
ಬೆಂಗಳೂರು:ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ನಡೆಸುವ ಮೂಲಕ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಲು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಮುಂದಾಗಿದ್ದಾರೆ.
ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಂಘಟನೆ ಮಾಡಿದ ರೀತಿಯಲ್ಲಿಯೇ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಬೇಕಾದರೆ, ಅದಕ್ಕಾಗಿ ಈಗಿನಿಂದಲೇ ತಯಾರಿ ಮಾಡಬೇಕು ಎನ್ನುವ ನಿಟ್ಟಿನಲ್ಲಿ ತಯಾರಿ ಶುರು ಮಾಡುವಂತೆ ವಿಜಯೇಂದ್ರ ಅವರು ಸೂಚಿಸಿದ್ದಾರೆ.
ತಾವು ಕೂಡ ಜಿಲ್ಲಾ ಮಟ್ಟದಲ್ಲಿ ಪ್ರವಾಸ ಮಾಡಲಿದ್ದು, ಆ ಸಮಯದಲ್ಲಿ ಕಾರ್ಯಕರ್ತರ ಸಭೆಯನ್ನು ನಡೆಸುವ ಮೂಲಕ ಚುನಾವಣೆಗೆ ವೇದಿಕೆಯನ್ನು ಈಗಿನಿಂದಲೇ ಸಜ್ಜುಗೊಳಿಸಲು ಮುಂದಾಗಬೇಕು. ಅದೇ ರೀತಿ ಜಿಲ್ಲಾ ಮಟ್ಟದ ಮುಖಂಡರು, ಮಾಜಿ ಶಾಸಕರು ಮತ್ತು ಮಾಜಿ ಸಚಿವರುಗಳು ಕೂಡ ತಾಲೂಕು ಮಟ್ಟದಲ್ಲಿ ಪ್ರವಾಸ ಮಾಡುವ ಮೂಲಕ ತಾಲೂಕು ಮತ್ತು ಗ್ರಾಪಂ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು ಎಂದು ಸೂಚನೆಯನ್ನು ನೀಡಲಾಗಿದೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − seven =
Remember me
