ನವದೆಹಲಿ:ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಬಗ್ಗೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು​ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ. 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಮತ್ತು ಹಾಸಿಗೆ ಬಿಟ್ಟು ಎದ್ದೇಳಲು ಸಾಧ್ಯವಾಗದವರು, ಗಂಭೀರ ಖಾಯಿಲೆಯಿಂದ ಬಳಲುತ್ತಿರುವವರು ಮನೆಯಿಂದಲೇ ಈ ಬಾರಿ ಮತದಾನ ಮಾಡಬಹುದಾಗಿದೆ.
ಇದನ್ನೂ ಓದಿ:ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್​: ಮಾಜಿ ಸಿಎಂ ಸಿದ್ದು ಹೇಳಿಕೆ
ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದಾರೆ. ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದು, 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
