ಬೆಂಗಳೂರು: ಕರೊನಾ ಸೋಂಕಿತರ ಡಿಸ್ಚಾರ್ಜ್ ಸಂಬಂಧ ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದ ಶಿಷ್ಟಾಚಾರ ಆಧರಿಸಿ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ರೋಗಿಯನ್ನು 14 ದಿನಗಳ ಬದಲಿಗೆ 10 ದಿನಗಳಲ್ಲಿ ಬಿಡುಗಡೆ ಮಾಡಬಹುದಾಗಿದೆ ಎಂದು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್ ಸುತ್ತೋಲೆ ಹೊರಡಿಸಿದ್ದಾರೆ. ಸೋಂಕಿತ ರೋಗಿ ಬಿಡುಗಡೆ ಹೊಂದುವ 3 ದಿನಗಳ ಮುಂಚಿತವಾಗಿ ಯಾವುದೇ ರೋಗ ಲಕ್ಷಣಗಳನ್ನು ಹೊಂದಿರಬಾರದು. ಬಿಡುಗಡೆಗೂ ಮುನ್ನ ಆರ್​ಟಿ-ಪಿಸಿಆರ್ ಪರೀಕ್ಷೆ ಮಾಡಬೇಕು. ವರದಿಯಲ್ಲಿ ನೆಗೆಟಿವ್ ಬಂದರೆ ಡಿಸ್ಚಾರ್ಜ್ ಮಾಡಬಹುದು. ಇಲ್ಲವೆ ಪರೀಕ್ಷೆ ನಡೆಸಿದ 72 ಗಂಟೆಗಳ ಬಳಿಕ ಮತ್ತೊಂದು ಪರೀಕ್ಷೆ ನಡೆಸಿ ನೆಗೆಟಿವ್ ಬಂದರೆ ಬಿಡುಗಡೆ ಮಾಡಬಹುದು.
ರೋಗ ಲಕ್ಷಣ ರಹಿತ (ಎ-ಸಿಂಪ್ಟಮ್ಯಾಟಿಕ್) ಸೋಂಕಿತರಿಗೆ: ಗುಣಮುಖರಾಗಿ ಕಂಡುಬಂದರೂ ಮೊದಲ ಪರೀಕ್ಷೆ ನಡೆದ 7 ದಿನಗಳ ಬಳಿಕ ಮತ್ತೊಮ್ಮೆ ಆರ್​ಟಿ-ಪಿಸಿಆರ್ ಪರೀಕ್ಷೆ ನಡೆಸಿಯೇ ಬಿಡುಗಡೆ ಮಾಡಬೇಕು. ಇವರಿಗೆ ಪುನರಾವರ್ತಿಕ ಪರೀಕ್ಷೆ ನಡೆಸುವುದು ಕಡ್ಡಾಯ. ಬಿಡುಗಡೆ ಹೊಂದಿದ ಎಲ್ಲ ರೋಗಿಗಳಿಗೆ 14 ದಿನ ಹೋಮ್ ಕ್ವಾರಂಟೈನ್​ನಲ್ಲಿ ಇರುವಂತೆ ಸೂಚಿಸಬೇಕೆಂದು ತಿಳಿಸಿದ್ದಾರೆ.
ತನ್ನ ದೇಶದ ನರಿಬುದ್ಧಿಯ ವಿರುದ್ಧವೇ ತಿರುಗಿಬಿದ್ದ ಚೀನಾ ಜನತೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − five =
Remember me
