ಬೆಂಗಳೂರು:ಹಕ್ಕುಪತ್ರಗಳ ವಿತರಣೆ ಪ್ರಕ್ರಿಯೆ ಮಂದಗತಿಯಲ್ಲಿ ಇರುವುದನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸರ್ಕಾರ ನಿಗದಿಪಡಿಸಿರುವ ಕಾಲಮಿತಿದೊಳಗೆ ಎಲ್ಲ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮವಹಿಸಬೇಕೆಂದು ತಾಕೀತು ಮಾಡಿದರು.
ನಗರದ ಸ್ಲಮ್​ ಬೋರ್ಡ್​ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಮಂಡಳಿಯಿಂದ ಕೊಳಗೇರಿ ನಿವಾಸಿಗಳ ಸಮೀಕ್ಷೆ ಕಾರ್ಯ ಕೈಗೊಂಡು ಈವರೆಗೆ 68,415 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ. ಮಂಡಳಿಯಿಂದ ಕೇಂದ್ರ ಪುರಸತ ಪ್ರಧಾನ ಮಂತ್ರಿ ಆವಾಸ್​ (ಸರ್ವರಿಗೂ ಸೂರು) ಯೋಜನೆಯಡಿ 1,80,253 ಮನೆಗಳ ನಿರ್ಮಾಣ ಕಾಮಗಾರಿಗಳನ್ನು ವಿವಿಧ ಕೊಳಗೇರಿ ಪ್ರದೇಶಗಳಲ್ಲಿ ಕೈಗೆತ್ತಿಕೊಂಡು ಅನುಷ್ಠಾನ ಮಾಡಲಾಗುತ್ತಿದೆ. ಹಕ್ಕುಪತ್ರ ವಿತರಣೆಯಲ್ಲಿ ವಿಳಂಬವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಿಎಂ ಸಿದ್ದರಾಮಯ್ಯ ಅವರು ಮಾ.2ರಂದು 36,789 ಮನೆಗಳನ್ನು ಬೆಂಗಳೂರಿನ ಫಲಾನುಭವಿಗಳಿಗೆ ಹಂಚಿಕೆ ಮಾಡಿದ್ದಾರೆ. ಜುಲೈ ಅಂತ್ಯದೊಳಗೆ 34,744 ಮನೆಗಳ ಕಾಮಗಾರಿ ಪೂರ್ಣಗೊಳಿಸಬೇಕು. ಬರುವ ದಿನಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷ ಕಾರ್ಯಕ್ರಮದ ಮೂಲಕ ಈ ಮನೆಗಳನ್ನು ಮುಖ್ಯಮಂತ್ರಿಯವರ ಅಮೃತ ಹಸ್ತದಿಂದ ಲೋಕರ್ಪಾಣೆ ಮಾಡುವ ಗುರಿ ಹೊಂದಿದ್ದೇವೆ. ಆದ್ದರಿಂದ, ಸದರಿ ಕಾಮಗಾರಿಗಳನ್ನು ತ್ವರಿತವಾಗಿ ಚುರುಕುಗೊಳಿಸಬೇಕು ಎಂದು ವಿಭಾಗ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಆಯುಕ್ತ ಡಾ. ಡಿ.ಆರ್​. ಅಶೋಕ್​, ಮುಖ್ಯ ಇಂಜಿನಿಯರ್​ ಎನ್​.ಪಿ. ಬಾಲರಾಜು, ಹಿರಿಯ ಅಧಿಕಾರಿಗಳು, ಮಂಡಳಿ ನಿರ್ದೇಶಕರು, ಸದಸ್ಯರು ಸೇರಿ ಮತ್ತಿತರರಿದ್ದರು.
ದರ್ಶನ್ ಖಾಕಿ ಕಸ್ಟಡಿಗೆ, ಪವಿತ್ರಾ ಜೈಲಿಗೆ
ಗುತ್ತಿಗೆದಾರರಿಗೆ ನೋಟಿಸ್​ಕಾಮಗಾರಿಗಳನ್ನು ಟೆಂಡರ್​ ಕರಾರಿನಂತೆ ನಿಗದಿತ ಅವಧಿಯೊಳಗೆ ನಿರ್ವಹಿಸಲು ವಿಳಂಬ ಮಾಡುತ್ತಿರುವ ಗುತ್ತಿಗೆದಾರರ ವಿರುದ್ಧ ನೋಟೀಸ್​ ಜಾರಿ ಮಾಡಲು ಹಾಗೂ ಕಾಮಗಾರಿಗಳನ್ನು ನಿರ್ವಹಿಸುವಲ್ಲಿ ವಿಫಲವಾಗುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವುದಾಗಿ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ. ವಿಳಂಬ ಮಾಡದೇ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳ ಕಾಮಗಾರಿಗಳನ್ನು ಶ್ರೀ ಪೂರ್ಣಗೊಳಿಸಬೇಕು. ಡಿಸೆಂಬರ್​ ಅಂತ್ಯದೊಳಗೆ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ ಕ್ರಮವಹಿಸಲು ಮಂಡಳಿ ಆಯುಕ್ತರಿಗೆ ಸೂಚಿಸಿದರು. ಮಂಡಳಿ ಸ್ಥಾಪನೆಯಾಗಿ ಅಂದಾಜು 50 ವರ್ಷ ಕಳೆದಿವೆ. ಮಂಡಳಿಯಿಂದ ಅನುಷ್ಠಾನಗೊಳ್ಳುತ್ತಿರುವ ವಸತಿ ಯೋಜನೆಗಳು ಮತ್ತು ಅಭಿವೃದ್ಧಿ ಕಾಮಗಾರಿಗಳ ಕಾರ್ಯಕ್ರಮವನ್ನು ಕೊಳಗೇರಿ ನಿವಾಸಿಗಳಿಗೆ ಪಾರದರ್ಶಕವಾಗಿ ತಲುಪಿಸುವ ನಿಟ್ಟಿನಲ್ಲಿ ಮಂಡಳಿಯ ಎಲ್ಲಾ ಕಾರ್ಯಚಟುವಟಿಕೆಗಳನ್ನು ಗಣಕೀಕರಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 − eight =
Remember me
