ಮೈಸೂರು:ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಮಟ್ಟದ ಮಳೆ ಆಗಿಲ್ಲ. ಆದ್ದರಿಂದ ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸಂಕಷ್ಟ ಸೂತ್ರವನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳೆರಡು ಪಾಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾವೇರಿ ನದಿ ಅಚ್ಚುಕಟ್ಟು ಪ್ರದೇಶದ ಜಲಾಶಯಗಳಲ್ಲಿ ನೀರಿಲ್ಲ. ಆದಾಗ್ಯೂ ತಮಿಳುನಾಡು ಸರ್ಕಾರವು ಕಾವೇರಿ ನದಿ ನೀರು ಬಿಡುವಂತೆ ಮತ್ತೆ ಕ್ಯಾತೆ ಆರಂಭಿಸಿದೆ. ಈ ಬಗ್ಗೆ ನಮ್ಮ ತಜ್ಞರ ಜತೆಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.
ತನಿಖೆಯಾಗದೆ ಬಿಲ್ ಬಿಡುಗಡೆ ಇಲ್ಲ:ಈ ಹಿಂದಿನ ಸರ್ಕಾರ ನಡೆಸಿದ ಕಾಮಗಾರಿಗಳಲ್ಲಿ ಶೇ.40 ಲಂಚದ ಕಮಿಷನ್ ಬಗ್ಗೆ ತನಿಖೆಯಾಗದೆ ಗುತ್ತಿಗೆದಾರರ ಬಿಲ್ ಬಿಡುಗಡೆ ಮಾಡಲು ಹೇಗೆ ಸಾಧ್ಯ? ಈ ಕುರಿತು ತನಿಖೆ ಪ್ರಗತಿಯಲ್ಲಿದೆ. ತಪ್ಪು ಮಾಡದೆ ಇರುವವರಿಗೆ ಬಿಲ್​ನಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ. ತಪ್ಪು ಮಾಡಿರುವವರಿಗೆ ಆ ಬಗ್ಗೆ ಭಯ ಇರುತ್ತದೆ ಎಂದರು. ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿಗಾಗಿ ಒಂದು ಸಮಿತಿ ಮಾಡಲಾಗಿದೆ. ಶಾಸಕರಿಗೂ ಇದರಲ್ಲಿ ಸ್ಥಾನ ಕೊಡಬೇಕಿದೆ. ಯಾವ ಅನುಪಾತದಲ್ಲಿ ಇದನ್ನು ಹಂಚಿಕೆ ಮಾಡಬೇಕು ಎಂಬ ಬಗ್ಗೆ ಸಮಿತಿ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬಿಜೆಪಿಯವರಂತೆ ನಾವು ಮುಂದೂಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನೋಂದಣಿ ಮುಗಿದಿಲ್ಲ:ನೋಂದಣಿ ಮುಗಿದ ಮೇಲೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು. ಈ ಯೋಜನೆಗೆ 1.33 ಕೋಟಿ ಜನರ ನೋಂದಣಿ ಆಗಬೇಕು. ಆದರೆ, ಈ ವರೆಗೂ 1.06 ಕೋಟಿ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ. ಆಗಸ್ಟ್ ಅಂತ್ಯದಲ್ಲೇ ಯೋಜನೆಗೆ ಚಾಲನೆ ನೀಡುತ್ತೇವೆ. ಯುವನಿಧಿ ಯೋಜನೆ ಡಿಸೆಂಬರ್ ನಂತರ ಜಾರಿ ಮಾಡಲಾಗುವುದು. ಪದವಿ ಮುಗಿಸಿ ಆರು ತಿಂಗಳು ಕೆಲಸ ಸಿಗದೇ ಇರುವವರಿಗೆ ನಿರುದ್ಯೋಗ ಭತ್ಯೆ ನೀಡುವುದಾಗಿ ಹೇಳಿದ್ದೇವೆ. ಡಿಸೆಂಬರ್​ಗೆ ಆರು ತಿಂಗಳು ಆಗುತ್ತದೆ. ಆದ್ದರಿಂದ ಬಹುಶಃ ಜನವರಿಯಿಂದ ಯುವ ನಿಧಿ ಜಾರಿಯಾಗುತ್ತದೆ. ಬಿಎ, ಬಿಎಸ್ಸಿ, ಬಿಕಾಂ, ಎಂಕಾಂ, ಎಂಎಸ್ಸಿ ಮುಂತಾದ ಪದವಿ ಮಾಡಿದವರಿಗೆ 3,000 ರೂ. ಮತ್ತು ಡಿಪ್ಲೋಮಾ ಮಾಡಿದವರಿಗೆ 1,500 ರೂ. ನೀಡಲಾಗುವುದು ಎಂದು ತಿಳಿಸಿದರು.
