ಬೆಂಗಳೂರು:ಕೇಂದ್ರ ಸರ್ಕಾರ(Central Government)ಕ‌ನ್ನಡಿಗರಿಗೆ ಅಕ್ಕಿ ನೀಡದೆ ದ್ವೇಷ ಸಾಧಿಸುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್(Dinesh Gundurao)ಟ್ವೀಟ್ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಬೆಳಗ್ಗಿನಿಂದಲೇ ಚುರುಕುಗೊಂಡ ಮುಂಗಾರು; ಬೆಂಗಳೂರು, ಕರಾವಳಿ ಸೇರಿ ರಾಜ್ಯದಾದ್ಯಂತ ಭಾರಿ ಮಳೆ ಮುನ್ಸೂಚನೆ
“ಕ‌ನ್ನಡಿಗರಿಗೆ ಅಕ್ಕಿ ನೀಡದೆ ದ್ವೇಷ ಸಾಧಿಸುತ್ತಿರುವ ಕೇಂದ್ರದ ದ್ವೇಷ ರಾಜಕಾರಣದ ವಿರುದ್ಧ ಇಂದು ರಾಜ್ಯ ಕಾಂಗ್ರೆಸ್(State Congress)ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಯಲ್ಲಿ ಕನ್ನಡಿಗರೆಲ್ಲರೂ ಪಾಲ್ಗೊಳ್ಳುವ ಮೂಲಕ ನಮ್ಮ ಆಸ್ಮಿತೆ ಮತ್ತು ಸ್ವಾಭಿಮಾನದ ಪ್ರದರ್ಶನ ಮಾಡೋಣ. ಕನ್ನಡಿಗರ ಮೇಲಿನ‌ ಕೇಂದ್ರ ಬಿಜೆಪಿ ಸರ್ಕಾರದ ದೌರ್ಜನ್ಯ ಖಂಡಿಸೋಣ” ಎಂದು ಟ್ವೀಟ್(Tweet)ಮಾಡಿದ್ದಾರೆ.
ಇದನ್ನೂ ಓದಿ:ನವೀನ್ ಮೃತದೇಹ ತರಲು ಪ್ರಯಾಸ, ಖಚಿತಪಡಿಸದ ವಿದೇಶಾಂಗ ಸಚಿವಾಲಯ..
“ಕೇಂದ್ರದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕನ್ನಡಿಗರನ್ನು ಮಲತಾಯಿ ಮಕ್ಕಳಂತೆ ಉಪಚರಿಸುತ್ತಿದೆ. 2019ರಲ್ಲಿ ರಾಜ್ಯದ ಜನ 25 ಬಿಜೆಪಿ ಸಂಸದರನ್ನು ಆರಿಸಿ ಕಳಿಸಿದ್ದರು. ಆದರೂ ಉಪಕಾರ ಸ್ಮರಣೆ ಇಲ್ಲದ ಮೋದಿ ಸರ್ಕಾರ ರಾಜ್ಯದ ಕಣ್ಣಿಗೆ ಸುಣ್ಣ ಸವರುತ್ತಲೇ ಇದೆ. ಈಗ ಅಕ್ಕಿ ನೀಡದೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ಎಷ್ಟು ದಿನ ಈ ತಾರತಮ್ಯ?” ಎಂದು ಟ್ವೀಟ್ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಮೆರಿಕಕ್ಕೆ ತೆರಳಿದ ಪ್ರಧಾನಿ ಮೋದಿ: ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಲಿದೆ ನಮೋ ಪ್ರವಾಸ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 12 =
Remember me
