ಬೆಂಗಳೂರು:ಹಿರಿಯ ನಾಗರಿಕರು ಇನ್ನು ದೇವಸ್ಥಾನದಲ್ಲಿ ನೇರವಾಗಿಯೇ ದರ್ಶನ ಪಡೆಯಬಹುದು. ಅರ್ಥಾತ್, ಅವರು ಇನ್ನು ದೇವರ ದರ್ಶನಕ್ಕಾಗಿ ಕಾಯಬೇಕಾಗಿಲ್ಲ. ಈ ಕುರಿತು ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಆದೇಶವನ್ನು ಹೊರಡಿಸಿದೆ.
ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳು ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದಕ್ಕೆ ತುಂಬಾ ತೊಂದರೆ ಆಗುತ್ತದೆ. ಹೀಗಾಗಿ ವಯಸ್ಸಿನ ಆಧಾರದ ಮೇಲೆ ಸಾಲಿನಲ್ಲಿ ನಿಲ್ಲಿಸದೆ ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಜುಲೈ 1ರಂದು ಅನ್ನಭಾಗ್ಯ ಯೋಜನೆ ಜಾರಿ ಅನುಮಾನ: ಸಿಎಂ ಸಿದ್ದರಾಮಯ್ಯ
ಹಿರಿಯ ನಾಗರಿಕರಿಗೆ ದೇವರ ದರ್ಶನಕ್ಕೆ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟವಾಗಿರುವುದರಿಂದ 65 ವರ್ಷ ಮೇಲ್ಪಟ್ಟವರಿಗೆ ಶೀಘ್ರ ದರ್ಶನಕ್ಕೆ ಪ್ರತ್ಯೇಕ ಅಗತ್ಯ ವ್ಯವಸ್ಥೆ ಮಾಡಬೇಕು. ಹಿರಿಯ ನಾಗರಿಕರು ಅವರ ವಯಸ್ಸಿನ ಕುರಿತು ದಾಖಲೆ ಇಲ್ಲವೇ ಆಧಾರ್​ ಕಾರ್ಡ್ ತೋರಿಸಿದಲ್ಲಿ ಅವರಿಗೆ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಬೇಕು. ದೇವಾಲಯದಲ್ಲಿ ಸ್ಥಳಾವಕಾಶ ಇದ್ದಲ್ಲಿ ಹಿರಿಯ ನಾಗರಿಕರಿಗೆಂದೇ ಪ್ರತ್ಯೇಕ ಸ್ಥಳ ಕಾಯ್ದಿರಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:ಅನಗತ್ಯವಾಗಿ ಮಹಾಪ್ರಾಣ ಪ್ರಯೋಗಿಸಬೇಡಿ..: ನಟ ಜಗ್ಗೇಶ್​ಗೆ ‘ಮೇಷ್ಟ್ರ’ ಕನ್ನಡ ಪಾಠ!
ದೇವಾಲಯಗಳಲ್ಲಿ ಹಿರಿಯ ನಾಗರಿಕರ ಸಹಾಯ ಕೇಂದ್ರ ಸ್ಥಾಪಿಸಿ ಹಿರಿಯ ನಾಗರಿಕರಿಗೆ ಸಹಕರಿಸಿ ಸೂಕ್ತ ವ್ಯವಸ್ಥೆ ಕಲ್ಪಿಸುವುದು. ಸದರಿ ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಯನ್ನು ನಿಯೋಜಿಸಿ ಹಿರಿಯ ನಾಗರಿಕರಿಗೆ ತ್ವರಿತ ದರ್ಶನ ಏರ್ಪಡಿಸಲು ಕ್ರಮ ಕೈಗೊಳ್ಳುವುದಕ್ಕೂ ಸೂಚನೆ ನೀಡಲಾಗಿದೆ.
30 ದಿನ ರಜೆ ಕೊಡಿ, ಇಲ್ಲಂದ್ರೆ ಒತ್ತಡದಲ್ಲಿ ಏನಾದ್ರೂ ಆದ್ರೆ ನೀವೇ ಜವಾಬ್ದಾರಿ: ಎಸ್​ಪಿಗೆ ಡಿವೈಎಸ್​ಪಿ ಪತ್ರ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − three =
Remember me