ಜನ್ಮ ದಿನದ ಬಗ್ಗೆ ಆಸಕ್ತಿ ಇಲ್ಲ:ನನ್ನ ಹುಟ್ಟುಹಬ್ಬದ ದಿನಾಂಕಗಳೇ ತಪ್ಪಾಗಿವೆ. ಹೀಗಾಗಿ ಎರಡೂ ದಿನಾಂಕಗಳು ತಪ್ಪು. ನನ್ನ ಜನ್ಮ ದಿನಾಂಕ ಕುರಿತು ನನಗೇ ಸರಿಯಾಗಿ ಗೊತ್ತಿಲ್ಲ. ಆದ್ದರಿಂದ ನನಗೆ ಆ ಬಗ್ಗೆ ಆಸಕ್ತಿಯೂ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಜನರಿಗೆ ದಕ್ಷ, ಭ್ರಷ್ಟಾಚಾರರಹಿತ ಆಡಳಿತ ನೀಡುವ ವಚನ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಪಾರದರ್ಶಕವಾಗಿ ಆಡಳಿತ ಮಾಡಲು ಬದ್ಧರಾಗಿದ್ದೇವೆ. ನಮ್ಮ ಸರ್ಕಾರದ ಯಾವುದೇ ಸಚಿವರು, ಶಾಸಕರು ಲಂಚ ಕೇಳಿಲ್ಲ. ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ.
| ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ
ಶಿಗ್ಗಾಂವಿ:ಗುತ್ತಿಗೆದಾರರಿಂದ ಕಮಿಷನ್ ಆರೋಪ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು
ಪಟ್ಟಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ಜೀರೋ ಪರ್ಸಂಟ್ ಕಮಿಷನ್ ಸರ್ಕಾರವನ್ನು ನಾವು ಕೊಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ, ಈಗ ಅವರ ಸರ್ಕಾರದಿಂದ ಬಿಡುಗಡೆಯಾಗಬೇಕಾದ ಬಿಲ್​ಗಳಿಗೂ ಕಮಿಷನ್ ಕೇಳುತ್ತಿದ್ದಾರೆ. ತನಿಖೆ ಮಾಡುತ್ತಿದ್ದೇವೆ ಎಂದು ಸಿಎಂ, ಡಿಸಿಎಂ ಸುಮ್ಮನೆ ಹೇಳುತ್ತಿದ್ದಾರೆ. ಸರ್ಕಾರದ ಕಮಿಷನ್ ಬಗ್ಗೆ ರಾಷ್ಟ್ರೀಯ ನಾಯಕರು ಮಾತನಾಡದಿರುವುದನ್ನು ಗಮನಿಸಿದರೆ ಅವರೂ ಸಹ ಕಮಿಷನ್​ನಲ್ಲಿ ಭಾಗಿಯಾದಂತೆ ಕಂಡುಬರುತ್ತದೆ ಎಂದರು.
ಬಿಜೆಪಿ ಸರ್ಕಾರದ ರೈತ ಪರ ಯೋಜನೆಗಳಿಗೆ ಸಿದ್ದರಾಮಯ್ಯ ಬ್ರೇಕ್ ಹಾಕುವ ಮೂಲಕ ರೈತ ವಿರೋಧಿ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತಪಡಿಸಿದ್ದಾರೆ. ಭೂ ಸಿರಿ, ವಿದ್ಯಾನಿಧಿ ಯೋಜನೆ, ರೈತರ ಆವರ್ತ ನಿಧಿ ಕೂಡಾ ಬಂದ್ ಮಾಡಿರುವುದು ದುರ್ದೈವದ ಸಂಗತಿ. ರೈತರ ಪರ ಯೋಜನೆಗಳಿಗಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದರು.
ರಾಹುಲ್ ಗಾಂಧಿಗೆ ಹಾಲಿವುಡ್​​ನಿಂದ ಪ್ರಪೋಸಲ್ಸ್​ ಇವೆ, ಅವರ್ಯಾಕೆ ಸ್ಮೃತಿ ಇರಾನಿಗೆ ಫ್ಲೈಯಿಂಗ್ ಕಿಸ್ ಕೊಡ್ತಾರೆ?: ಸಾರಿಕಾ ಪಾಸ್ವಾನ್
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten + eighteen =
Remember me
