ನವದೆಹಲಿ:ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟ ಗೆಲುವು ಸಾಧಿಸಿದ್ದು, ಪ್ರಧಾನಿಯಾಗಿ ಸತತ ಮೂರನೇ ಬಾರಿ ನರೇಂದ್ರ ಮೋದಿ ಜೂನ್‌ 9 (ಭಾನುವಾರ) ರಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅಭಿವೃದ್ಧಿಯ ಮಂತ್ರ ಜಪಿಸಿ ಗೆದ್ದು ಬೀಗಿದ ಬಿಜೆಪಿಗೆ ಹಲವು ಸೆಲೆಬ್ರೆಟಿಗಳು ಶುಭಾಶಯಗಳ ಸುರಿಮಳೆಗೈದಿದ್ದಾರೆ. ಕನ್ನಡದ ಸ್ಟಾರ್​ ನಟ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ಇದನ್ನೂ ಓದಿ:ವಿಚ್ಛೇದಿತ ಮಹಿಳೆಯೊಂದಿಗೆ 25ರ ಯುವಕನ ಲವ್ವಿ ಡವ್ವಿ: ಗರ್ಭಿಣಿ ಆದ್ಮೇಲೆ ಟೀಚರ್‌ಗೆ ಕೈಕೊಟ್ಟು ಪರಾರಿ!
3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿಗೆ ಅಭಿನಂದನೆಗಳು. ಕೌಶಲ್ಯ, ಅಭಿವೃದ್ಧಿ, ಶಿಕ್ಷಣ ಮತ್ತು ದೇಶದ ಸುರಕ್ಷತೆಯ ಕಡೆಗಿನ ನಿಮ್ಮ ಬದ್ಧತೆಗೆ ನಾವು ಧನ್ಯರು ಎಂದು ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ@narendramodiಅವರಿಗೆ ಅಭಿನಂದನೆಗಳು.
Congratulations to#Narendramodion his 3rd term as Prime Minister of India.We deeply value your dedication towards the development, education, and national safety.#PMOath#Modipic.twitter.com/NzrnlCNGmM
— Rishab Shetty (@shetty_rishab)June 9, 2024

ರಿಷಬ್​ ಪಂತ್ ಸೇರಿದಂತೆ ತಮಿಳು ನಟ ಸೂಪರ್ ಸ್ಟಾರ್ ರಜನಿಕಾಂತ್​, ಟಾಲಿವುಡ್ ನಟ ಪ್ರಿನ್ಸ್ ಮಹೇಶ್ ಬಾಬು ಕೂಡ ನರೇಂದ್ರ ಮೋದಿಗೆ ಶುಭಕೋರಿದ್ದಾರೆ.
ಇಂದು (ಜೂನ್ 09) ಸಂಜೆ 7ಗಂಟೆ 15 ನಿಮಿಷಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಕೆಲ ಪ್ರಮುಖರು ಸೇರಿದಂತೆ ತಮ್ಮ ಜೊತೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಂಭವನೀಯ ಸಚಿವಿಗೆ ಚಹಾಕೂಟ ಏರ್ಪಡಿಸಿದ್ದು, ಈ ವೇಳೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಜೆಇಇ ಅಡ್ವಾನ್ಸ್ಡ್ 2024ರ ಫಲಿತಾಂಶ ಪ್ರಕಟ: ರಿಸಲ್ಟ್​ ಇಲ್ಲಿ ಚೆಕ್ ಮಾಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
