಷ್ಟವಾಗಿದೆ. ಅವರು ಯಾವುದೇ ರೀತಿಯ ತಪ್ಪು ಮಾಡಿಲ್ಲ. ರಾಜ್ಯಪಾಲರು ಯಾವ ರೀತಿ ಈ ತೀರ್ಮಾನಕ್ಕೆ ಬಂದರು? ಅವರ ಉದ್ದೇಶವೇನು, ಎಲ್ಲವೂ ಒಂದು ಷಡ್ಯಂತ್ರ ಎಂಬುದು ಸ್ಪಷ್ಟವಾಗಿದೆ. ರಾಜ್ಯಪಾಲರು ಸರ್ಕಾರದ ಸಾಂವಿಧಾನಿಕ ಮುಖ್ಯಸ್ಥರು. ಅವರೇ ಸರ್ಕಾರದ ವಿರುದ್ಧ ಷಡ್ಯಂತ್ರದಲ್ಲಿ ಭಾಗಿಯಾದರೆ ಏನೆಂದು ಕರೆಯೋದು” ಎಂದರು.
ಐಪಿಎಲ್ ಹರಾಜಿನಲ್ಲಿ ಫಾಫ್ ಡುಪ್ಲೆಸಿಸ್ ಉಳಿಸಿಕೊಳ್ಳಲ್ಲ RCB! ಅದಕ್ಕೆ ಈ ಮೂರು ಅಂಶಗಳೇ ಕಾರಣ

ಅಬ್ಬಾ! ಎಂತಹ ಜಾಗದಲ್ಲಿ ಅಡಗಿದೆ MH370 ವಿಮಾನ: ನಿಗೂಢ ನಾಪತ್ತೆ ಕೇಸ್​ ಬಗೆಹರಿದಿದೆ ಎಂದ ವಿಜ್ಞಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 20 =
Remember me
