ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ಹೊಸ ತಿರುವು ಮೂಡಿದೆ. ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ, ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಪೊಲೀಸರಿಗೆ ನೀಡಿದ್ದ ದೂರನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ.
ಹೌದು, ತಮ್ಮ ವಕೀಲರ ಸಲಹೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ದೂರು ಹಿಂಪಡೆಯುತ್ತಿರುವುದಾಗಿ ವಕೀಲ ಕುಮಾರ್ ಪಾಟೀಲ್ ಅವರಿಗೆ ಪತ್ರ ರವಾನಿಸಿದ್ದಾರೆ. ಕಬ್ಬನ್ ಪಾರ್ಕ್​ ಪೊಲೀಸ್​ ಠಾಣೆಗೆ ತೆರಳಿ ದಿನೇಶ್ ಪರ ವಕೀಲರು ದೂರು ವಾಪಸ್ ಪಡೆಯುವುದಾಗಿ ಪೊಲೀಸರಿಗೆ ತಿಳಿಸಿದ್ಧಾರೆ. ‘ದೂರಿನಲ್ಲಿ ತಾಂತ್ರಿಕ ದೋಷ ಇದ್ದಿದ್ದರಿಂದ ವಾಪಸ್ ಪಡೆದಿದ್ದೇವೆ. ಈ ಬಗ್ಗೆ ದಿನೇಶ್ ಅವರೇ ಮಾಧ್ಯಮಗಳಿಗೆ ಸ್ಪಷ್ಟನೆ ಕೊಡಲಿದ್ದಾರೆ’ ಎಂದು ಕುಮಾರ್ ಪಾಟೀಲ್ ತಿಳಿಸಿದ್ದಾರೆ.
ಆದರೆ, ಪೊಲೀಸ್ ಮೂಲಗಳು ಹೇಳುವ ಪ್ರಕಾರ, ಠಾಣಾ ಮಟ್ಟದಲ್ಲಿ ನೀಡಿದ ದೂರನ್ನು ವಾಪಸ್ ಪಡೆಯಲು ಸಾಧ್ಯವಿಲ್ಲ. ಈಗಾಗಲೇ ಸಂತ್ರಸ್ತ ಯುವತಿಯನ್ನು ಪತ್ತೆ ಮಾಡಲಾಗಿದ್ದು, ಎಫ್​ಐಆರ್​ ದಾಖಲಿಸುವ ಹಂತಕ್ಕೆ ಬಂದು ನಿಂತಿದ್ದೇವೆ. ಈ ಹಂತದಲ್ಲಿ ದೂರು ವಾಪಸ್ ಪಡೆಯಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ವಿರುದ್ಧ ದೂರು ನೀಡಲು ಮುಂದಾದ ದಿನೇಶ್​ ಕಲ್ಲಹಳ್ಳಿ?
‘ನೌಕರಿ ಕೊಡಿಸುವುದಾಗಿ ಯುವತಿಗೆ ವಂಚಿಸಿ, ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೂ ಆಕೆಗೆ ಮತ್ತು ಆಕೆಯ ಕುಟುಂಬದವರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಆರೋಪಿಸಿ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಗೆ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು.
ಇದರ ಬೆನ್ನಲ್ಲೇ ದಿನೇಶ್ ಕಲ್ಲಹಳ್ಳಿ ಅಶ್ಲೀಲ ವಿಡಿಯೋವನ್ನೂ ಬಿಡುಗಡೆ ಮಾಡಿದ್ದರು. ಇದರಿಂದ ಸಚಿವ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್  ಇದೀಗ ಉಲ್ಟಾ ಹೊಡೆದಿರುವುದು ಜನರಲ್ಲಿ ಆಶ್ಚರ್ಯ ಮೂಡಿಸಿದೆ.
ಪಾಕಿಸ್ತಾನದಲ್ಲಿ ಒಂದೇ ಕುಟುಂಬದ ಐವರು ಹಿಂದುಗಳ ಹತ್ಯೆ: ಬೆಚ್ಚಿಬಿದ್ದ ಸ್ಥಳೀಯ ನಿವಾಸಿಗಳು

ಬಿಜೆಪಿ ಸೇರಿದ ಬಾಲಿವುಡ್ ಹೀರೋ ಮಿಥುನ್ ಚಕ್ರವರ್ತಿ: ಬಂಗಾಳ ಬಿಜೆಪಿಗೆ ಆನೆಬಲ

ವೈರಲ್ ವಿಡಿಯೋ: ಮನೆಯಂಗಳದಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಕರಿ ಚಿರತೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 4 =
Remember me
