ಬೆಂಗಳೂರು:ರಾಜ್ಯದ ಅಧಿಕೃತ ವಿರೋಧ ಪಕ್ಷವಾದ BJP ವಿಪಕ್ಷ ನಾಯಕನನ್ನೇ ಆಯ್ಕೆ ಮಾಡಿಲ್ಲ. ಒಂದು ಸೋಲು ವಿಪಕ್ಷ ನಾಯಕನನ್ನೂ ಆಯ್ಕೆ ಮಾಡದಷ್ಟು ಬಿಜೆಪಿ ನಾಯಕರಿಗೆ ಜಿಗುಪ್ಸೆ ಹುಟ್ಟಿಸಿದೆಯೇ ಎಂದು ಸಚಿವ ದಿನೇಶ್​​ ಗುಂಡುರಾವ್​​ ವಾಗ್ದಾಳಿ ನಡೆಸಿದ್ಧಾರೆ.
ಕಾಂಗ್ರೇಸ್​ ಸರ್ಕಾರದ ಪ್ರಥಮ ಬಜೆಟ್ ಅಧಿವೇಶನ ನಾಳೆಯಿಂದ ಪ್ರಾರಂಭವಾಗಲಿದೆ. ಅಧಿವೇಶನ ಶುರುವಾಗುತ್ತಿದ್ದರೂ ರಾಜ್ಯದ ಅಧಿಕೃತ ವಿರೋಧ ಪಕ್ಷವಾದ ಬಿಜೆಪಿಯು ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ಒಂದು ಸೋಲು ಬಿಜೆಪಿ ನಾಯಕರಿಗೆ ಜಿಗುಪ್ಸೆ ಹುಟ್ಟಿಸಿದೆಯೇ, ವಿಪಕ್ಷ ನಾಯಕನಿಲ್ಲದೆ ಅಧಿವೇಶನ ‌ನಡೆಸಬೇಕೇ ಎಂದು ಸಚಿವರು ಬಿಜೆಪಿಗರ ಕಾಲೆಳೆದಿದ್ದಾರೆ.ಇದನ್ನೂ ಓದಿ:ಮೋಸ ನಿಲ್ಲಿಸಿ ಗ್ಯಾರಂಟಿ ಜಾರಿಗೊಳಿಸಿ ಶೀರ್ಷಿಕೆಯಡಿ ಹೋರಾಟ ಮಾಡುತ್ತೇವೆ: ಡಾ.ಸಿ.ಎನ್.ಅಶ್ವತ್ಥ ನಾರಾಯಣಮುಖ್ಯಮಂತ್ರಿಯಂತೆ ವಿರೋಧ ಪಕ್ಷ ನಾಯಕನ ಹುದ್ದೆಯೂ ಸಾಂವಿಧಾನಿಕ ಹುದ್ದೆಯಾಗಿದೆ. ಚುನಾವಣೆಯ ನಂತರ ಸಿಎಂ ಆಯ್ಕೆ ವಿಚಾರದಲ್ಲಿ ಬಿಜೆಪಿಯವರು, ರಾಜ್ಯದ ಸಿಎಂ ಯಾರು ಎಂದು ಪದೇ ಪದೇ ಕೇಳುತ್ತಿದ್ದರು. ನಮ್ಮಲ್ಲಿ ಸಿಎಂ, ಡಿಸಿಎಂ ಜತೆಗೆ ಪೂರ್ಣಪ್ರಮಾಣದ ಸಂಪುಟವೂ ರಚನೆಯಾಗಿದೆ. ರಾಜ್ಯದ ವಿಪಕ್ಷ ನಾಯಕ ಯಾರು? ಎಂದು ಗುಂಡುರಾವ್​​ ಬಿಜೆಪಿಗರಿಗೆ ಸವಾಲ್​ ಎಸೆದಿದ್ದಾರೆ.
ವಿಪಕ್ಷ ನಾಯಕ ಯಾರಾಗಬೇಕೆಂಬುದು ಬಿಜೆಪಿಯ ಆಂತರಿಕ ವಿಚಾರ ಇರಬಹುದು. ಆದರೆ ಸಂವಿಧಾನದಲ್ಲಿ ವಿಪಕ್ಷ ನಾಯಕನ ಹುದ್ದೆಗೆ ಮಹತ್ವದ ಸ್ಥಾನವಿದೆ. ಸರ್ಕಾರದ ತಪ್ಪು ಒಪ್ಪುಗಳನ್ನು ತಿದ್ದಿ ತೀಡುವುದು ವಿಪಕ್ಷ ನಾಯಕನ ಕೆಲಸವಾಗಿದ್ದು, ಇದೇ ಪ್ರಜಾಪ್ರಭುತ್ವದ ನಿಜವಾದ ಸೌಂದರ್ಯವಾಗಿದೆ. ಬಿಜೆಪಿಯವರ ಆಂತರಿಕ ಜಗಳ ಏನೇ ಇರಲಿ, ಮೊದಲು ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಿ ಎಂದು ಸಚಿವರು ಟ್ವೀಟ್​​ ಮಾಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − seven =
Remember me
